OBC: ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಯೋಜನೆಗಳ ಅರ್ಜಿ ಅಹ್ವಾನ | Devaraj Arasu Loan Scheme 2023 Apply Online Last Date

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, 2023-24ನೇ ಸಾಲಿನಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ (Devaraj Arasu Loan Scheme 2023) ನೀಡುವ ವಿವಿಧ ಸಹಾಯಧನ ಯೋಜನೆಗಳಿಗಾಗಿ ಆನ್‌ಲೈನ್‌ ಅರ್ಜಿ ಅಹ್ವಾನಿಸಲಾಗಿದೆ.

ಅರ್ಹ ಫಲಾನುಭವಿಗಳು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ಸೇರಿದಂತೆ ಈ ಎಲ್ಲ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Devaraj Arasu Loan Scheme 2023 Details

ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ:
ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು (Devaraj Arasu Loan Scheme 2023) ನೀಡುತ್ತಾರೆ.

ಕನಿಷ್ಠ ರೂ.1 ಲಕ್ಷಗಳವರೆಗಿನ ಸಾಲದಲ್ಲಿ ಶೇ.20 ರಷ್ಟು ಗರಿಷ್ಠ ರೂ. 20,000/-ಗಳ ಸಹಾಯಧನ ಹಾಗೂ ಗರಿಷ್ಠ ರೂ. 1 ಲಕ್ಷದಿಂದ ರೂ.2 ಲಕ್ಷದವರೆಗೆ ಶೇ.15 ರಷ್ಟು ಗರಿಷ್ಠ ರೂ. 30,000/- ಸಹಾಯಧನ ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನಿಗಮದಿಂದ ನೇರ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳು ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು, ಪ್ರವರ್ಗ-1 ರಡಿಯಲ್ಲಿನ ಜಾತಿಗಳಲ್ಲಿ ಬರುವ ಅರ್ಜಿದಾರರು ಕನಿಷ್ಠ 7ನೇ ತರಗತಿ ಹಾಗೂ ಉಳಿದ ಇತರ ಪ್ರವರ್ಗಗಳಲ್ಲಿನ ಅರ್ಜಿದಾರರು 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.

ಗಂಗಾ ಕಲ್ಯಾಣ ನೀರಾವರಿ ಯೋಜನೆ:
ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ. 4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.

ಇನ್ನುಳಿದ ಜಿಲ್ಲೆಗಳಿಗೆ ರೂ.3.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ. 50,000/-ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಜಮೀನು ಇರಬೇಕು.

ಅರಿವು-ಶೈಕ್ಷಣಿಕ ಸಾಲ ಯೋಜನೆ:
ಈ ಯೋಜನೆಯಡಿ CET ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್‌ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂ.ಗಳಂತೆ ಕೋರ್ಸ್‌ನ ಅವಧಿಗೆ ಗರಿಷ್ಠ 4 ಲಕ್ಷ ರೂ.ಗಳಿಂದ ರೂ 5 ಲಕ್ಷ ರೂ.ಗಳಿಗೆ ವಾರ್ಷಿಕ ಶೇ. 2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು, ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ:
ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಟರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.

ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 8 ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60 ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. QS World Ranking 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಟ 10 ಲಕ್ಷ ಹಾಗೂ ಪೂರ್ಣ ಕೋರ್ಸ್‌ನ ಅವಧಿಗೆ ರೂ.20 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.

ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ (Offer Letter) ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ವಾವಲಂಬಿ ಸಾರಥಿ ಯೋಜನೆ:
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್‌ಗಳಿಂದ ಪಡೆಯುವ ಸಾಲಕ್ಕೆ ಶೇ. 50 ರಷ್ಟು, ಗರಿಷ್ಟ ರೂ. 3 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.

ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳು ಪಟ್ಟಣ ಪ್ರದೇಶದವರಿಗೆ ರೂ. 1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ):
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹಿಂದುಳಿದ ವರ್ಗಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20 ರಷ್ಟು ಗರಿಷ್ಠ ರೂ.1 ಲಕ್ಷಗಳ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಬ್ಯಾಂಕ್‌ನಿಂದ ಸಾಲ ಪಡೆಯುವ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/- ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ:
ಹಿಂದುಳಿದ ವರ್ಗಗಳ ವಿದ್ಯಾವಂತ ಯುವಜನರನ್ನು ಗುರುತಿಸಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs, GTTC, KGTTI, ATDC ಗಳ ಮೂಲಕ ವಿವಿಧ ಅಲ್ಪಾವಧಿ ಮತ್ತು ಉತ್ಕೃಷ್ಟ ಕೌಶಲ್ಯ ತರಬೇತಿಯನ್ನು ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ/ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಉದ್ಯೋಗಿಮುಖಿಗಳನ್ನಾಗಿಸುವುದು.

ಅರ್ಹತೆಗಳು: 10 ನೇ ತರಗತಿ/ದ್ವಿತೀಯ ಪಿ.ಯು.ಸಿ./ಡಿಪ್ಲೋಮ/ಪದವಿ/ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ಆದಾಯ ಮಿತಿ ಇರುವುದಿಲ್ಲ. ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ಆದಾಯ ರೂ.8 ಲಕ್ಷಗಳಿಗಿಂತ ಕಡಿಮೆ ಇರಬೇಕು. ಅರ್ಜಿದಾರರು https://www.kaushalkar.com/ ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

Devaraj Arasu Loan Scheme 2023: ಈ ಮೇಲ್ಕಂಡ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್‌ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

Devaraj Arasu Loan Scheme 2023 Application Link:
ಆನ್‌ಲೈನ್‌ ಅರ್ಜಿ ಲಿಂಕ್‌:
ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ www.dbcdc.karnataka.gov.in, https://sevasindhu.karnataka.gov.in

Devaraj Arasu Loan Scheme 2023 Last Date:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-10-2023

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್‌, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ನಿಗಮದ ವೆಬೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಮತ್ತು 8050770004 ಅಥವಾ 8050770005 ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು. ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 31.10.2023 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

ಸೂಚನೆ:- ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಯ ಅವಧಿಯಲ್ಲಿ ಉಚಿತವಾಗಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇರುತ್ತದೆ.

ಇತರೆ ಮಾಹಿತಿಗಳನ್ನು ಓದಿ

ಕಾಶಿ ಯಾತ್ರೆಗೆ ಸರ್ಕಾರದಿಂದ ಸಹಾಯಧನ

ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆ ಬಂದಿಲ್ಲವೇ

ಸಹಾಯಧನ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗಾಗಿ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment