ಎಲ್ಲರಿಗೂ ನಮಸ್ಕಾರ, ರಾಜ್ಯದಲ್ಲಿ ಅವಧಿಗೆ ಮುನ್ನವೇ ಮುಂಗಾರು ಮಳೆ (Rain News) ಪ್ರಾರಂಭವಾಗಿದ್ದು, ಇದರಿಂದಾಗಿ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಹಾಗೂ ಇನ್ನು ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಯಾವ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ ಎಂಬ ಮಾಹಿತಿಯನ್ನು ನೀಡಲಾಗಿದೆ ಓದಿರಿ.
ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಶುರುವಾಗಿದ್ದು, ಮೇ 28ರ ವರೆಗೆ ಮಳೆಯಾಗುವ ಸಾಧ್ಯತೆಗಳಿವೆ. ಪೂರ್ವ ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದ ಕಾರಣದಿಂದಾಗಿ, ಕರ್ನಾಟಕ 6 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಹವಾಮಾನ ಇಲಾಖೆಯು ಈ ಕೆಳಗಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಿಸಿದೆ. ಹಾಗೂ ರಾಜ್ಯದಲ್ಲಿ ವಿವಿಧ ಕಡೆಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ವಾಯುಭಾರ ಕುಸಿತದಿಂದಾಗಿ ಮೇ. 24 ರಿಂದ 27ರ ವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಈ ಕೆಳಗಿನ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ರೆಡ್ ಅಲರ್ಟ್ ಘೋಷಿಸಿದ ಜಿಲ್ಲೆಗಳು:
- ಉತ್ತರ ಕನ್ನಡ,
- ದಕ್ಷಿಣ ಕನ್ನಡ,
- ಉಡುಪಿ,
- ಶಿವಮೊಗ್ಗ,
- ಚಿಕ್ಕಮಗಳೂರು,
- ಕೊಡಗು
ಆರೆಂಟ್ ಅಲರ್ಟ್ ಘೋಷಿಸಿದ ಜಿಲ್ಲೆಗಳು:
- ಬೆಳಗಾವಿ
- ಹಾಸನ
- ಧಾರವಾಡ
- ಚಾಮರಾಜನಗರ
ರೆಡ್ ಅಲರ್ಟ್ ಹಾಗೂ ಆರೆಂಟ್ ಅಲರ್ಟ್ ಘೋಷಿಸಿದ ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

