BMTC Bus Pass 2025: ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್, ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ, BMTC ಯಿಂದ ವಿದ್ಯಾರ್ಥಿಗಳಿಗೆ ಗುಡ್ ನೂಸ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯು ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಪಾಸ್ ಗಾಗಿ‌ (BMTC Bus Pass) ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

2025-26 ನೇ ಶೈಕ್ಷಣಿಕ ಸಾಲಿನ ಉಚಿತ ಹಾಗೂ ರಿಯಾಯಿತಿ ಪಾಸ್‌ಗಾಗಿ ವಿದ್ಯಾರ್ಥಿಗಳು ಮೇ 26 ರಿಂದ ಸೇವಾಸಿಂಧು (https://sevasindhu.karnataka.gov.in) ಪೋರ್ಟಲ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪಾಸ್‌ಗಳನ್ನು ಜೂನ್ 1 ರಿಂದ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 6:30ರ ವರೆಗೆ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬಿಎಂಟಿಸಿಯ ಕೆಂಪೇಗೌಡ ಬಸ್‌ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ, ಕೆಎಸ್‌ಆರ್‌ಟಿಸಿಯ ಆನೇಕಲ್ ಬಸ್ ನಿಲ್ದಾಣಗಳಲ್ಲಿ ಪಾಸ್‌ ಅನ್ನು ವಿತರಿಸುತ್ತಾರೆ.

ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರು ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆಯು ಒಂದಾಗಿದ್ದು, ಶಕ್ತಿ ಯೋಜನೆಯಡಿಯಲ್ಲಿ ವಿದ್ಯಾರ್ಥಿನಿಯರಿಗೆ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಇದೆ.

ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಸಹಾಯ ವಾಣಿ ಸಂಖ್ಯೆ: 080-22483777 ಸಂಪರ್ಕಿಸಬಹುದು ಎಂದು BMTC ಅಧಿಕಾರಿಗಳು ತಿಳಿಸಿದ್ದಾರೆ.

BMTC Bus Pass Online Application: Apply Online

ಗೃಹಲಕ್ಷ್ಮೀ ಯೋಜನೆಯ 2,000 ರೂ. ಹಣ ಜಮಾ

SSLC ಪಾಸಾದ ವಿದ್ಯಾರ್ಥಿಗಳಿಗೆ 10,000 ರೂ. ವಿದ್ಯಾರ್ಥಿವೇತನ

PM ಉಜ್ವಲ ಯೋಜನೆ: ಉಚಿತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಅರ್ಜಿ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment