ಎಲ್ಲರಿಗೂ ನಮಸ್ಕಾರ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎನ್ನುವುದು ಎಲ್ಲರ ಕನಸು. ರಾಜ್ಯ ಸರ್ಕಾರವು ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ (English medium class) ಯನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
2024-25 ನೇ ಶೈಕ್ಷಣಿಕ ಸಾಲಿನಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ತರಗತಿಗಳ ಬೋಧನೆಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಿದ್ದರು.
ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ರಾಜ್ಯಾದ್ಯಂತ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ 1ನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ (ದ್ವಿ ಭಾಷಾ ಮಾಧ್ಯಮ) ತರಗತಿಗಳನ್ನು ಪ್ರಾರಂಭಿಸಲು ಒಪ್ಪಿಗೆ ನೀಡಿ ಆದೇಶಿಸಿದೆ.
ಆಯ್ಕೆಯಾಗಿರುವ ಶಾಲೆಗಳ ಪೈಕಿ ಕಲಬುರಗಿ ಪ್ರಾದೇಶಿಕ ವಿಭಾಗದ 872, ಬೆಂಗಳೂರು ವಿಭಾಗದ 297, ಮೈಸೂರು ವಿಭಾಗದ 140 ಮತ್ತು ಧಾರವಾಡ ವಿಭಾಗದ 110 ಶಾಲೆಗಳು ಸೇರಿವೆ. ಈ ಕುರಿತು ರಾಜ್ಯ ಸರ್ಕಾರವು ತನ್ನ ಅಧಿಕೃತ ‘X/Twitter’ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಂಡಿದೆ.
ಇತರೆ ಮಾಹಿತಿಗಳನ್ನು ಓದಿ:

