BCM Hostel Application 2025: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಹ ವಿದ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆದುಕೊಳ್ಳಬಹುದು.
2025-26ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2A, 2B, 3A, 3B, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ:
ಪ್ರವರ್ಗ-1, ಹಾಗೂ SC/ST ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ: 2.50 ಲಕ್ಷ ರೂ ಮೀರಿರಬಾರದು.
ಪ್ರವರ್ಗ-2A, 2B, 3A, 3B, ಹಾಗೂ ಇತರೆ ಹಿಂದುಳಿದ ವರ್ಗ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ: 1ಲಕ್ಷ ರೂ ಮೀರಿರಬಾರದು.
BCM Hostel Application 2025 ಅಗತ್ಯ ದಾಖಲೆಗಳು:
- ಮೊಬೈಲ್ ನಂಬರ್
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಹಿಂದಿನ ತರಗತಿಯ ಅಂಕ ಪಟ್ಟಿ
- ವಿದ್ಯಾರ್ಥಿಯ SSP ಐಡಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಾಸಸ್ಥಳ ದೃಢೀಕರಣ ಪತ್ರ
- ಪಾಸ್ಪೋರ್ಟ್ ಗಾತ್ರದ ಇತ್ತೀಚಿನ ಭಾವಚಿತ್ರ
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-05-2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-06-2025
ಪ್ರಮುಖ ಲಿಂಕ್ಗಳು:
- ಅಧಿಸೂಚನೆ: ಡೌನ್ಲೋಡ್
- ಅರ್ಜಿ ನಮೂನೆ: Apply ಮಾಡಿ
- ಅಧಿಕೃತ ವೆಬ್ ಸೈಟ್: bcwd.karnataka.gov.in, shp.karnataka.gov.in/bcwd
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಇ-ಮೇಲ್: [email protected] ಮೂಲಕ ಅಥವಾ ಜಿಲ್ಲಾ / ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು. ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ: 8050770004/8050770005
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಪ್ರವೇಶಾತಿಗೆ ಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು https://bcwd.karnataka.gov.in/ ವೆಸ್ಟ್’ಸೈಟ್ ನಲ್ಲಿ ಪರಿಶೀಲಿಸಬಹುದು.
ಇತರೆ ಮಾಹಿತಿಗಳು:

