ಎಲ್ಲರಿಗೂ ನಮಸ್ಕಾರ, ಪಿಎಂ ಯಶಸ್ವಿ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಸಲ್ಲಿಸಬೇಕೆ…? ಯಾರು PM Yasasvi Scholarship 2025 ಗೆ ಅರ್ಜಿ ಸಲ್ಲಿಸಬಹುದು..? ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಗಮನಿಸಿ.
PM ಯಶಸ್ವಿ ವಿದ್ಯಾರ್ಥಿವೇತನ ಯೋಜನೆಯನ್ನು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಪ್ರಾರಂಭಿಸಿದೆ. ಹಿಂದುಳಿದ ವರ್ಗಗಳು (OBC), ಆರ್ಥಿಕವಾಗಿ ಹಿಂದುಳಿದ ವರ್ಗಗಳು (EBC) ಮತ್ತು ಅಲೆಮಾರಿ ಮತ್ತು ಅರೆ-ಅಲೆಮಾರಿ ಬುಡಕಟ್ಟು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವನ್ನು ನೀಡುತ್ತಾರೆ.
ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮೆಟ್ರಿಕ್ಯುಲೇಷನ್ ಪೂರ್ವ ಅಥವಾ ಮಾಧ್ಯಮಿಕ ಹಂತದಲ್ಲಿ ಅವರ ಶಿಕ್ಷಣವನ್ನು ಬೆಂಬಲಿಸಲು ಆರ್ಥಿಕ ಸಹಾಯವನ್ನು ಪ್ರಧಾನ ಮಂತ್ರಿ ಯಶಸ್ವಿ ವಿದ್ಯಾರ್ಥಿವೇತನ ಕಾರ್ಯಕ್ರಮ ಮಾಡುತ್ತದೆ. ಈ ವಿದ್ಯಾರ್ಥಿವೇತನವು ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿರುತ್ತದೆ. ಹಾಗೂ ವಿದ್ಯಾರ್ಥಿಗಳು ಸೇರಿದ ರಾಜ್ಯ /ಕೇಂದ್ರಾಡಳಿತ ಪ್ರದೇಶದಿಂದ ಧನಸಹಾಯ ನೀಡುತ್ತಾರೆ.
ಅರ್ಹತೆಗಳು:
ಒಬಿಸಿ, ಇಬಿಸಿ ಮತ್ತು ಡಿಎನ್ ಟಿ ವಿದ್ಯಾರ್ಥಿಗಳಾಗಿರಬೇಕು.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮೀರಿರಬಾರದು.
ವಿದ್ಯಾರ್ಥಿಯು ಪ್ರಸ್ತುತ ಸರ್ಕಾರಿ ಮಾನ್ಯತೆ ಪಡೆದ ಶಾಲೆಯಲ್ಲಿ 9 ಅಥವಾ 11 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಸರ್ಕಾರಿ ಶಾಲೆಗೆ ದಾಖಲಾತಿ ಕಡ್ಡಾಯವಾಗಿದೆ.
ವೃತ್ತಿಪರ ಕೋರ್ಸ್ಗಳನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ, ಸಂಸ್ಥೆಯು ಮಾನ್ಯವಾದ ಯುಡಿಐಎಸ್ಇ (ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫರ್ಮೇಷನ್ ಸಿಸ್ಟಮ್ ಫಾರ್ ಎಜುಕೇಶನ್) ಅಥವಾ ಎಐಎಸ್ಎಚ್ಇ (ಆಲ್ ಇಂಡಿಯಾ ಸರ್ವೆ ಆನ್ ಹೈಯರ್ ಎಜುಕೇಶನ್) ಕೋಡ್ನಲ್ಲಿ ನೋಂದಾಯಿಸಿರಬೇಕು.
PM Yasasvi Scholarship 2025 ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಮಾರ್ಕ್ಸ್ ಕಾರ್ಡ್
- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ಇ-ಮೇಲ್ ಐಡಿ
- ಬ್ಯಾಂಕ್ ಪಾಸ್ ಬುಕ್
- ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ತರಗತಿ ಪ್ರವೇಶ ದಾಖಲೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-06-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-08-2025
ಇತರೆ ಮಾಹಿತಿಗಳು:

