15000 ಶಿಕ್ಷಕರ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | GPSTR Revised Result 2022, 1:1 Selection List

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ 1:1 ತಾತ್ಕಾಲಿಕ ಆಯ್ಕೆ ಪಟ್ಟಿ (GPSTR Revised Result 2022) ಯನ್ನು ಪ್ರಕಟಿಸಲಾಗಿದೆ.

ಶಿಕ್ಷಣ ಇಲಾಖೆ ಈ ಮೊದಲು ಪ್ರಕಟಿಸಿದ್ದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡದ ಕಾರಣಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಹೈಕೋರ್ಟ್ನಲ್ ನಲ್ಲಿ ತಡೆಯಾಜ್ಞೆ ತರಲಾಗಿತ್ತು. ಮಹಿಳಾ ಅಭ್ಯರ್ಥಿಗಳ ಅರ್ಜಿಯನ್ನು ಎತ್ತಿ ಹಿಡಿದ ಹೈಕೋರ್ಟ್, ವಿವಾಹಿತ ಮಹಿಳಾ ಅಭ್ಯರ್ಥಿಗಳು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶ ನೀಡಲಾಗಿತ್ತು.

ಇದೀಗ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವರು ಟ್ವೀಟ್ ಮಾಡಿದ್ದಾರೆ.

GPSTR Revised Result 2022

15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಯ ಪರಿಷ್ಕೃತ 1:1 ತಾತ್ಕಾಲಿಕ ಆಯ್ಕೆಪಟ್ಟಿ (GPSTR 1:1 Selection List) ಯನ್ನು schooleducation.kar.nic.in ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಉದ್ಯೋಗ ಮಾಹಿತಿಗಳನ್ನು ಓದಿರಿ.

GPSTR ಅಂತಿಮ ಆಯ್ಕೆ ಪಟ್ಟಿ ಪ್ರಕಟ

ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲಾ ನೇಮಕಾತಿ 2023

2 thoughts on “15000 ಶಿಕ್ಷಕರ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | GPSTR Revised Result 2022, 1:1 Selection List”

Leave a Comment