Chikballapur District Court Recruitment 2022: ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್ III, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಗಾರ ಮತ್ತು ಜವಾನರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ನೇಮಕಾತಿ 2022 ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಆಗಸ್ಟ್ 27 ಕಡೆಯ ದಿನಾಂಕವಾಗಿರುತ್ತದೆ.
ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ನೇಮಕಾತಿ 2022
ಹುದ್ದೆಗಳ ಹೆಸರು | ಶೀಘ್ರಲಿಪಿಗಾರ ಗ್ರೇಡ್ III, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಗಾರ, ಜವಾನ |
ಇಲಾಖೆ ಅಥವಾ ಸಂಸ್ಥೆಯ ಹೆಸರು | ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ |
ನೇಮಕ ಪ್ರಾಧಿಕಾರ | ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ |
ಒಟ್ಟು ಹುದ್ದೆಗಳು | 34 |
ವೇತನ | Rs.17000-52650/- (ಹುದ್ದೆಗಳಿಗನುಗುಣವಾಗಿ) |
ಉದ್ಯೋಗ ವಿಭಾಗ | Govt Jobs in Karnataka 2022 |
ನಿಯುಕ್ತಿ ಸ್ಥಳ | ಕರ್ನಾಟಕ |
ಖಾಲಿ ಇರುವ ಹುದ್ದೆಗಳ ಮಾಹಿತಿ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಶೀಘ್ರಲಿಪಿಗಾರ ಗ್ರೇಡ್ III | 6 |
ಬೆರಳಚ್ಚುಗಾರ | 1 |
ಬೆರಳಚ್ಚು ನಕಲುಗಾರ | 2 |
ಆದೇಶ ಜಾರಿಗಾರ | 1 |
ಜವಾನರ | 24 |
ಒಟ್ಟು ಹುದ್ದೆಗಳ ಸಂಖ್ಯೆ | 34 |
ವೇತನ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಶೀಘ್ರಲಿಪಿಗಾರ ಗ್ರೇಡ್ III | Rs.27650-52650/- |
ಬೆರಳಚ್ಚುಗಾರ | Rs.21400-42000/- |
ಬೆರಳಚ್ಚು ನಕಲುಗಾರ | Rs.21400-42000/- |
ಆದೇಶ ಜಾರಿಗಾರ | Rs.19950-37900/- |
ಜವಾನರ | Rs.17000-28950/- |
ವಿದ್ಯಾರ್ಹತೆ:
ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆಯು ಹುದ್ದೆಗಳಿಗನುಗುಣವಾಗಿ ಈ ಕೆಳಗಿನಂತೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಕುಲಂಕುಶವಾಗಿ ಓದಿ.
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಶೀಘ್ರಲಿಪಿಗಾರ ಗ್ರೇಡ್ III | ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ |
ಬೆರಳಚ್ಚುಗಾರ | ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ |
ಬೆರಳಚ್ಚು ನಕಲುಗಾರ | ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ |
ಆದೇಶ ಜಾರಿಗಾರ | ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ |
ಜವಾನರ | ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ |
ವಯೋಮಿತಿ:
ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು
- ಕನಿಷ್ಠ 18 ವರ್ಷಗಳು
- ಗರಿಷ್ಠ 35 ವರ್ಷಗಳನ್ನು ಪೂರೈಸಿರಯಬೇಕು.
ವಯೋಮಿತಿ ಸಡಿಲಿಕೆ:
- ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
ವಿಶೇಷ ಸೂಚನೆ – ಮಾಜಿ ಸೈನಿಕರಿಗೆ ಗರಿಷ್ಠ ವಯೋಮಿತಿ ಅವನು ಕೇಂದ್ರದ ನಿಯತ ಸೇನೆಯಲ್ಲಿ/ ನೌಕಾಪಡೆಯಲ್ಲಿ / ವಾಯುಪಡೆಯಲ್ಲಿ ಎಷ್ಟು ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ಸಡಿಲಿಕೆ ಮತ್ತು ವಿಧವೆಯರಿಗೆ ಮತ್ತು ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ಹಾಗೂ ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು (ಈ ಬಗ್ಗೆ ಕೋರಿದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು)
ಅರ್ಜಿ ಶುಲ್ಕ:
- ಪ.ಜಾ, ಪ.ಪಂ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 100 ರೂ
- ಸಾಮಾನ್ಯ ವರ್ಗದ ಅಭ್ಯರ್ಥಿಗಳು: 200 ರೂ
- ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
ಪಾವತಿ ವಿಧಾನ: ಆನ್‌ಲೈನ್/ಚಲನ್
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ,
- ಟೈಪಿಂಗ್ ಪರೀಕ್ಷೆ
- ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ | 29 ಜುಲೈ 2022 |
ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ | 27 ಆಗಸ್ಟ್ 2022 |
ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ | 30 ಆಗಸ್ಟ್ 2022 |
ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್‌ಸೈಟ್ | districts.ecourts.gov.in |
ಆನ್ ಲೈನ್ ಅರ್ಜಿ ಸಲ್ಲಿಕೆ ಹೇಗೆ?
–ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
-ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
-ಅಧಿಕೃತ ಅಧಿಸೂಚನೆಯ ಪ್ರಕಾರ ಆನ್ ಲೈನ್ ಅರ್ಜಿ ಅನ್ನು ಭರ್ತಿ ಮಾಡಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ Submit ಬಟನ್ ಕ್ಲಿಕ್ ಮಾಡಿ
-ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ ಅಥವಾ ಸ್ವೀಕೃತಿ ಸಂಖ್ಯೆಯನ್ನು ನೋಟ್ ಮಾಡಿಕೊಳ್ಳಿ ಅಥವಾ ಪ್ರಿಂಟ್ ತೆಗೆದುಕೊಳ್ಳಿ.