Training With Scholarship: ತರಬೇತಿ ಜೊತೆಗೆ 15,000 ರೂ. ವಿದ್ಯಾರ್ಥಿವೇತನ; ಅರ್ಹರು ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ನೀವು ಕೂಡ ವಿವಿಧ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ತರಬೇತಿ (Training With Scholarship) ಪಡೆಯಲು ಬಯಸುತ್ತಿದ್ದೀರಾ..? ತರಬೇತಿಯ ಜತೆಗೆ ಶಿಷ್ಯವೇತನವನ್ನು ನೀಡುತ್ತಾರೆ. ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿವೇತನ ದೊರೆಯಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ವೃತ್ತಿಪರ ತರಬೇತಿ ಕೋರ್ಸ್ ಗಳ ತರಬೇತಿ ಜೊತೆಗೆ ವಿದ್ಯಾರ್ಥಿವೇತನವನ್ನು ನೀಡುತ್ತಾರೆ ಅರ್ಹ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್‌ ಪದವೀಧರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆದುಕೊಳ್ಳಬಹುದು.

ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ತರಬೇತಿ ನೀಡಲಾಗುತ್ತಿದ್ದು, ಒಟ್ಟು 200 ಇಂಜಿನೀಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದವರಿಗೆ ತರಬೇತಿಯ ಜೊತೆಗೆ 15,000 ರೂ. ಗಳ ಶಿಷ್ಯವೇತನ ನೀಡಲಾಗುತ್ತದೆ.

ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗಳಿಂದ ಉಚಿತವಾಗಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೇ ಕಚೇರಿಗೆ ಸಲ್ಲಿಸಬೇಕು.

Training With Scholarship ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರ ಇತರೆ ಯೋಜನೆಗಳು:

ಅನ್ನಭಾಗ್ಯ ಯೋಜನೆಯ 1,020 ರೂ. ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ

Gruhalaxmi Amount Credit Date

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment