ಎಲ್ಲರಿಗೂ ನಮಸ್ಕಾರ, ತೋಟಗಾರಿಕೆ ಇಲಾಖೆ ವತಿಯಿಂದ ಹನಿ ನೀರಾವರಿ ಯೋಜನೆ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಯಂತ್ರೋಪಕರಣಗಳಿಗೆ ಸಹಾಯಧನ (Government Subsidy) ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಹ ಮತ್ತು ಆಸಕ್ತ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
2025-26ನೇ ಸಾಲಿನ ಹಿರಿಯೂರು ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸಹಾಯಧನ ಪಡೆಯರು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
Government Subsidy For Farmers:
ಈ ಯೋಜನೆಯ ಅಡಿಯಲ್ಲಿ ಬಾಳೆ, ದಾಳಿಂಬೆ, ಪಪ್ಪಾಯ, ಬಿಡಿ ಹೂವು ಬೆಳೆಗಳನ್ನು ಹೊಸದಾಗಿ ಬೆಳೆಯಲು ಸಹಾಯಧನ ನೀಡುತ್ತಾರೆ. ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಪ್ಲಾಸ್ಟಿಕ್ ನೆಲಹೊದಿಕೆ, ವೈಯಕ್ತಿಕ ಕೃಷಿ ಹೊಂಡ, ಕೊಯ್ಲೋತ್ತರ ನಿರ್ವಹಣೆಯಡಿ ಈರುಳ್ಳಿ ಸಂಗ್ರಹಣಾ ಘಟಕ, ಸಣ್ಣ ಪ್ರಮಾಣದ ಅಣಬೆ ಬೆಳೆಸುವ ಘಟಕ ಹಾಗೂ ತೋಟಗಾರಿಕ ಯಾಂತ್ರೀಕರಣದಡಿ 20 ಹೆಚ್.ಪಿ ಒಳಗೆ ಟ್ರ್ಯಾಕ್ಟರ್ ಸಹಾಯಧನ ನೀಡುತ್ತಾರೆ.
ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ನಾಟಿ ಮಾಡಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ರೈತರು ಹಿರಿಯೂರು ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 15, 2025
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ 9731285946,9449116976, 9113237153 ಗೆ ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಹಿರಿಯೂರು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಲೋಕೇಶ್ ತಿಳಿಸಿದ್ದಾರೆ.
ಇತರೆ ಮಾಹಿತಿಗಳು:

