ಎಲ್ಲರಿಗೂ ನಮಸ್ಕಾರ, ನೀವು ಕೂಡ Flipkart Scholarship 2025 ಅರ್ಜಿ ಸಲ್ಲಿಸಬೇಕೆ..? ಯಾರು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹರು..? ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿವೇತನ ದೊರೆಯಲಿದೆ..? ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ..? ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
ಫ್ಲಿಪ್‌ಕಾರ್ಟ್ ಫೌಂಡೇಶನ್ ವಿದ್ಯಾರ್ಥಿವೇತನ 2024-25 ಎಂಬುದು ಫ್ಲಿಪ್‌ಕಾರ್ಟ್ ಫೌಂಡೇಶನ್‌ನ ಒಂದು ಉಪಕ್ರಮವಾಗಿದ್ದು, ಅರ್ಹ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಈ ವಿದ್ಯಾರ್ಥಿವೇತನ ಕಾರ್ಯಕ್ರಮ ಹೊಂದಿದೆ, ಇದು ಪ್ರತಿಭಾನ್ವಿತ ಮತ್ತು ಹಿಂದುಳಿದ ಮಹಿಳಾ ವಿದ್ಯಾರ್ಥಿನಿಯರ ಸಬಲೀಕರಣಕ್ಕೆ ಬಲವಾದ ಒತ್ತು ನೀಡುತ್ತದೆ.
ಈ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ, 2024-25ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ STEM (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ) ಪ್ರಥಮ ವರ್ಷದ ಪದವಿ ಕೋರ್ಸ್ ಗಳಿಗೆ ದಾಖಲಾದ ವಿದ್ಯಾರ್ಥಿಗಳು ಮತ್ತು ಕಿರಾಣಾ ಅಂಗಡಿ ಮಾಲೀಕರ (KSOs) ಮಕ್ಕಳಿಗೆ 50,000 ರೂ. ವಿದ್ಯಾರ್ಥಿವೇತನವನ್ನು ನೀಡುತ್ತಾರೆ.
ಅರ್ಹತೆಗಳು:
- ಅರ್ಜಿ ಸಲ್ಲಿಸುವವರು ಪ್ರಸ್ತುತ ಭಾರತದ ಸರ್ಕಾರಿ ಕಾಲೇಜುಗಳಲ್ಲಿ ವೃತ್ತಿಪರ ಪದವಿಪೂರ್ವ STEM (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ) ಕೋರ್ಸ್‌ಗಳ 1 ನೇ ವರ್ಷದಲ್ಲಿ ಓದುತ್ತಿರಬೇಕು.
- ಅರ್ಜಿದಾರರ ಪೋಷಕರಲ್ಲಿ ಒಬ್ಬರು ಕಿರಾಣಾ ಅಂಗಡಿ ಮಾಲೀಕರಾಗಿರಬೇಕು (KSO).
- ಅರ್ಜಿದಾರರು ತಮ್ಮ 12 ನೇ ತರಗತಿ ಪರೀಕ್ಷೆಗಳಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 5 ಲಕ್ಷ ರೂ. ಮೀರಬಾರದು.
- ಫ್ಲಿಪ್‌ಕಾರ್ಟ್ ಗ್ರೂಪ್ ಮತ್ತು ಬಡ್ಡಿ4ಸ್ಟುಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
Flipkart Scholarship 2025 ಅಗತ್ಯ ದಾಖಲೆಗಳು:
- ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಪೋಟೋ
- ಕಾಲೇಜು/ಸಂಸ್ಥೆ ಪ್ರವೇಶ ಪುರಾವೆ (ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ, ಇತ್ಯಾದಿ)
- 12ನೇ ತರಗತಿಯ ಮಾರ್ಕ್ಸ್ ಕಾರ್ಡ್
- ಕುಟುಂಬದ ಆದಾಯ ಪ್ರಮಾಣಪತ್ರ
- ಕಿರಾಣಾ ಅಂಗಡಿ ಮಾಲೀಕರ ಪುರಾವೆ (ಅಂಗಡಿಗಳು ಮತ್ತು ಸ್ಥಾಪನೆ ನೋಂದಣಿ ಕಾಯ್ದೆ, ಘಟಕ ನೋಂದಣಿ, GST ನೋಂದಣಿ ಅಥವಾ ಅನ್ವಯವಾಗುವಂತೆ)
- ಗುರುತಿನ ಪುರಾವೆ (ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಇತ್ಯಾದಿ)
- ಸಂಬಂಧಪಟ್ಟ ಸರ್ಕಾರಿ ಪ್ರಾಧಿಕಾರದಿಂದ ನೀಡಲಾದ ಅಂಗವೈಕಲ್ಯ ಪ್ರಮಾಣಪತ್ರ (ಅನ್ವಯಿಸಿದರೆ)
- ಶೈಕ್ಷಣಿಕ ವರ್ಷದ ಶುಲ್ಕ ರಸೀದಿಗಳು
- ವಿದ್ಯಾರ್ಥಿಗಳ ಬ್ಯಾಂಕ್ ಪಾಸ್‌ಬುಕ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-04-2024
ಪ್ರಮುಖ ಲಿಂಕ್’ಗಳು:
Flipkart Scholarship 20255 Apply Online ಲಿಂಕ್: Apply ಮಾಡಿ
ಇತರೆ ಮಾಹಿತಿಗಳು:

