ಜಿಲ್ಲಾ ನ್ಯಾಯಾಂಗ ನೇಮಕಾತಿ ಅಧಿಸೂಚನೆ 2023 | Belagavi District Court Recruitment 2023

ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಆದೇಶ ಜಾರೀಕಾರರು, ಮತ್ತು ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು (Belagavi District Court Recruitment) ಪ್ರಕಟಿಸಲಾಗಿದೆ. ಸರ್ಕಾರಿ ಉದ್ಯೋಗವನ್ನು ಪಡೆಯಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಆಸಕ್ತ ಹಾಗೂ‌ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕಲಬುರಗಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023

ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ನ್ಯಾಯಾಲಯ ನೇಮಕಾತಿ 2023 ಅಧಿಸೂಚನೆ

Belagavi District Court Recruitment 2023 ಸಂಕ್ಷಿಪ್ತ ವಿವರ


ನೇಮಕಾತಿ ಸಂಸ್ಥೆ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಬೆಳಗಾವಿ
ಒಟ್ಟು ಹುದ್ದೆಗಳು: 68 ಹುದ್ದೆಗಳು
ವೇತನ ಶ್ರೇಣಿ: 27,650 ರಿಂದ 52,650 ರೂ
ಉದ್ಯೋಗ ಸ್ಥಳ: ಬೆಳಗಾವಿ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-03-2023

Belagavi District Court Recruitment ವೇತನ ಶ್ರೇಣಿ:
ಶೀಘ್ರಲಿಪಿಗಾರರು – 27,650 ರಿಂದ 52,650 ರೂ
ಆದೇಶ ಜಾರೀಕಾರರು – 19,950 ರಿಂದ 37,900 ರೂ
ಸಿಪಾಯಿ – 17,000 ರಿಂದ 28,950 ರೂ

Belagavi District Court Recruitment 2023 ಶೈಕ್ಷಣಿಕ ಅರ್ಹತೆ:
ಶೀಘ್ರಲಿಪಿಗಾರರು :
1) ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

2) ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ( ಸಿನಿಯರ್ ಗ್ರೇಡ್) ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸಿನಿಯರ್ ಗ್ರೇಡ್) ಅಥವಾ ತಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅರ್ಹತಾ ಪರೀಕ್ಷೆ
ಅಭ್ಯರ್ಥಿಗಳಿಗೆ ಕನ್ನಡ/ಇಂಗ್ಲೀಷ್ ಭಾಷೆಗಳಲ್ಲಿ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ ಕ ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಅಥವಾ ಗಣಕ ಯಂತ್ರದ ಮೆಲೆ ಲಿಪ್ಯಂತರ ಮಾಡಲು ಹೇಳಲಾಗುವುದು

ಆದೇಶ ಜಾರೀಕಾರರು:
ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್‌.ಎಸ್‌.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಹೊಂದಿರಬೇಕು. ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

2) ಲಘು (LMV) ಹಾಗೂ ಭಾರಿ (Heavy Badge) ವಾಹನ ಚಾಲನಾ ಪರವಾಣಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಿಶೇಷ ಸೂಚನೆಃ
10 ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿ ಅಥವಾ ಗ್ರೇಡದಲ್ಲಿದ್ದರೆ ಅದನು ಸಂಬಂಧಪಟ್ಟ ಶಾಲಾ ಮುಖ್ಯಸ್ಥರಿಂದ ‘ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು, ಪಡೆದ ಅಂಕಗಳನ್ವಯ ಒಟ್ಟು ಶೇಕಡಾವಾರನ್ನು ಸರಿಯಾಗಿ 100 ರ ಪ್ರತಿಶತನಲ್ಲಿ ನಮೂದಿಸುವುದು. ಅವುಗಳಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಅಂತಹ ಅರ್ಜಿಗಳನ್ನು ಯಾವುದೇ ಸೂಚನೆ ಇಲ್ಲದೇ ತಿರಸ್ಕರಿಸಲಾಗುವುದು.

ಸಿಪಾಯಿ:
1) ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್‌.ಎಸ್‌.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
2) ಅಭ್ಯರ್ಥಿಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಿಶೇಷ ಸೂಚನೆಃ
10 ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿ ಅಥವಾ ಗ್ರೇಡದಲ್ಲಿದ್ದರೆ ಅದನು ಸಂಬಂಧಪಟ್ಟ ಶಾಲಾ ಮುಖ್ಯಸ್ಥರಿಂದ ಅಂಕಗಳಾಗಿ ಪರಿವರ್ತಿಸಿ, ಗರಿಷ್ಠ ಅಂಕಗಳು, ಪಡೆದ ಅಂಕಗಳನ್ವಯ ಒಟ್ಟು ಶೇಕಡಾವಾರನ್ನು ಸರಿಯಾಗಿ 100 ರ ಪ್ರತಿಶತನಲ್ಲಿ ನಮೂದಿಸುವುದು. ಅವುಗಳಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಅಂತಹ ಅರ್ಜಿಗಳನ್ನು ಯಾವುದೇ ಸೂಚನೆ ಇಲ್ಲದೇ ಹೆಸರಿಸಲಾಗುವುದು.

ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ‌ಮೀರಿರಬಾರದು.
2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ‌ಮೀರಿರಬಾರದು.
SC/ST ಪ್ರವರ್ಗ-I ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ‌ಮೀರಿರಬಾರದು.

ಅರ್ಜಿ ಶುಲ್ಕ:
ಶೀಘ್ರಲಿಪಿಗಾರರು
ಸಾಮಾನ್ಯ ವರ್ಗ, ಪ್ರವರ್ಗ-1, ಪ್ರವರ್ಗ-2ಎ, 2ಬಿ , 3ಎ, ಮತ್ತು 3ಬಿ ಸೇರಿದ ಅಭ್ಯರ್ಥಿಗಳಿಗೆ 300 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇಲ್ಲ.

ಆದೇಶ ಜಾರೀಕಾರರು
ಸಾಮಾನ್ಯ ವರ್ಗ, ಪ್ರವರ್ಗ-1, ಪ್ರವರ್ಗ-2ಎ, 2ಬಿ , 3ಎ, ಮತ್ತು 3ಬಿ ಸೇರಿದ ಅಭ್ಯರ್ಥಿಗಳಿಗೆ 250 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇಲ್ಲ.

ಸಿಪಾಯಿ:
ಸಾಮಾನ್ಯ ವರ್ಗ, ಪ್ರವರ್ಗ-1, ಪ್ರವರ್ಗ-2ಎ, 2ಬಿ , 3ಎ, ಮತ್ತು 3ಬಿ ಸೇರಿದ ಅಭ್ಯರ್ಥಿಗಳಿಗೆ 200 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇಲ್ಲ.

Belagavi District Court Recruitment ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ: 02-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-03-2023
ಶುಲ್ಕ ಪಾವತಿ ಕೊನೆಯ ದಿನಾಂಕ: 07-03-2023

Belagavi District Court Recruitment ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: Download
ಅಧಿಕೃತ ವೆಬ್‌ಸೈಟ್:‌ Apply ಮಾಡಿ

17 thoughts on “ಜಿಲ್ಲಾ ನ್ಯಾಯಾಂಗ ನೇಮಕಾತಿ ಅಧಿಸೂಚನೆ 2023 | Belagavi District Court Recruitment 2023”

Leave a Comment