ಗೃಹ ಲಕ್ಷ್ಮಿ : ₹2 ಸಾವಿರ ಜಮಾ ಆಗಿರುವ SMS ಬಂತಾ? | Gruha Lakshmi Scheme Karnataka Launched Today

Telegram Group Join Now
WhatsApp Group Join Now

Gruha Lakshmi Scheme Karnataka Launched: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಯನ್ನು ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ‌ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ಸಂಪುಟದ ಸಚಿವರು, ಶಾಸಕರು ಭಾಗವಹಿಸಿದ್ದರು.

ಡಿಜಿಟಲ್ ಬಟನ್ ಒತ್ತಿ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಿದರು. ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತರ ಖಾತೆಗೆ ₹2000 ರೂ. ಯನ್ನು ಅಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ.

Gruha Lakshmi Scheme Karnataka

ಹೀಗೆ SMS ಬರುತ್ತದೆ.
“ಅಭಿನಂದನೆಗಳು, ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ GL002S23*****7 ಅನ್ನು ಅನುಮೋದಿಸಲಾಗಿದೆ. ಆಗಸ್ಟ್ 2023 ರಿಂದ ರೂ.2000 ಮೊತ್ತವನ್ನು ನೋಂದಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಧನ್ಯವಾದಗಳು – ನಿಮ್ಮ ಕರ್ನಾಟಕ ಸರ್ಕಾರ” ಎಂಬ ಮೇಸೆಜ್‌ ಬರುತ್ತದೆ. ನಿಮಗೂ ಬಂತಾ?

[New Link] ಗೃಹಲಕ್ಷ್ಮಿ DBT Status Check ಮಾಡುವ ಅಧಿಕೃತ ಲಿಂಕ್‌ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವ ಬಗ್ಗೆ SMS ಹೀಗೆ ಬರುತ್ತದೆ.

Gruha Lakshmi Amount Credited SMS

ಗೃಹ ಲಕ್ಷ್ಮಿ ಯೋಜನೆ (Gruha Lakshmi Scheme Karnataka) ಗೆ ಅಂದಾಜು 1.28 ಕೋಟಿ ಕುಟುಂಬದ ಯಜಮಾನಿಯರು ನೋಂದಣಿ ಮಾಡಿಕೊಂಡಿದ್ದು, ಅರ್ಹ ಫಲಾನುಭವಿಗಳ ಖಾತೆಗೆ 2000 ರೂ. ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ. ನೇರ ವರ್ಗಾವಣೆ (DBT) ಮಾಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂ. 17,500 ಕೋಟಿ ಮೀಸಲಿಡಲಾಗಿದೆ. ರಾಜ್ಯದ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯ ಲಾಭ ತಲುಪಿಸಿ, ಬಡಜನರಿಗೂ ಸ್ವಾವಲಂಬಿ ಬದುಕು ಕಟ್ಟಿಕೊಡಬೇಕು ಎಂಬ ನಮ್ಮ ಆಶಯಕ್ಕೆ ನಿಮ್ಮ ಬೆಂಬಲವಿರಲಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ

ಗೃಹಲಕ್ಷ್ಮಿ: 2ನೇ ಕಂತಿನ 2,000 ರೂ. ಹಣ ಬಿಡುಗಡೆ ಯಾವಾಗ?

ಗೃಹಲಕ್ಷ್ಮಿ: 2ನೇ ಕಂತಿನ 2,000 ರೂ. ಹಣ ಬಿಡುಗಡೆ ಯಾವಾಗ?

ಗೃಹಲಕ್ಷ್ಮಿ ಯೋಜನೆಯ 2,000 ರೂ. ಹಣ ಬಂದಿಲ್ಲವೇ, Status Check ಮಾಡಿ

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆ..!

ಗೃಹಲಕ್ಷ್ಮಿ ಯೋಜನೆಯ DBT Status Check ಮಾಡಿ

ಉಚಿತವಾಗಿ ಆಧಾರ್ ಕಾರ್ಡ್ Update ಮಾಡಿಸಿ, ಇಲ್ಲ ದಂಡ ಗ್ಯಾರಂಟಿ..!

ಇದೊಂದು ಐತಿಹಾಸಿಕ ದಿನ

ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ ಎಂದಿದ್ದಾರೆ.

ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ. “ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ‌ ಸಮಾಜ ಸ್ಥಾಪನೆ” ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಹೇಗೆ ಖುಷಿ ಹಂಚಿಕೊಂಡಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ

ಅನ್ನಭಾಗ್ಯ ಯೋಜನೆ: DBT Status ಚೆಕ್‌ ಮಾಡಿ

ಗ್ಯಾಸ್ ಸಿಲಿಂಡರ್ ಬೆಲೆ 200ರೂ. ಇಳಿಕೆ: ಸರ್ಕಾರ ಘೋಷಣೆ

Telegram Group Join Now
WhatsApp Group Join Now

Leave a Comment