ಗಂಗಾ ಕಲ್ಯಾಣ ಯೋಜನೆ 2023 ಆನ್‌ಲೈನ್ ಅರ್ಜಿ ಆಹ್ವಾನ, Ganga Kalyan Yojane 2023 Online Application

Telegram Group Join Now
WhatsApp Group Join Now

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆ (Ganga Kalyan Yojane 2023) ಅಡಿಯಲ್ಲಿ ಉಪ್ಪಾರ ಮತ್ತು ಇದರ ಉಪಜಾತಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ. ಈ ಯೋಜನೆಯ ಸದುಪಯೋಗವನ್ನು ರೈತರು ಪಡೆದುಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಯನ್ನು ಈ ಕೇಳಗಿನಂತೆ ನೀಡಲಾಗಿದೆ. ಸಂಪೂರ್ಣವಾಗಿ ಓದಿ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿರಿ.

ಗಂಗಾ ಕಲ್ಯಾಣ ನೀರಾವರಿ ಯೋಜನೆ (Ganga Kalyan Yojane 2023):

ಉಪ್ಪಾರ ಮತ್ತು ಇದರ ಉಪಜಾತಿಯವರು ಸಮಾಜದ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ
ಒದಗಿಸಲು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಘಟಕವೆಚ್ಚ: 2.50 ಲಕ್ಷರೂ.ಗಳಾಗಿದ್ದು, ಇದರಲ್ಲಿ ರೂ.2.00 ಲಕ್ಷಗಳ ಸಹಾಯಧನವನ್ನು ಸರ್ಕಾರ ನೀಡುತ್ತದೆ ಮತ್ತು ಹೆಚ್ಚುವರಿಯಾಗಿ ಅಗತ್ಯವಿದ್ದಲ್ಲಿ ರೂ.50,000/- ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ 3 ವರ್ಷಗಳ ಮರುಪಾವತಿ ಅವಧಿಯೊಂದಿಗೆ ನೀಡಲಾಗುತ್ತದೆ.

ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ
ಬಾವಿ ಘಟಕದ ವೆಚ್ಚ ರೂ.4. ಲಕ್ಷಗಳಾಗಿರುತ್ತದೆ. ಇದರಲ್ಲಿ ರೂ.3.50 ಲಕ್ಷಗಳ ಸಹಾಯಧನ ಮತ್ತು ಹೆಚ್ಚುವರಿಯಾಗಿ
ಅಗತ್ಯವಿದ್ದಲ್ಲಿ ರೂ.50,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ 3 ವರ್ಷಗಳ ಮರುಪಾವತಿ ಅವಧಿಯೊಂದಿಗೆ
ನೀಡಲಾಗುತ್ತದೆ.

ಭಾರತೀಯ ಸೇನೆ ಸೇರಲು ಉಚಿತ ತರಬೇತಿ

ಬೇಕಾಗುವ ದಾಖಲೆಗಳು:

  • ಆಧಾರ್ ಕಾರ್ಡ್ ಕಡ್ಡಾಯ
  • ಜಾತಿ/ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ಪಾಸ್‌ಬುಕ್‌
  • ಮತ್ತು ಇತರೆ ದಾಖಲೆಗಳು

Ganga Kalyan Yojane ಸಾಮಾನ್ಯ ಅರ್ಹತೆಗಳು ಮತ್ತು ನಿಬಂಧನೆಗಳು :

• ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮತ್ತು ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದವರಾಗಿರಬೇಕು.
• ಕೇಂದ್ರ ಆಧಾ‌ರ್ ಅಧಿನಿಯಮ, 2016 ಸೆಕ್ಷನ್ (7)ರಡಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು.
• ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
• ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

• ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
• ಸರ್ಕಾರ/ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ ನಿಬಂಧನೆಗಳನ್ನು ಹೊಂದಿದವರಾಗಿರಬೇಕು.
ವಿಶೇಷ ಸೂಚನೆ :
• ಅನುದಾನದ ಲಭ್ಯತೆಗೆ ಅನುಗುಣವಾಗಿ ಯೋಜನೆಯನ್ನು ಸೌಲಭ್ಯವನ್ನು ಸರ್ಕಾರದ ಆದೇಶ ಸಂಖ್ಯೆ:ಹಿಂವಕ 373 ಬಿ.ಎಂ.ಎಸ್ 2022 ಬೆಂಗಳೂರು ದಿ:05-07-2022ರ ನಿಯಮಗಳ ಪ್ರಕಾರ ಜಾರಿಗೊಳಿಸುವುದು.
• ಯೋಜನೆಗಳ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ, ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಗಂಗಾ ಕಲ್ಯಾಣ ನೀರಾವರಿ ಯೋಜನೆ (Ganga Kalyan Yojane) ಆನ್‌ಲೈನ್ ಅರ್ಜಿ ಸಲ್ಲಿಕೆ ವಿಧಾನ ಮತ್ತು ಅವಧಿ:

ಸೇವಾ ಸಿಂಧು ತಂತ್ರಾಂಶದ ಮುಖಾಂತರ ಫಲಾಪೇಕ್ಷಿಗಳು ದಿನಾಂಕ:17-01-2023 ರಿಂದ 02-03-2023 ರವರೆಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ .

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲೆಗಳಲ್ಲಿರುವ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ನಿಗಮದ ವೆಬ್‌ಸೈಟ್ http://upparadevelopment.karnataka.gov.in ರಲ್ಲಿ ಪಡೆಯಬಹುದಾಗಿದೆ.
• ನಿಗಮದ ಸಹಾಯವಾಣಿ (Helpline) ಸಂಖ್ಯೆ: 7026288888ಗೆ ಬೆಳಿಗ್ಗೆ 10:00 ರಿಂದ ಸಂಜೆ 5:30ರವರೆಗೆ ಸಂಪರ್ಕಿಸಬಹುದಾಗಿದೆ.

ವಿಶೇಷ ಸೂಚನೆ: ಸೇವಾ ಸಿಂಧು ತಂತ್ರಾಂಶದ ಮೂಲಕ ಮಾತ್ರವೇ ಅರ್ಜಿಗಳನ್ನು ಸಲ್ಲಿಸಬೇಕು.

ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಬಿಸಿಡಬ್ಲ್ಯೂ 861 ಬಿಎಂಎಸ್ 2022 ಬೆಂಗಳೂರು ದಿನಾಂಕ:13-01-2023ರ ಪ್ರಕಾರ ಅನುಷ್ಠಾನಗೊಳಿಸುತ್ತಿದ್ದು ಪ್ರವರ್ಗ-1ರಡಿಯಲ್ಲಿ ಬರುವ ಕ್ರಮ ಸಂಖ್ಯೆ: 53(ಎ) ಯಿಂದ 53(ವಿ) ವರೆಗಿನ

Telegram Group Join Now
WhatsApp Group Join Now

Leave a Comment