ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ. ಹಣ ಜಮಾ ಆಗಿದೆ, ನಿಮಗೆ ಬಂತಾ..? | Gruha Lakshmi Scheme 6th Installment Money Credited

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದ ಪಂಚ ಯೋಜನೆಗಳಿಲ್ಲಿ ಪ್ರಮುಖವಾಗಿರುವ ಗೃಹಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ (Gruha Lakshmi Scheme 6th Installment) ಜಮಾ ಆಗಿರುವ ಮಾಹಿತಿಯನ್ನು ಈ ಲೇಖನದಲ್ಲಿ ತಿಳಸಲಿದ್ದೇವೆ. ನಿಮಗೆ ಹಣ ಜಮಾ ಆಗಿದೇಯಾ ಚೆಕ್‌ ಮಾಡಿಕೊಳ್ಳಬಹುದು.

ಕಾಂಗ್ರೆಸ್‌ ಪಕ್ಷ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿತ್ತು, ಅದರಂತೆ ಚುನಾವಣೆಯಲ್ಲಿ ಮತದಾರರು ಕಾಂಗ್ರಸ್‌ ಪಕ್ಷವನ್ನು ಕೈಹಿಡಿಯಿತು, ಭರ್ಜರಿ ಗೆಲವು ಸಾಧಿಸಿದ ಬೆನ್ನಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ.

Gruha Lakshmi Scheme 6th Installment Credited

ಗೃಹಲಕ್ಷ್ಮೀ ಯೋಜನೆಯನ್ನು 2023 ರ ಆಗಸ್ಟ 30 ರಿಂದ ಅನುಷ್ಠಾನಕ್ಕೆ ತರಲಾಗಿದ್ದು, ಈವರೆಗೆ ಐದು ಕಂತುಗಳ 10 ಸಾವಿರ ರೂ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಆರನೇ ಕಂತಿನ 2 ಸಾವಿರ ರೂಪಾಯಿ ಹಣವನ್ನು ಜಿಲ್ಲಾವಾರು ಜಮಾ ಮಾಡಲಾಗುತ್ತೀದೆ.

ಸರ್ಕಾರ ಹೇಳಿರುವಂತೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪ್ರತಿ ತಿಂಗಳ ದಿನಾಂಕ 20 ರ ಒಳಗಾಗಿ ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುತ್ತಿದ್ದಾರೆ.‌

ಫೆಬ್ರವರಿ ತಿಂಗಳ ಆರನೇ ಕಂತಿನ ಹಣ 15-02-2024 ರಂದು ಬೆಳಗ್ಗೆ 6.27 ಕ್ಕೆ ಜಮಾ ಆಗಿರುವ ಮೆಸೇಜ್ ಬಂದಿದೆ. ನಿಮಗೂ ಈ ರೀತಿಯ SMS ಬಂದಿದೆಯಾ? ಎಲ್ಲ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ GruhaLakshmi DBT ಮೂಲಕ ಜಮಾ ಮಾಡಲಾಗುತ್ತದೆ.

6 ನೇ ಕಂತಿನ ಹಣ ಜಮಾ ಆಗಿರುವ ಮೆಸೇಜ್

ಗೃಹಲಕ್ಷ್ಮಿ ಯೋಜನೆಯ ಒಂದೂ ಕಂತಿನ ಹಣ ನಿಮಗೆ ಬರದೆ ಇದ್ದಲ್ಲಿ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.

Gruhalakshmi DBT Status Check

ಗೃಹಲಕ್ಷ್ಮೀ ಯೋಜನೆಯ 2000 ಹಣ ವರ್ಗಾವಣೆ ಆಗಿರುವ ಮಾಹಿತಿಯನ್ನು ಕರ್ನಾಟಕ ಸರ್ಕಾರದ ಅಧಿಕೃತ DBT Karnataka App ಮೂಲಕ ಈ ಕೇಳಗೆ ನೀಡಲಾಗಿರುವ ವಿಧಾನವನ್ನು ಅನುಸರಿಸಿ ನಿಮ್ಮ Gruha Lakshmi DBT Status Check ಮಾಡಬಹುದು.

Step-1: ಮೊದಲನೆಯದಾಗಿ ಕೇಳಗೆ ನೀಡಿರುವ ಲಿಂಕ್‌ ಮೂಲಕ DBT Karnataka ಅಧಿಕೃತ App ಡೌನ್‌ಲೋಡ್‌ ಮಾಡಿಕೊಳ್ಳಿ.

Step-2: App ಓಪನ್‌ ಮಾಡಿ. ಅಲ್ಲಿ Enter Aadhaar Number ಎಂಬಲ್ಲಿ ಫಲಾನುಭವಿಯ ಆಧಾರ ಸಂಖ್ಯೆಯನ್ನು ಎಂಟರ್‌ ಮಾಡಿ. GET OTP ಎಂಬುದರ ಮೇಲೆ ಕ್ಲಿಕ್‌ ಮಾಡಿ.

Step-3: ಫಲಾನುಭವಿಯ ಆಧಾರಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ಗೆ OTP ಬರುತ್ತದೆ. Enter OTP ಎಂದಿರುವಲ್ಲಿ ಆರು ಸಂಖ್ಯೆಗಳ OTP ಎಂಟರ್‌ ಮಾಡಿ. Verify OTP ಬಟನ್‌ ಮೇಲೆ ಕ್ಲಿಕ್‌ ಮಾಡಿ.

Step-4: ಫಲಾನುಭವಿಯ ವಯಕ್ತಿಕ ವಿವರ ನಿಮ್ಮ ಮುಂದೆ ಕಾಣುತ್ತದೆ. ಅಲ್ಲಿ ಮೊಬೈಲ್ ನಂಬರ್‌ ಎಂಟರ್‌ ಮಾಡಲು ತಿಳಿಸಲಾಗಿರುತ್ತದೆ. ಆಧಾರಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ ನಮೂದಿಸಿ. OK ಬಟನ್‌ ಮೇಲೆ ಕ್ಲಿಕ್‌ ಮಾಡಿ.

Step-5: ನಂತರ Create mPIN ಎಂದಿರುತ್ತದೆ. ನಿಮ್ಮ ನೆನಪಿನಲ್ಲಿ ಉಳಿಯುವ ನಾಲ್ಕು ಅಂಕಿಗಳ mPIN ಎಂಟರ್‌ ಮಾಡಿ. Submit ಬಟನ್‌ ಮೇಲೆ ಕ್ಲಿಕ್‌ ಮಾಡಿ.

Step-6: ನಂತರ ಅಲ್ಲಿ Select Beneficiary ಎಂದು ಬರುತ್ತದೆ. ನೀವು Add ಮಾಡಿರುವ ಫಲಾನುಭವಿಯನ್ನು ಆಯ್ಕೆ ಮಾಡಿ.

Step-7: ಫಲಾನುಭವಿಯನ್ನು ಆಯ್ಕೆ ಮಾಡಿದ ನಂತರ ನೀವು Create ಮಾಡಿದ mPIN ಅನ್ನು ಎಂಟರ್‌ ಮಾಡಿ. LOGIN ಬಟನ್‌ ಮೇಲೆ ಕ್ಲಿಕ್‌ ಮಾಡಿ.

Step-8: ಮೊದಲನೇ ಆಯ್ಕೆ Payment Status ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

Step-9: ಅಲ್ಲಿ ನಿಮ್ಮ ಮುಂದೆ Gruhalakshmi DBT Status Check ಮಾಡುವ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್‌ ಮಾಡಿ.

Step-10: ನಿಮ್ಮ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2000 ರೂ. ಜಮಾ ಆಗಿರುವ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಯಾವ ಬ್ಯಾಂಕ್ ಖಾತೆಗೆ‌, ಯಾವ ದಿನಾಂಕದಂದು ಹಣ ವರ್ಗಾವಣೆ ಆಗಿರುತ್ತದೆ ಎಂಬ ವಿವರಗಳನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು.

Gruhalakshmi DBT Status Check ಪ್ರಮುಖ ಲಿಂಕ್‌ಗಳು:
DBT Karnataka App Link:‌ Download ಮಾಡಿ

ಇತರೆ ಮಾಹಿತಿಗಳನ್ನು ಓದಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ವಿದ್ಯಾಸಿರಿ ವಿದ್ಯಾರ್ಥಿ ವೇತನ: ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment