CET ಫಲಿತಾಂಶ 2023 ಪ್ರಕಟ, ವಿದ್ಯಾರ್ಥಿನಿಯರೆ ಮೇಲುಗೈ | CET Result 2023 Direct Link Karnataka Check @karresults.nic.in 2023

Telegram Group Join Now
WhatsApp Group Join Now

ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (CET Result 2023) ಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ.

ಉನ್ನತ ಶಿಕ್ಷಣ ಸಚಿವರಾದ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಇಂದು (ಜೂನ್ 15) ಸಿಇಟಿ ಫಲಿತಾಂಶ ಪ್ರಕಟಿಸಿದರು.

ಈ ಬಾರಿ ಸಿಇಟಿಯ ಎಲ್ಲ ವಿಭಾಗಗಳಿಲ್ಲಿಯೂ ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ಕೋರ್ಸ್​ಗೆ- 2,03,381 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340, ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಸಚಿವ ಡಾ.ಸುಧಾಕರ್​ ಮಾಹಿತಿ ನೀಡಿದರು.

ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ವೃತ್ತಿಪರ ಪದವಿ ಕೋರ್ಸ್ಗಳ ಪ್ರವೇಶಾತಿಗಾಗಿ ಮೇ 20 ರಿಂದ ಮೇ 22ರ ವರೆಗೆ ನಡೆಸಲಾಗಿದ್ದ CET ಪರೀಕ್ಷೆಗೆ 2.39 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.

ಜೂನ್ 12 ಅಥವಾ ಜೂನ್ 14 ರಂದು CET ಫಲಿತಾಂಶವನ್ನು ಪ್ರಕಟಿಸಲು ತಿರ್ಮಾನಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಜೂನ್ 15 ರಂದು ಫಲಿತಾಂಶವನ್ನು ಪ್ರಕಟಿಸಲು ನಿರ್ಧರಿಸಿದೆ.

CET ಪರೀಕ್ಷೆಯ ಮೌಲ್ಯ ಮಾಪನ ಕಾರ್ಯಗಳು ಮುಗಿದಿದ್ದು, ಸದ್ಯಕ್ಕೆ CET ಅಂಕ ಮತ್ತು ದ್ವಿತೀಯ ಪಿಯುಸಿ ಅಂಕಗಳನ್ನು ಆದರಿಸಿ ರ್ಯಾಂಕಿಂಗ್ ಲಿಸ್ಟನ್ನು ಸಿದ್ದಪಡಿಸಲಾಗುತ್ತಿದೆ.

ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 11 ಗಂಟೆಯ ನಂತರ ವೆಬ್’ಸೈಟ್’ನಲ್ಲಿ KEA ಪ್ರಕಟಿಸಲಾಗುತ್ತದೆ. ವಿವಿಧ ಕೊರ್ಸುಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ರ್ಯಾಂಕ್ ಅನ್ನು ನಿರ್ಧರಿಸಲಾಗುತ್ತದೆ.

CET Result 2023 Link

ಕರ್ನಾಟಕ ಪರೀಕ್ಷಾ ಫಲಿತಾಂಶ ವೆಬ್’ಸೈಟ್: ಇಲ್ಲಿ ಕ್ಲಿಕ್‌ ಮಾಡಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್’ಸೈಟ್: ಇಲ್ಲಿ ಕ್ಲಿಕ್‌ ಮಾಡಿ

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ದಿನಾಂಕ ಪ್ರಕಟ

ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ 2023

ಪೋಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment