Ration Card Cancellation: ಅನರ್ಹ ರೇಷನ್ ಕಾರ್ಡ್ ರದ್ದುಪಡಿಸಲು ರಾಜ್ಯ ಸರ್ಕಾರ ನಿರ್ಧರ

ಎಲ್ಲರಿಗೂ ನಮಸ್ಕಾರ, ಅನರ್ಹ ಪಡಿತರ ಚೀಟಿ (Ration Card Cancellation) ಹೊಂದಿರುವ ಫಲಾನುಭವಿಗಳಿಗೆ ಬ್ಯಾಡ್ ನ್ಯೂಸ್, ಅನರ್ಹ ರೇಷನ್ ಕಾರ್ಡ್ ಪತ್ತೆ ಮಾಡಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಆಹಾರ ಕಾಯ್ದೆ ಉಲ್ಲಂಘಿಸಿರುವ ಮತ್ತು ಅನರ್ಹ ರೇಷನ್ ಕಾರ್ಡ್‌ಗಳನ್ನು ಪತ್ತೆ ಹಚ್ಚಲು ಖಾಸಗಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ನಮ್ಮ ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಚೀಟಿ ಫಲಾನುಭವಿಗಳು ಇದ್ದು, ‌ಅರ್ಹತೆ ಇಲ್ಲದಿದ್ದರೂ ಸುಳ್ಳು ದಾಖಲೆಯನ್ನು ನೀಡಿ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡವರನ್ನು ಪತ್ತೆ ಹಚ್ಚಿ ಅಂತವರ ಕಾರ್ಡ್ ಗಳನ್ನು ರದ್ದುಪಡಿಸಲು ರಾಜ್ಯ ಸರ್ಕಾರ ಥರ್ಡ್ ಪಾರ್ಟಿ ಸರ್ವೇಗೆ ನಿರ್ಧರಿಸಿದೆ.

2011ರ ಜನಸಂಖ್ಯೆ ದತ್ತಾಂಶದ ಪ್ರಕಾರ 4,01,93,130 ಸ್ವೀಕೃತದಾರರ ಮಿತಿ ನಿಗದಿ ಮಾಡಲಾಗಿದೆ. ಆದರೆ, 44 ಲಕ್ಷ ಹೆಚ್ಚುವರಿ ಕಾರ್ಡ್ ಇರುವುದಾಗಿ ಹೇಳುತ್ತಿದೆ.

ರಾಜ್ಯದಲ್ಲಿ ಆದ್ಯತಾ ಕುಟುಂಬ (ಪಿಎಚ್‌ಎಚ್) ಮತ್ತು ಎಎವೈ 44 ಲಕ್ಷಕ್ಕೂ ಹೆಚ್ಚು ಇರುವುದು ಕಂಡುಬಂದಿದೆ. ರಾಜ್ಯ ಸರ್ಕಾರದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬಿದ್ದಿದೆ. ಆದರೆ ಅತಿಹೆಚ್ಚು ತೆರಿಗೆ ಸಂಗ್ರಹವಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.

ಅನರ್ಹತೆಗೆ ಮಾನದಂಡಗಳು ಈ ಕೆಳಗಿನಂತಿವೆ:

  • ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಗಿಂತ ಹೆಚ್ಚಿರುವವರು
  • 3 ಹೆಕ್ಟೇರ್ ಗಿಂತ ಹೆಚ್ಚಿನ ಭೂಮಿ ಹೊಂದಿದವರು
  • ಸರ್ಕಾರಿ, ಅನುದಾನಿತ, ಸರ್ಕಾರಿ ಸಂಯೋಜಿತ ಸಂಸ್ಥೆಗಳಲ್ಲಿನ ನೌಕರರು
  • 1 ಸಾವಿರ ಚದರಡಿ ಪಕ್ಕಾ ಮನೆ ಹೊಂದಿದವರು
  • ಆದಾಯ, ವೃತ್ತಿ ತೆರಿಗೆ, GST ಪಾವತಿದಾರರು
  • ವಾಣಿಜೇತರ ವಾಹನ ಹೊಂದಿದವರು ಅನರ್ಹರು

ಉಚಿತ ಹೊಲಿಗೆ ಯಂತ್ರ ಯೋಜನೆ 2025: ಅರ್ಜಿ ಆಹ್ವಾನ

Gruhalakshmi Scheme 2025: ಗೃಹಲಕ್ಷ್ಮಿ ಹಣ ನಿಮಗೆ ಬಂದಿಲ್ಲವೇ..?

E Khata: ಜುಲೈ 1 ರಿಂದ ಇ-ಖಾತಾ ಕಡ್ಡಾಯ: DCM ಡಿಕೆ ಶಿವಕುಮಾರ್

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment