IAS KAS Free Coaching ಆನ್‌ಲೈನ್‌ ಅರ್ಜಿ ಆಹ್ವಾನ | Free Coaching Application 2023 Karnataka Apply Online @ sevasindhu.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಪಡೆಯಬೇಕಾ? ಈ ಲೇಖನದಲ್ಲಿ Free Coaching Application 2023 ಅರ್ಜಿ ಆಹ್ವಾನಿಸಿರುವ ಕುರಿತು ಮಾಹಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಿ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ.

ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು, ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ 10 ತಿಂಗಳ ವಸತಿಸಹಿತ ತರಬೇತಿ ನೀಡಲು ಉದ್ದೇಶಿಸಲಾಗಿದೆ.

ಈ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಶೈಕ್ಷಣಿಕ ವಿದ್ಯಾರ್ಹತೆ, ತರಬೇತಿಯ ಅವಧಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂತಾದ ವಿವರಗಳನ್ನು ಈ ಕೆಳಗಿನಂತೆ ನೀಡಲಾಗಿದೆ.

SC ST Free Coaching ಆನ್‌ಲೈನ್‌ ಅರ್ಜಿ ಆಹ್ವಾನ

Free Coaching Application 2023 ವಿವರ:

  • ಕೋರ್ಸ್ ವಿವರ: ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ
  • ತರಬೇತಿ ಅವಧಿ: 10 ತಿಂಗಳು
  • ವಯಸ್ಸು: 21 ರಿಂದ 35 ವರ್ಷ

2023-24ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐಎಎಸ್, ಕೆಎಎಸ್ (IAS KAS Free Coaching) ಪರೀಕ್ಷಾ ಪೂರ್ವ ತರಬೇತಿಗೆ ರಾಜ್ಯಾದ್ಯಾಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು, ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ, ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ 10 ತಿಂಗಳ ವಸತಿಸಹಿತ ತರಬೇತಿ ನೀಡಲು ಉದ್ದೇಶಿಸಲಾಗಿದೆ.

IAS KAS Free Coaching 2023 ವಿದ್ಯಾರ್ಹತೆ: ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸುವ ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.

ಅಭ್ಯರ್ಥಿಯ ಸಾಮಾನ್ಯ ಅರ್ಹತೆ:

  1. ಸದರಿ ಅಭ್ಯರ್ಥಿಯು, ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು.
  2. ಅಭ್ಯರ್ಥಿಯು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

ಆಯ್ಕೆ ವಿಧಾನ:

ಅಭ್ಯರ್ಥಿಗಳಿಗೆ ಇಲಾಖೆ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಸದರಿ ಅಭ್ಯರ್ಥಿಗಳಿಗೆ ಕೆ.ಇ.ಎ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಸದರಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ತರಬೇತಿಯ ವಿಧಗಳು:

  • ಇಲಾಖಾ ವತಿಯಿಂದ ಯಾವುದೇ ತರಬೇತಿ ಪಡೆಯದ ಹೊಸ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ತರಬೇತಿಯನ್ನು ನೀಡಲಾಗುವುದು.
  • ಈಗಾಗಲೇ ಇಲಾಖೆ/ಖಾಸಗಿ ಸಂಸ್ಥೆಗಳಿಂದ ತರಬೇತಿಯನ್ನು ಪಡೆದಿದ್ದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಹೊರತು ಪಡಿಸಿ ಉಚಿತ ವಸತಿಯೊಂದಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಯಿಂದ Mentorship, Prelims Test Series, Main Test Series, Crash course for Prelims, Bridge Course for mains, Optional Test Series ಒದಗಿಸಲಾಗುವುದು.

Free Coaching Application 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-09-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಪ್ರಕಟಣೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: dom.karnataka.gov.in, sevasindhu.karnataka.gov.in

ಇತರೆ ಯೋಜನೆಗಳು

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌: 60,000 ರೂ. ವಿದ್ಯಾರ್ಥಿವೇತನ ಅರ್ಜಿ ಆಹ್ವಾನ

ಗೃಹಲಕ್ಷ್ಮಿ ಯೋಜನೆಯ 2,000 ರೂ. ಹಣ ಬಂದಿಲ್ಲವೇ, Status Check ಮಾಡಿ

ವಾಹನ ಖರೀದಿಸಲು 3 ಲಕ್ಷ ಸಹಾಯಧನ, ಆನ್‌ಲೈನ್‌ ಅರ್ಜಿ ಸಲ್ಲಿಸಿ

ಉಚಿತವಾಗಿ ಆಧಾರ್ ಕಾರ್ಡ್ Update ಮಾಡಿಸಿ, ಇಲ್ಲ ದಂಡ ಗ್ಯಾರಂಟಿ..!

ಶೇ.50% ಸಬ್ಸಿಡಿ: ವೃತ್ತಿ ಪ್ರೋತ್ಸಾಹ ಯೋಜನೆಗೆ ಆನ್‌ಲೈನ್‌ ಅರ್ಜಿ ಸಲ್ಲಿಸಿ

Education Loan: ವಿದ್ಯಾರ್ಥಿಗಳಿಗೆ 3 ಲಕ್ಷದವರೆಗೆ ಶೈಕ್ಷಣಿಕ ಸಾಲ ಯೋಜನೆ

ಸಣ್ಣ ವ್ಯಾಪಾರ ಆರಂಭಿಸಲು 50,000 ರೂ. ಸಾಲ ಮತ್ತು ಸಹಾಯಧನ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣೆ

Telegram Group Join Now
WhatsApp Group Join Now

Leave a Comment