Gruhalakshmi Scheme: ಗೃಹಲಕ್ಷ್ಮೀ ಯೋಜನೆಯ 2,000 ರೂ. ಹಣ ಜಮಾ

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯನ್ನು ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದ್ದು, Gruhalakshmi Scheme ಯು ಜಾರಿಯಾದಾಗಿನಿಂದ ಮಹಿಳೆಯರಿಗೆ ತಿಂಗಳಿಗೆ 2,000 ರೂ. ಅನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾರೆ. ಇದರಿಂದ ಮಹಿಳೆಯರಿಗೆ ಸಾಕಷ್ಟು ಉಪಯೋಗವಾಗುತ್ತಿದೆ.

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಮೇ 20 ಕ್ಕೆ ಎರಡು ವರ್ಷ ಪೂರೈಸಿದ್ದು, ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಅವಧಿಯ ಸಾಧನೆ ಕುರಿತು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗೃಹಲಕ್ಷ್ಮೀ ಯೋಜನೆಯ ಹಣವು ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ‌ ಎಂದು‌ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದರು, ಈ ಕುರಿತಾಗಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೂರು ತಿಂಗಳಿನ‌ ಹಣವು ಮೇ ತಿಂಗಳಿನಲ್ಲಿ‌ ಹಂತ ಹಂತವಾಗಿ ಜಮಾ ಆಗಲಿದೆ ಎಂದು ಹೇಳಿದ್ದರು. ಅದರಂತೆ ಮೇ 19 ರಂದು ಒಂದು ಕಂತಿನ 2 ಸಾವಿರ ರೂ ಕೆಲವು ಜಿಲ್ಲೆಯ ಫಲಾನುಭವಿಗಳ ಖಾತೆಗೆ ಜಮಾ ಆಗಿರುವ ಮಾಹಿತಿ ಇದ್ದು, ಇನ್ನುಳಿದ ಜಿಲ್ಲೆಯ ಮಹಿಳೆಯರಿಗೆ ಹಂತ ಹಂತವಾಗಿ ಸಂದಾಯವಾಗಲಿದೆ.

ಗೃಹಲಕ್ಷ್ಮೀ ಯೋಜನೆಯ ಬಾಕಿ ಇರುವ ಮೂರು ಕಂತುಗಳ ಹಣದಲ್ಲಿ ಈಗಾಗಲೇ ಒಂದು ಕಂತಿನ‌ ಹಣವು ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿದ್ದು, ಇನ್ನುಳಿದ ಎರಡು ಕಂತಿನ ಹಣವು ಯಾವಾಗ ಫಲಾನುಭವಿಗಳ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳೆಯರು ಕಾಯುತ್ತಿದ್ದಾರೆ.

ಗೃಹಲಕ್ಷ್ಮೀ ಯೋಜನೆ (Gruhalakshmi Scheme) ಯ 2,000 ರೂ. ಹಣವು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ ಎಂಬುದನ್ನು DBT Status ಚೆಕ್ ಮೂಲಕ ಚೆಕ್ ಮಾಡಿಕೊಳ್ಳಬಹುದು.

BCM Hostel Application 2025: ಆನ್‌ಲೈನ್ ಅರ್ಜಿ ಆಹ್ವಾನ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment