“ಗೃಹ ಲಕ್ಷ್ಮೀ” ಯೋಜನೆ ಅರ್ಜಿ ಆರಂಭ, ಹೇಗೆ ಸಲ್ಲಿಸಬೇಕು? | Gruha Lakshmi Scheme Apply Karnataka 2023 @sevasindhugs.karnataka.gov.in

Telegram Group Join Now
WhatsApp Group Join Now

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ “ಗೃಹ ಲಕ್ಷ್ಮೀ” (Gruha Lakshmi Scheme) ಯೋಜನೆಯ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಇತರೆ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. (sevasindhugs.karnataka.gov.in gruha lakshmi)

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸಲಾಗಿರುತ್ತದೆ. ಮಹಿಳಾ ಸಬಲೀಕರಣದ ದೃಷ್ಠಿಯಿಂದ “ಗೃಹ ಲಕ್ಷ್ಮೀ” ಯೋಜನೆ” (Gruhalakshmi Scheme Apply) ಯನ್ನು ಜಾರಿ ಮಾಡಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೇಸ್‌ ಪಕ್ಷವು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಈ ಯೋಜನೆಯನ್ನು ಅನುಷ್ಠಾಣಕ್ಕೆ ತರಲಾಗಿದೆ.

“ಗೃಹ ಲಕ್ಷ್ಮೀ” ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಲಿದೆ. ಆಗಸ್ಟ್ ತಿಂಗಳಲ್ಲಿ ಮನೆ ಯಜಮಾನಿ ಅಕೌಂಟ್‌ಗೆ 2000 ರೂ. ಜಮಾ ಆಗಲಿದೆ.

“ಗೃಹ ಲಕ್ಷ್ಮೀ” (Gruha Lakshmi) ಯೋಜನೆಯ ಉದ್ದೇಶ

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಬಹು ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ” ಯನ್ನು ಜಾರಿಗೆ ತರಲಾಗಿದೆ.

“ಗೃಹಲಕ್ಷ್ಮಿ ಯೋಜನೆ” (Gruha Lakshmi Scheme) ಷರತ್ತುಗಳು ಮತ್ತು ಮಾರ್ಗಸೂಚಿಗಳು

 • ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
 • ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಈ ಯೋಜನೆ ಅನ್ವಯಿಸಲಾಗುತ್ತದೆ.
 • ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 19 ರಿಂದ ಅರ್ಜಿ ಸಲ್ಲಿಸಬೇಕು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ ನಲ್ಲಿ ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.
 • ಅರ್ಜಿದಾರರಿಗೆ ಗ್ರಾಮ ಓನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರದಲ್ಲಿ ಉಚಿತ ಅರ್ಜಿ ಸಲ್ಲಿಸಲು ಅವಕಾಶವಿದೆ.
 • ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

“ಗೃಹಲಕ್ಷ್ಮಿ ಯೋಜನೆ” (Gruha Lakshmi Scheme) ಇವರಿಗೆ ಸಿಗುವುದಿಲ್ಲ

 • ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ.
  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ GST ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ .

“ಗೃಹ ಲಕ್ಷ್ಮಿ ” ಯೋಜನೆಯ ಸೇವಾ ಸಿಂಧು ಅರ್ಜಿ ಸಲ್ಲಿಸುವುದು ಹೇಗೆ?

 • ಈ ಯೋಜನೆಯ ಸೌಲಭ್ಯ ಪಡೆಯಲು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
 • ಅಥವಾ ಸ್ವಯಂಸೇವಕ “ಪ್ರಜಾಪ್ರತಿನಿಧಿಗಳು” ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳುತ್ತಾರೆ.
 • ರೇಷನ್‌ ಕಾರ್ಡ್‌ನಲ್ಲಿ ಯಜಮಾನಿ ಎಂದು ಗುರುತಿಸಿಕೊಂಡಿರುವ ಮಹಿಳೆಯ ಮೊಬೈಲ್‌ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್’ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
 • “ಗೃಹಲಕ್ಷ್ಮಿ ಯೋಜನೆ” ಅರ್ಜಿಯನ್ನು ಉಚಿತವಾಗಿ ಸಲ್ಲಿಸಲಾಗುತ್ತದೆ. ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
 • ನಿಗದಿ ಪಡಿಸಿದ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಮೇಲೆ ಸೂಚಿಸಿರುವ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
 • ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಬದಲಿಗೆ ಬೇರೆ ಬ್ಯಾಂಕ್‌ ಖಾತೆಯ ಪಾಸ್‌ಬುಕ್‌ ನೀಡಿದರೆ ಆ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗುತ್ತದೆ.
 • ನಿಮ್ಮ ಮೊಬೈಲ್‌ಗೆ ಗೃಹಲಕ್ಷ್ಮೀ ಯೋಜನೆ ನೋಂದಣಿ SMS ಬಂದಿಲ್ಲವೆಂದರೆ ಈ 8147500500 ಹಾಗೂ 8277000555 ಸಹಾಯವಾಣಿಗೆ ನಿಮ್ಮ ರೇಷನ್‌ ಕಾರ್ಡ್‌ ನಂಬರ್‌ನ್ನು SMS ಮಾಡಿ. ನಿಮ್ಮ ನೊಂದಣಿ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿ ದೊರೆಯುತ್ತದೆ.

ʼಗೃಹ ಲಕ್ಷ್ಮೀʼ ಯೋಜನೆ ಮುಖ್ಯಾಂಶಗಳು – Gruha Lakshmi Scheme

 • APL/ BPL ರೇಷನ್‌ ಕಾರ್ಡ್ ಹೊಂದಿದವರಿಗೆ ಗೃಹ ಲಕ್ಷ್ಮೀ ಯೋಜನೆ
 • ಮನೆ ಯಜಮಾನಿ ಅರ್ಜಿ ಜತೆ ತಮ್ಮ ಬ್ಯಾಂಕ್ ಅಕೌಂಟ್, ಆಧಾರ್ ಕಾರ್ಡ್ ನೀಡಬೇಕು.
 • ಆಗಸ್ಟ್ ನಿಂದ ಮನೆ ಯಜಮಾನಿ ಅಕೌಂಟ್‌ಗೆ 2000 ರೂ. ಜಮಾ

Karnataka Gruha Lakshmi Scheme 2023 Apply Online ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ನಿರಂತರವಾಗಿ ಮುಂದುವರೆಯುತ್ತದೆ.

Karnataka Gruha Lakshmi Scheme 2023 Apply Online ಲಿಂಕ್‌ಗಳು:
“ಗೃಹ ಲಕ್ಷ್ಮೀʼ” ಯೋಜನೆ ಮಾಹಿತಿ:‌ Check Out
Gruha Lakshmi Seva Sindhu Website ಲಿಂಕ್-2:‌ sevasindhu.karnataka.gov.in
ಸೇವಾ ಸಿಂಧು ಪೋರ್ಟಲ್ ಲಿಂಕ್: https://sevasindhugs1.karnataka.gov.in/, https://sevasindhugs.karnataka.gov.in/, sevasindhugs.karnataka.gov.in/gruha lakshmi

ಸರ್ಕಾರ ಇತರೆ ಯೋಜನೆಗಳು

ಗೃಹಲಕ್ಷ್ಮಿ ಯೋಜನೆ: 4,449 ಕೋಟಿ ರೂ. ಬಿಡುಗಡೆ

ಗೃಹ ಲಕ್ಷ್ಮಿ ಯೋಜನೆ Status check ಮಾಡಿ

Ration Card Amount Check Karnataka

ರೇಷನ್ ಕಾರ್ಡ್-ಆಧಾರ ಲಿಂಕ್‌ ಮಾಡಿ

ಕರ್ನಾಟಕ ಸರ್ಕಾರ ಖಾತರಿ ಯೋಜನೆಗಳು ಮತ್ತು ಅರ್ಜಿ ಸಲ್ಲಿಕೆ

ಯುವನಿಧಿ ಯೋಜನೆ; ನಿರುದ್ಯೋಗಿಗಳಿಗೆ ಮಾಸಿಕ 3,000 ರೂ.

Telegram Group Join Now
WhatsApp Group Join Now

3 thoughts on ““ಗೃಹ ಲಕ್ಷ್ಮೀ” ಯೋಜನೆ ಅರ್ಜಿ ಆರಂಭ, ಹೇಗೆ ಸಲ್ಲಿಸಬೇಕು? | Gruha Lakshmi Scheme Apply Karnataka 2023 @sevasindhugs.karnataka.gov.in”

Leave a Comment

error: Content is protected !!