ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BEL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ: 30,000 ರಿಂದ 55,000 ರೂ.
ಉದ್ಯೋಗ ಸ್ಥಳ: ಬೆಂಗಳೂರು, ಮಚಲಿಪಟ್ಟಣಂ, ಆಂಧ್ರ ಪ್ರದೇಶ , ಹೈದರಾಬಾದ್, ತೆಲಂಗಾಣ.
ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Trainee Officer-I – 30,000 ರಿಂದ 40,000 ರೂ.
Project Officer-I – 40,000 ರಿಂದ 50,000 ರೂ.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಗರಿಷ್ಠ 28, 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Sr. Dy. General Manager (HR), Bharat Electronics Limited, Industrial Estate, Nacharam, Hyderabad, Telangana 500076 ಇವರಿಗೆ 29-04-2023 ರ ಮೊದಲು ಕಳುಹಿಸಬೇಕು.
BEL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-04-2023
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಡೌನ್ ಲೋಡ್
ಅರ್ಜಿ ನಮೂನೆ: Trainee Officer-I – ಡೌನ್‌ಲೋಡ್
ಅರ್ಜಿ ನಮೂನೆ: Project Officer-I – ಡೌನ್‌ಲೋಡ್
ಅಧಿಕೃತ ವೆಬ್ ಸೈಟ್: bel-india.in