ಗೃಹ ಜ್ಯೋತಿ ಯೋಜನೆಯ ಬಗ್ಗೆ ನಿಮ್ಮ ಗೊಂದಲಗಳಿಗೆ ಇಲಾಖೆಯ ಉತ್ತರಗಳು | Gruha Jyothi Scheme Registration FAQs 2023 Apply Online @ sevasindhugs.karnataka.gov.in/gruhajyothi/

Telegram Group Join Now
WhatsApp Group Join Now

ಗೃಹ ಜ್ಯೋತಿ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿರುವ ಗೊಂದಲ ಹಾಗೂ ಪ್ರಶ್ನೆಗಳಿಗೆ ಸರ್ಕಾರದಿಂದ ಉತ್ತರಗಳನ್ನು ನೀಡಲಾಗಿದೆ. ಗೃಹ ಜ್ಯೋತಿ ಯೋಜನೆ (Gruha Jyothi Scheme Application) ಯ ಆನ್’ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಹಲವಾರು ಗೊಂದಲ ಉಂಟಾಗುತ್ತಿವೆ. ಇದನ್ನು ಮನಗಂಡು ಇಂಧನ ಇಲಾಖೆ ಈ ಕೇಳಗಿನ ಸ್ಪಷ್ಟನೆಗಳನ್ನು ನೀಡಿದೆ.

ಗೃಹ ಜ್ಯೋತಿ ಯೋಜನೆ (Gruha Jyothi Scheme) ಯ ಕುರಿತು ಪದೇ ಪದೇ ಕೇಳಲಾಗುವ ಪ್ರಶ್ನೆಗಳು

1. ನಾನು ಈ ಯೋಜನೆಗೆ ಅರ್ಹನೇ?
ಕರ್ನಾಟಕ ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ.

2. ಗೃಹ ಜ್ಯೋತಿ ಯೋಜನೆ (Gruha Jyothi Scheme) ಎಂದರೇನು?
“ಗೃಹ ಜ್ಯೋತಿ” ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ಇದು ಕರ್ನಾಟಕದ ಪ್ರತಿ ಗೃಹ ಬಳಕೆದಾರರಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುತ್ತದೆ.

3. ಗೃಹ ಜ್ಯೋತಿ ಯೋಜನೆ (Gruha Jyothi Scheme) ಯನ್ನು ಪಡೆಯಲು ನಾನು ಏನು ಮಾಡಬೇಕು?
ಈ ಯೋಜನೆಯನ್ನು ಸೇವಾ ಸಿಂಧು ವೆಬ್‌ಸೈಟ್ ನಲ್ಲಿ (ಲಿಂಕ್ ಕೇಳಗೆ ನೀಡಲಾಗಿದೆ) (ಕಂಪ್ಯೂಟರ್, ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್) ನೋಂದಾಯಿಸಿಕೊಳ್ಳಬೇಕು. ನೋಂದಣಿಯು ಜೂನ್-18, 2023 ರಿಂದ ಪ್ರಾರಂಭವಾಗಿದೆ.

4. ಈ ಯೋಜನೆಯನ್ನು ಯಾವಾಗಿನಿಂದ ಜಾರಿಗೆ ತರಲಾಗುತ್ತದೆ?
ಜುಲೈ, 2023 ರಲ್ಲಿ ಬಳಸಿದ ವಿದ್ಯುತ್‌ ಬಳಕೆಯನ್ನು ಆಗಸ್ಟ್ 1, 2023 ರಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು.

5. ಈ ಯೋಜನೆಯನ್ನು ನಾನು ಎಲ್ಲಿ ಸಲ್ಲಿಸಬಹುದು?
ಈ ಯೋಜನೆಯನ್ನು ಸೇವಾ ಸಿಂಧು ವೆಬ್‌ಸೈಟ್ ನಲ್ಲಿ (ಲಿಂಕ್ ಕೇಳಗೆ ನೀಡಲಾಗಿದೆ) (ಕಂಪ್ಯೂಟರ್, ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್) ನೋಂದಾಯಿಸಿಕೊಳ್ಳಬೇಕು. ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.

6. ಗೃಹ ಜ್ಯೋತಿ ಯೋಜನೆ (Gruha Jyothi Scheme) ಯನ್ನು ಆಫ್ ಲೈನ್ (Offline) ಮೂಲಕ ನಾನು ಪಡೆಯಬಹುದೇ?
ಹೌದು. ಎಲ್ಲಾ ಗೃಹಬಳಕೆ ಗ್ರಾಹಕರು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ, ಗ್ರಾಮ ಪಂಚಾಯತ್‌ ಮತ್ತು ನಾಡಕಛೇರಿ ಹಾಗೂ ವಿದ್ಯುತ್ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

7. ಗೃಹ ಜ್ಯೋತಿ ಯೋಜನೆ (Gruha Jyothi Scheme) ಯೋಜನೆ ಪಡೆಯಲು ಯಾವುದೆಲ್ಲಾ ಮಾಹಿತಿ ಸಲ್ಲಿಸಬೇಕು?
ಆಧಾರ್ ಸಂಖ್ಯೆ, ಬಿಲ್ಲಿನಲ್ಲಿ ನಮೂದಿಸಲಾಗಿರುವ ಗ್ರಾಹಕರ ಖಾತೆ ಸಂಖ್ಯೆ, ಮೊಬೈಲ್ ಸಂಖ್ಯೆ ಸಲ್ಲಿಸಬೇಕು.

8. ಅರ್ಜಿ ಸಲ್ಲಿಸುವಾಗ ನಾನು ಶುಲ್ಕ ಪಾವತಿಸಬೇಕೆ?
ಗೃಹ ಜ್ಯೋತಿ ಯೋಜನೆ (Gruha Jyothi Scheme) ಅಡಿಯಲ್ಲಿ ಯಾವುದೇ ಶುಲ್ಕವನ್ನು ಸೇವಾ ಸಿಂಧು ಪೋರ್ಟಲ್ ನಲ್ಲಿ ಪಾವತಿಸಬೇಕಾಗಿರುವುದಿಲ್ಲ.

9. ನಾನು ಜೂನ್ ತಿಂಗಳ ವಿದ್ಯುತ್ ಬಿಲ್ಲನ್ನು ಪಾವತಿಸಬೇಕೆ?
ಹೌದು. ಆಗಸ್ಟ್ 1, 2023 ರಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ (ಜುಲೈ 2023 ರಲ್ಲಿ ಬಳಸಿದ ವಿದ್ಯುತ್ ಬಳಕೆಯನ್ನು) ಯೋಜನೆಯನ್ನು ಜಾರಿಗೊಳಿಸಲಾಗುವುದು.

10. ನನಗೆ ಒಂದಕ್ಕಿಂತ ಹೆಚ್ಚು ವಿದ್ಯುತ್ ಮಾಪಕಗಳಿದ್ದರೆ, ನಾನು ಎಲ್ಲಾ ಮಾಪಕಗಳಿಗೆ ಅರ್ಹನಿರುವೇನೆ?
ಇಲ್ಲ. ಈ ಯೋಜನೆಯಡಿ ಪ್ರತಿ ಮನೆಯ ಒಂದು ಮೀಟರ್ ಗೆ ಮಾತ್ರ ಅರ್ಹರಾಗಿರುತ್ತಾರೆ.

11. ಅರ್ಜಿ ಸಲ್ಲಿಸಿದ ನಂತರ ನಾನು ಯಾವುದೇ ಸ್ವೀಕೃತಿಯನ್ನು ಪಡೆಯಬಹುದೇ?
ಹೌದು, ನೋಂದಣಿ ಸಮಯದಲ್ಲಿ ಸ್ವೀಕೃತಿ ಪತ್ರವನ್ನು ಗ್ರಾಹಕರಿಗೆ ನೀಡಲಾಗುತ್ತದೆ.

12. ನಾನು ಈಗಾಗಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದೇನೆ, ಯೋಜನೆಯ ಲಾಭವು ಯಾವಾಗ ನನ್ನ ಖಾತೆಗೆ ಸೇರಲು ಪ್ರಾರಂಭವಾಗುತ್ತದೆ?
ಜುಲೈ 2023 ರಲ್ಲಿ ನೀಡಲಾದ ಬಿಲ್‌ ಅನ್ನು ಪೂರ್ಣವಾಗಿ ಪಾವತಿಸಬೇಕಾಗುತ್ತದೆ.ಯೋಜನೆಯ ಪ್ರಯೋಜನಗಳು ಆಗಸ್ಟ್ 1, 2023 ರಿಂದ ಅನ್ವಯಿಸುತ್ತದೆ (ಜುಲೈ-2023 ರ ವಿದ್ಯುತ್‌ ಬಳಕೆಗಾಗಿ).

13. ನಾನು ಅಪಾರ್ಟೆಂಟ್ (ವಸತಿ ಸಮುಚ್ಛಯ) ಮಾಲೀಕನಾಗಿದ್ದೇನೆ, ನಾನು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದೇ?
ಹೌದು, ಪ್ರತ್ಯೇಕ ವಿದ್ಯುತ್ ಮೀಟರ್‌ಗಳು ಲಭ್ಯವಿದ್ದರೆ/ಸ್ಥಾಪಿಸಿದ್ದರೆ ಯೋಜನೆಗೆ ಅರ್ಜಿ ಸಲ್ಲಿಸಬಹುದು.

14. ನಾನು ಬಾಡಿಗೆದಾರ; ಬಿಲ್ ಮಾಲೀಕರ ಹೆಸರಿನಲ್ಲಿದೆ, ನನಗೂ ಯೋಜನೆ ಅನ್ವಯವಾಗುವುದೇ?
ಹೌದು. ಆಧಾರ್ ಸಂಖ್ಯೆ, ಬಿಲ್ಲಿನಲ್ಲಿ ನಮೂದಿಸಲಾಗಿರುವ ಗ್ರಾಹಕರ ಖಾತೆ ಸಂಖ್ಯೆ, ಮೊಬೈಲ್ ಸಂಖ್ಯೆ ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು.

15. ನಾನು 2 ತಿಂಗಳ ಹಿಂದೆ ಮನೆಯನ್ನು ಬದಲಾಯಿಸಿದ್ದೇನೆ, ನನಗೆ ಲಾಭ ಸಿಗುತ್ತದೆಯೇ?
ಹೌದು, ಯೋಜನೆಯ ಲಾಭವನ್ನು ಪಡೆಯಬಹುದು.

16. ನಾನು ಅಂಗಡಿಯ ಮಾಲೀಕರಾಗಿದ್ದೇನೆ, ನಾನು ಸಹ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬಹುದೇ?
ಇಲ್ಲ, ಗೃಹಬಳಕೆದಾರರಿಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ.

17. ನಾನು ಎಷ್ಟು ಉಚಿತ ಯೂನಿಟ್‌ ವಿದ್ಯುತ್‌ಗೆ ಅರ್ಹನಾಗುತ್ತೇನೆ? ತಿಂಗಳಿಗೆ 200 ಯೂನಿಟ್ ಗಳಿಗೆ ನಾನು ಅರ್ಹನೇ?
2022-23 ರ ಸರಾಸರಿ ವಿದ್ಯುತ್ ಬಳಕೆ + ಶೇಕಡ 10% ಹೆಚ್ಚಳ (ಎರಡು ಸೇರಿಸಿದರೆ ಒಟ್ಟು 200 ಯೂನಿಟ್‌ಗಳಿಗಿಂತ ಒಳಗಿರಬೇಕು) ಸರಾಸರಿ ಬಳಕೆಯ ಆಧಾರದ ಮೇಲೆ ಲಾಭವನ್ನು ಲೆಕ್ಕೀಕರಿಸಲಾಗುತ್ತದೆ.

18. ವಿದ್ಯುತ್ ಬಿಲ್ಲಿನ ಖಾತೆ ಸಂಖ್ಯೆಯನ್ನು ನಾನು ಎಲ್ಲಿ ಹುಡುಕಬೇಕು?
ವಿದ್ಯುತ್ ಬಿಲ್ಲಿನ ಖಾತೆ ಸಂಖ್ಯೆಯು ಪ್ರತಿ ತಿಂಗಳ ವಿದ್ಯುತ್ ಬಿಲ್‌ನಲ್ಲಿ ಲಭ್ಯವಿರುತ್ತದೆ.

19. ಗೃಹ ಜ್ಯೋತಿ ಯೋಜನೆ (Gruha Jyothi Scheme) ಯನ್ನು ಪಡೆಯಲು ಖಾತೆ ಸಂಖ್ಯೆಯೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವುದು ಕಡ್ಡಾಯವೇ?
ಹೌದು, ಗ್ರಾಹಕರ ಖಾತೆ ಸಂಖ್ಯೆಯೊಂದಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.

20. ನನ್ನ ಆಧಾರ್ ಕರ್ನಾಟಕ ರಾಜ್ಯದ ಹೊರಗೆ ನೋಂದಾಯಿಸಲ್ಪಟ್ಟಿದೆ. ನಾನು ಈ ಯೋಜನೆ ಪಡೆಯಲು ಅರ್ಹನಾಗುತ್ತೇನೆಯೇ?
ಹೌದು, ನೀವು ಕರ್ನಾಟಕದಲ್ಲಿ ಎಲ್ಲಿಯಾದರೂ ವಾಸಿಸುತ್ತಿದ್ದರೆ, ನೀವು ಈ ಯೋಜನೆಗೆ ಅರ್ಹರಾಗಿದ್ದೀರಿ.

21. ನಾನು ವಿದ್ಯುತ್ ಬಿಲ್ ಬಾಕಿಯನ್ನು ಉಳಿಸಿಕೊಂಡಿದ್ದರೆ, ನಾನು ಈ ಯೋಜನೆಗೆ ಅರ್ಹನೇ?
ಹೌದು. ಆದರೆ, ಜೂನ್ 30 ರವರೆಗಿನ ವಿದ್ಯುತ್ ಬಾಕಿಯನ್ನು 3 ತಿಂಗಳೊಳಗೆ ಪಾವತಿಸಬೇಕು. ಪಾವತಿಸಲು ವಿಫಲವಾದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.

22. ಒಂದು ವೇಳೆ ನಾನು ಈ ಯೋಜನೆಯ ಫಲಾನುಭವಿಯಾಗಿ, ನನಗೆ ನಿಗದಿ ಪಡಿಸಿರುವ ಉಚಿತ ವಿದ್ಯುತ್ ಗಿಂತ ಜಾಸ್ತಿ ಯೂನಿಟ್ ಬಳಸಿದರೆ, ನಾನು ಆ ಹೆಚ್ಚಿನ ಯೂನಿಟ್ ಗಳಿಗೆ ಪಾವತಿಸಬೇಕಾಗುತ್ತದೆ. ಆ ಹೆಚ್ಚಿನ ಯೂನಿಟ್ ಬಳಕೆಯ ಬಿಲ್ಲನ್ನು ಪಾವತಿಸದಿದ್ದರೆ, ನನ್ನನ್ನು ಈ ಯೋಜನೆಯಿಂದ ಅನರ್ಹಗೊಳಿಸಲಾಗುವುದೇ?
ಇಲ್ಲ. ಬಾಕಿ ಪಾವತಿಸದಿದ್ದರೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಬಾಕಿಯನ್ನು ಪಾವತಿಸಿದ ನಂತರ ಪುನಃ ಈ ಯೋಜನೆಯ ಸೌಲಭ್ಯಗಳನ್ನು ಪಡೆಯಬಹುದು.

23. ವಿದ್ಯುತ್ ಬಿಲ್ ನನ್ನ ದಿವಂಗತ ತಂದೆಯ ಹೆಸರಿನಲ್ಲಿದೆ? ಇದಕ್ಕಾಗಿ ನಾನು ಹೇಗೆ ಅರ್ಜಿ ಸಲ್ಲಿಸಬಹುದು?
ವಿದ್ಯುತ್ ಸಂಪರ್ಕವನ್ನು ನಿಮ್ಮ ಹೆಸರಿಗೆ ವರ್ಗಾಯಿಸಬೇಕು ಮತ್ತು ತದ ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಹೆಸರಿನ ಬದಲಾವಣೆಯನ್ನು ಎಲ್ಲಾ ಉಪ ವಿಭಾಗಗಳಲ್ಲಿನ ಜನ ಸ್ನೇಹಿ ವಿದ್ಯುತ್‌ ಸೇವಾ ಕೌಂಟರ್‌ಗಳಲ್ಲಿ ಮಾಡಲಾಗುತ್ತದೆ.

24. ನನ್ನ ಮಾಸಿಕ ಬಳಕೆಯು 200 ಯೂನಿಟ್‌ಗಳಿಗಿಂತ ಹೆಚ್ಚಿದ್ದರೆ, ಸಂಪೂರ್ಣ ಬಿಲ್ ಮೊತ್ತವನ್ನು ಪಾವತಿಸಬೇಕೇ?
ಹೌದು. ಆ ನಿರ್ದಿಷ್ಟ ತಿಂಗಳಿಗೆ ಮಾತ್ರ ನೀವು ಸಂಪೂರ್ಣ ಬಿಲ್ ಮೊತ್ತವನ್ನು ಪಾವತಿಸಬೇಕಾಗುತ್ತದೆ.

25. ನನ್ನ ವಿದ್ಯುತ್ ಬಳಕೆಯು ಉಚಿತ ಯೂನಿಟ್ ಗಳಿಗಿಂತ ಕಡಿಮೆಯಿದ್ದರೆ, ಬಿಲ್ ಮೊತ್ತ ಏನಾಗುತ್ತದೆ?
ವಿದ್ಯುತ್ ಬಳಕೆಯು ಅರ್ಹ ಯೂನಿಟ್ ಗಳಿಗಿಂತ ಕಡಿಮೆಯಿದ್ದರೆ ನೀವು ‘ಶೂನ್ಯ ಬಿಲ್’ ಪಡೆಯುತ್ತೀರಿ.

26. ಸರ್ಕಾರದ ಆದೇಶದ ನಂತರ ಹೊಸದಾಗಿ ಗೃಹಬಳಕೆಗಾಗಿ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರಿಗೆ / ಬಳಕೆದಾರರಿಗೆ ಈ ಯೋಜನೆಯು ಅನ್ವಯಿಸುತ್ತದೆಯೇ?
ಹೊಸ ಸಂಪರ್ಕ ಪಡೆದ ಗ್ರಾಹಕರಿಗೆ ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹ ಬಳಕೆದಾರರ ಸರಾಸರಿ ಬಳಕೆಯು ಮಾಸಿಕ 53 ಯೂನಿಟ್ ಗಳಾಗಿರುವುದರಿಂದ 53 ಯೂನಿಟ್ ಗಳನ್ನೇ ನಿರ್ಧರಿಸಿ ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವುದು.

27. 2022-23 ರಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯ ಬಳಕೆ ದಾಖಲಾಗಿದ್ದಲ್ಲಿ, ಅಂತಹ ಮನೆಗಳ ಕಡಿಮೆ ಅವಧಿಯ ಸರಾಸರಿ ಪರಿಗಣಿಸುವ ವಿಧಾನ ಹೇಗೆ? (Shifted Houses)
ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹಬಳಕೆದಾರರಿಗೆ ಸರಾಸರಿ ಬಳಕೆಯು ಮಾಸಿಕ 53 ಯೂನಿಟ್ ಗಳಾಗಿರುವುದರಿಂದ 53 ಯೂನಿಟ್ ಗಳನ್ನೇ ನಿರ್ಧರಿಸಿ ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವುದು.

ಗೃಹ ಜ್ಯೋತಿ ಯೋಜನೆ (Gruha Jyothi Scheme) ಯ ಆನ್’ಲೈನ್ ಅರ್ಜಿ ಸಲ್ಲಿಸಲು ಈ ಕೇಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

“ಗೃಹ ಜ್ಯೋತಿ” ಅರ್ಜಿ ಸಲ್ಲಿಸುವ ಸುಲಭ ಮಾರ್ಗ

“ಗೃಹ ಜ್ಯೋತಿ” ಸೇವಾ ಸಿಂಧು ಆನ್‌ಲೈನ್‌ ಅರ್ಜಿ

Telegram Group Join Now
WhatsApp Group Join Now

Leave a Comment

error: Content is protected !!