ಎಲ್ಲರಿಗೂ ನಮಸ್ಕಾರ, ನೀವು ಕೂಡ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? ಯಾರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು..? ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗಲಿದೆ..? ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವಾಗ..? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
2025- 26 ನೇ ಸಾಲಿನಲ್ಲಿ 10 ನೇ ತರಗತಿ ಉತ್ತೀರ್ಣರಾಗಿ 11 ಮತ್ತು 12 ನೇ ತರಗತಿ ಅದ್ಯಯನ ಮಾಡಬಯಸುವ ವಿದ್ಯಾರ್ಥಿಗಳಿಗೆ ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ವಿದ್ಯಾಧನ್ ವಿದ್ಯಾರ್ಥಿವೇತನವನ್ನು ನೀಡುತ್ತಾರೆ. ನೀವು ಕೂಡ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಉದ್ದೇಶವಾಗಿದೆ. ವಿದ್ಯಾಧನ್ ಸ್ಕಾಲರ್ಶಿಪ್ ಗೆ ಆಯ್ಕೆಯಾದ ವಿದ್ಯಾರ್ಥಿಗಳು ವರ್ಷಕ್ಕೆ ಗರಿಷ್ಠ 10,000 ರೂ. ಶಿಷ್ಯವೇತನ ದೊರೆಯಲಿದೆ.
ಅರ್ಹತೆಗಳು:
ಅರ್ಜಿದಾರರು ಕರ್ನಾಟಕದಲ್ಲಿ ನೆಲೆಸಬೇಕು.
2025 ರಲ್ಲಿ ಕರ್ನಾಟಕದಿಂದ 10 ನೇ ತರಗತಿ/ SSLC ಪರೀಕ್ಷೆಯಲ್ಲಿ ಪಾಸಾಗಿರಬೇಕು.
10th ಅಥವಾ SSLC ಪರೀಕ್ಷೆಯಲ್ಲಿ 90% ಅಂಕಗಳನ್ನು ಗಳಿಸಿರಬೇಕು ಅಥವಾ 9 CGPA ಪಡೆದಿರಬೇಕು.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಿರಬಾರದು.
ಪ್ರಯೋಜನ:
ವಿದ್ಯಾಧನ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಠ 10,000 ರೂ. ಸ್ಕಾಲರ್ಶಿಪ್ ಸಿಗಲಿದೆ.
ಅಗತ್ಯ ದಾಖಲೆಗಳು:
ಅರ್ಜಿದಾರರ ಪೋಟೋ
10th ಮಾರ್ಕ್ಸ್ ಕಾರ್ಡ್ ಸ್ಕ್ಯಾನ್ ಮಾಡಿದ ಪ್ರತಿ.
ಆದಾಯ ಪ್ರಮಾಣಪತ್ರದ ಸ್ಕ್ಯಾನ್ ಮಾಡಿದ ಪ್ರತಿ (ರೇಷನ್ ಕಾರ್ಡ್ ಅನ್ನು ಸ್ವೀಕರಿಸಲಾಗುವುದಿಲ್ಲ)
Vidyadhan Scholarship 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-05-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-07-2025
ಪ್ರಮುಖ ಲಿಂಕ್ ಗಳು:
ಅರ್ಜಿ ಸಲ್ಲಿಕೆ ಲಿಂಕ್: ಅರ್ಜಿ ಸಲ್ಲಿಸಿ
ಅಧಿಕೃತ ವೆಬ್ಸೈಟ್: www.vidyadhan.org/
How To Apply Vidyadhan Scholarship 2025: Watch Video
ಇತರೆ ಮಾಹಿತಿಗಳು:

