ಶಕ್ತಿ ಯೋಜನೆ ರದ್ದಾಗಲಿದೆಯೇ? ಸಾರಿಗೆ ಇಲಾಖೆ ಸ್ಪಷ್ಟನೆ ಏನು? | Free Bus For Ladies In Karnataka Shakti Yojane Stopped Or Not

Telegram Group Join Now
WhatsApp Group Join Now

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮೊದಲಿಗೆ ಜಾರಿಗೆ ತಂದಿರುವ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ (Free Bus For Ladies In Karnataka) ನೀಡುವ ಕ್ತಿ ಯೋಜನೆಯನ್ನು ಸ್ಥಗಿತ ಮಾಡಲಾಗುತ್ತದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಈ ವಿಷಯವನ್ನು ಮನಗಂಡು ಕರ್ನಾಟಕ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

ಆಗಸ್ಟ್‌ 15 ರ ನಂತರ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಪ್ರಯಾಣ ಯೋಜನೆಯನ್ನು ರದ್ದಾಗಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು.

Shakti Yojane: Free Bus For Ladies In Karnataka

“ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ (Shakti Yojane) ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿ ಸತ್ಯಕ್ಕೆ ದೂರವಾದ ವಿಷಯವಾಗಿದ್ದು, ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ.”

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

ಹಾಗಾಗಿ ಮಹಿಳೆಯರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಾರಿಗೆ ಇಲಾಖೆಯ ಬಸ್‌ಗಳಲ್ಲಿ ಉಚಿತ ಪ್ರಯಾಣ (Free Bus For Ladies) ಮಾಡಹುದು. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳನ್ನು ನಂಬದೆ ಅಧಿಕೃತ ಮಾಹಿತಿ ಪಡೆದು ಸರ್ಕಾರಿ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳಿ.

ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು, ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಸ್ಪಷ್ಟನೆ ನೀಡಿದ್ದಾರೆ.

Telegram Group Join Now
WhatsApp Group Join Now

Leave a Comment