Gruhalakshmi Pending Amount: ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೊಂದು ವಾರದಲ್ಲಿ ಬಿಡುಗಡೆ: ಸಚಿವೆ ಹೆಬ್ಬಾಳ್ಕರ್

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಬಾಕಿ ಇರುವ ಹಣ ಯಾವಾಗ ಜಮಾ (Gruhalakshmi Pending Amount) ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಇಲ್ಲಿದೆ ನಿಮಗೆ ಸಿಹಿ ಸುದ್ದಿ. ಗೃಹಲಕ್ಷ್ಮೀ ಯೋಜನೆಯ ಮೇ ತಿಂಗಳಿನ ಹಣ ಯಾವಾಗ ಬಿಡುಗಡೆ ಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಮೂಲಕ ಅರ್ಹ ಮಹಿಳೆಯರಿಗೆ ತಿಂಗಳಿಗೆ 2,000 ರೂ. ಅಂತೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣವನ್ನು ಸಂದಾಯ ಮಾಡುತ್ತಾರೆ.

ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರ ಸಭಲೀಕರಣಕ್ಕಾಗಿ ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ಈ ಯೋಜನೆಯಿಂದ ಬಂದ ಹಣದಿಂದ ಕೆಲವು ಮಹಿಳೆಯರು ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇನ್ನೂ ಕೆಲವರು ತಮ್ಮ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಹೀಗೆ ಈ ಯೋಜನೆಯಿಂದ ಬಂದ ಹಣವು ಹಲವು ರೀತಿಯಲ್ಲಿ ಜನರಿಗೆ ಉಪಯೋಗವಾಗುತ್ತಿದೆ.

ಬಾಕಿ ಉಳಿದಿರುವ ಗೃಹಲಕ್ಷ್ಮೀ ಯೋಜನೆಯ ಮೇ ತಿಂಗಳಿನ ಹಣವನ್ನು ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ಹಣವು ನಿಮಗೆ ಸಂದಾಯವಾಗದಿದ್ದರೆ ಕೂಡಲೇ ನಿಮ್ಮ ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ NPCI Failure/ E-KYC Failure ಎಂದು ಬಂದ ಕೂಡಲೇ ಅಗತ್ಯ ದಾಖಲೆಗಳಾದ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಪಾಸ್ ಬುಕ್ ಗಳನ್ನು ತೆಗೆದುಕೊಂಡು ಹೋಗಿ ಸರಿಪಡಿಸಿಕೊಳ್ಳಬಹುದು.

Prize Money Scholarship 2025

Crop Insurance 2025: ಮುಂಗಾರು ಬೆಳೆ ವಿಮೆ, ರೈತರು ಆನ್‌ಲೈನ್ ಅರ್ಜಿ ಸಲ್ಲಿಸಿ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment