SSP ವಿದ್ಯಾರ್ಥಿವೇತನ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ | SSP Scholarship 2024 For Post Matric Apply Online, Eligibility, Last Date

ಎಲ್ಲರಿಗೂ ನಮಸ್ಕಾರ, ಕರ್ನಾಟಕ ಸರ್ಕಾರದಿಂದ ನೀಡಲಾಗುವ SSP Scholarship 2024 ವಿದ್ಯಾರ್ಥಿವೇತನ ಪಡೆಯಬೇಕೆ? ಹಾಗಿದ್ದರೆ ಈ ಲೇಖನ ನಿಮಗಾಗಿ. ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಇತ್ಯಾದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಗಳಿಗೆ ಆರ್ಥಿಕ ಸಹಾಯ ನೀಡಲು ಸರ್ಕಾರ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಅರ್ಹ ವಿದ್ಯಾರ್ಥಿಗಳು ಸರ್ಕಾರದ SSP Scholarship ನ ಸೌಲಭ್ಯ ಪಡೆಯಬಹುದು.

SSP Post Matric Scholarship 2023-24

ಮೇಟ್ರಿಕ್‌ ನಂತರದ ಕೋರ್ಸುಗಳಾದ ಪಿಯುಸಿ, ಪದವಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಓದುತ್ತಿರುವ ಕರ್ನಾಟಕ ರಾಜ್ಯದಲ್ಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

SSP Scholarship 2024 Documents:

  1. ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ
  2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  3. ಆಧಾರ್ ಸಂಖ್ಯೆ
  4. ಮೊಬೈಲ್‌ ಸಂಖ್ಯೆ
  5. ಇ-ಮೇಲ್ ಐ.ಡಿ
  6. ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
  7. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
  8. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
  9. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
  10. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )

SSP Post Matric Scholarship For SC Students:

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ Post Matric ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವಾಗಿರುವ 20-03-2024 ರ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ.

SSP Scholarship For ST Students:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಪಂಗಡ (ST) ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-03-2024 ಆಗಿರುತ್ತದೆ.

ಇದರೊಂದಿಗೆ ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್‌ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆಯ ಅರ್ಜಿ ಸಲ್ಲಿಕೆ ದಿನಾಂಕ ಮುಕ್ತಾಯವಾಗಿದೆ.

Post Matric SSP Scholarship ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಕೆ ಲಿಂಕ್:
Apply ಮಾಡಿ
ಅಧಿಕೃತ ವೆಬ್‌ಸೈಟ್‌: ssp.postmatric.karnataka.gov.in

SSP Scholarship 2024 For Post Matric Last Date

SSP Scholarship 2024 Last Date

ಇತರೆ ಮಾಹಿತಿಗಳನ್ನು ಓದಿ

SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ

Prize Money ಅರ್ಜಿ ಸ್ಥಿತಿ ನೋಡಿ, ಹಣ ಬಂತಾ ಚೆಕ್‌ ಮಾಡಿ

ವಿದ್ಯಾಸಿರಿ ವಿದ್ಯಾರ್ಥಿ ವೇತನ: ಆನ್‌ಲೈನ್‌ ಅರ್ಜಿ ಆಹ್ವಾನ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment