Free Coaching Application 2025: ನೀವು ಕೂಡ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಬೇಕೆ..? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ UPSC/ ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
2025-26 ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರವರ್ಗ-I, 2A, 3Α, 3B, ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತ ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಅರ್ಹತೆ ಮತ್ತು ಸೂಚನೆಗಳು:
- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು.
- ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2A, 3Α, 3B ಗೆ ಸೇರಿದವರಾಗಿರಬೇಕು.
- ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಮಿತಿ 5 ಲಕ್ಷ ರೂ. ಮೀರಿರಬಾರದು.
- ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ವಯೋಮಿತಿ:
ಯು.ಪಿ.ಎಸ್.ಸಿ ನಾಗರಿಕ ಸೇವೆ ತರಬೇತಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 31 ವರ್ಷ ಮೀರಿರಬಾರದು.
ಬ್ಯಾಂಕಿಂಗ್ ಪಿ.ಒ ತರಬೇತಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770006 ಅನ್ನು (ಬೆಳಗ್ಗೆ 10.00 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ) ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಕೆ ದಿನಾಂಕ:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-06-2025
Free Coaching Application 2025 ಪ್ರಮುಖ ಲಿಂಕ್’ಗಳು:
ಪ್ರಕಟಣೆ: ಡೌನ್‌ಲೋಡ್
ಸೂಚನೆಗಳು: ಡೌನ್‌ಲೋಡ್
Online Application: Apply ಮಾಡಿ
ಅಧಿಕೃತ ವೆಬ್‌ಸೈಟ್: bcwd.karnataka.gov.in sevasindhuservices.karnataka.gov.in
ಇತರೆ ಮಾಹಿತಿಗಳು:

