ರೇಷನ್ ಕಾರ್ಡ್‌ ಇದ್ದವರ ಖಾತೆಗೆ ಇಂದಿನಿಂದ ಹಣ ಜಮಾ | Anna Bhagya Scheme Karnataka 2023, Ration Card Karnataka

By
On:
Follow Us

Telegram Group Join Now
WhatsApp Group Join Now

Anna Bhagya Scheme Karnataka: ನೀವು ರೇಷನ್ ಕಾರ್ಡ್ ಹೊಂದಿದ್ದಿರಾ..? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್… ಸರ್ಕಾರ ಈ ಯೋಜನೆಯನ್ನು ಘೋಷಣೆ ಮಾಡಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.

ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿದೆ ಹೇಳಿದ್ದರು. ಅದರಂತೆ ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಅನ್ನಭಾಗ್ಯ ಯೋಜನೆಯಡಿ ರಾಜ್ಯದ 1.28 ಕೋಟಿ ಪಡಿತರ ಕುಟುಂಬಗಳ ಮುಖ್ಯಸ್ಥರ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಇಂದು (ಜುಲೈ 10, 2023) ಸಂಜೆ ಚಾಲನೆ ನೀಡಲಾಗುತ್ತಿದೆ.

ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಂತಾ? ಚೆಕ್‌ ಮಾಡಿ

ಯೋಜನೆಯ ಸಂಕ್ಷೀಪ್ತ ಮಾಹಿತಿ

  • ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 10 ಕೆ.ಜಿ ಆಹಾರ ಧಾನ್ಯ ಉಚಿತ
  • 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಫಲಾನುಭವಿಗೆ 170 ರೂ. ಹಣ ನೀಡಿಕೆ
  • 44.80 ಲಕ್ಷ ಅಂತ್ಯೋದಯ (ಎಎವೈ) ಹಾಗೂ 3.97 ಕೋಟಿ ಆದ್ಯತಾ ಪಡಿತರ (ಪಿಹೆಚ್‌ಹೆಚ್) ಚೀಟಿದಾರರಿಗೆ ಪ್ರಯೋಜನ
  • ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ವರ್ಗಾವಣೆ
  • ಯೋಜನೆ ಅನುಷ್ಠಾನಕ್ಕಾಗಿ ಪ್ರಸಕ್ತ ಬಜೆಟ್‌ನಲ್ಲಿ 10 ಸಾವಿರ ಕೋಟಿ ರೂ. ನಿಗದಿ
  • ಜುಲೈ ತಿಂಗಳ ನಗದು ಮೊತ್ತ ಪ್ರಸಕ್ತ ಮಾಸದೊಳಗೆ ಜಮೆ

Anna Bhagya Scheme Karnataka 2023 – Ration Card Karnataka

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ (Ration Card Karnataka) ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದರು, ಆದರೆ ಈ ಯೋಜನೆಗೆ ಬೇಕಾಗುವಷ್ಟು ಅಕ್ಕಿ ಲಭ್ಯವಿಲ್ಲದ ಕಾರಣ 5 ಕೆಜಿ ಅಕ್ಕಿ ಬದಲಿದೆ ಹಣ ನೀಡಲಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಸದ್ಯ ನೀಡಲಾಗುತ್ತಿರುವ 5 ಕೆಜಿ ಅಕ್ಕಿಯ ಜೊತೆಗೆ ಮಿಕ್ಕ ಐದು ಕೆಜಿ ಅಕ್ಕಿಗೆ ಬದಲಾಗಿ ಪ್ರತೀ ಕೆಜಿಗೆ 34 ರೂಪಾಯಿಗಳಂತೆ 170 ರೂಪಾಯಿಗಳನ್ನು ಬಿಪಿಎಲ್‌ ಕುಟುಂಬದ ಪ್ರತೀ ಸದಸ್ಯರಿಗೆ ನೀಡಲು ಇಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜುಲೈ 10 ರಿಂದ ಬಿಪಿಎಲ್ ಕಾರ್ಡಿನಲ್ಲಿ ಮನೆಯ ಮುಖ್ಯಸ್ಥ ಎಂದು ನಮೂದಿಸಿದವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಹೆಚ್ಚುವರಿಯಾಗಿ ನೀಡಲು ತೀರ್ಮಾನಿಸಿದ್ದ 5 ಕೆಜಿ ಅಕ್ಕಿಯನ್ನು ಹೊಂದಿಸಲು ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಸಮಯಬೇಕಾಗಿದೆ. ಆದ್ದರಿಂದ ಹೆಚ್ಚುವರಿ 5 ಕೆಜಿ ಅಕ್ಕಿ ಕೊಡುವವರೆಗೂ ಹಣ ನೀಡಲಾಗುತ್ತದೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ತಲಾ 170 ರೂ. ಅಂತೆ 680 ರೂ. ಸಿಗಲಿದೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಬಡವರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ.

ಸರ್ಕಾರ ಇತರೆ ಯೋಜನೆಗಳು

Gruha Lakshmi Scheme Karnataka 2023

ಗೃಹ ಲಕ್ಷ್ಮಿ ಯೋಜನೆ ಜಾರಿ ಬಗ್ಗೆ ಸಿಎಂ ಸ್ಪಷ್ಟನೆ

“ಗೃಹ ಜ್ಯೋತಿ” ಅರ್ಜಿ ಸಲ್ಲಿಸುವ ಸುಲಭ ಮಾರ್ಗ

Telegram Group Join Now
WhatsApp Group Join Now

Leave a Comment

Join Group

error: Content is protected !!