Gruhalakshmi DBT Status: ಯುಗಾದಿ ಹಬ್ಬಕ್ಕೆ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್; ಗೃಹಲಕ್ಷ್ಮೀ ಯೋಜನೆಯ 2,000 ರೂ. ಜಮಾ

ಎಲ್ಲರಿಗೂ ನಮಸ್ಕಾರ, ಯುಗಾದಿ ಹಬ್ಬಕ್ಕೆ ಮಹಿಳೆಯರಿಗೆ ಗುಡ್ ನ್ಯೂಸ್, ಗೃಹಲಕ್ಷ್ಮೀ ಯೋಜನೆಯ 2,000 ರೂ. (Gruhalakshmi DBT Status Check) ಹಣವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ. ನಿಮಗೂ ದುಡ್ಡು ಜಮಾ ಆಗಿದೆಯಾ ಎಂಬುದನ್ನು ಚೆಕ್‌ ಮಾಡಿಕೊಳ್ಳಿ.

Gruhalakshmi DBT Status Check:

ಕರ್ನಾಟಕ ಸರ್ಕಾರದಿಂದ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳು 2,000 ರೂ. ಹಣವನ್ನು ಸಂದಾಯ ಮಾಡುತ್ತಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣ ಬಾಕಿ ಇದ್ದ ಕಾರಣ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದರು, ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು “2025ರ ಮಾರ್ಚ್‌ ಮುಗಿದ ನಂತರ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಮಾಡುವುದಾಗಿ ತಿಳಿಸಿದ್ದರು”, ಆದರೆ ಯುಗಾದಿ ಹಬ್ಬದ ದಿನವೇ ಹಣ ಜಮಾ ಮಾಡಿ, ಗೃಹಿಣಿಯರಿಗೆ ಸಿಹಿ ಸುದ್ಧಿ ನೀಡಿದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಚಿವೆ ಹೆಬ್ಬಾಳ್ಕರ್‌ ” ಜನವರಿ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣಕ್ಕೆ ಅನುಮೋದನೆ ನೀಡಿ, ಖಜಾನೆಗಳಿಗೆ ಕಳಹಿಸಿದ್ದು, ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಖುಷಿ ಸುದ್ದಿ ನೀಡಲಾಗುತ್ತಿದೆ. 2,000 ರೂ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ” ಎಂದು ಹೇಳಿದ್ದರು.

ಗೃಹಲಕ್ಷ್ಮೀ ಯೋಜನೆಯ ಫೆಬ್ರವರಿ ತಿಂಗಳ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ತಿಳಿಸಿದ್ದಾರೆ.

ಅದರಂತೆ ಇಂದು (ಮಾರ್ಚ್‌ 30 ರ) ಸಂಜೆ ಜಿಲ್ಲಾವಾರು ಹಂತ ಹಂತವಾಗಿ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದ್ದು, ಬಾಕಿ ಉಳಿದಿರುವ 1 ತಿಂಗಳ ಹಣವು ಕೆಲವೇ ದಿನಗಳಲ್ಲಿ ಯಜಮಾನಿಯರ ಖಾತೆಗೆ ಜಮಾ ಆಗುವ ಸಾಧ್ಯತೆ ಇದೆ.

ಇತರೆ ಮಾಹಿತಿ ಓದಿ:

ಅನ್ನಭಾಗ್ಯ ಯೋಜನೆಯ DBT ಹಣ ಜಮಾ ಆಗಿದೆ

PM Kisan DBT: PM ಕಿಸಾನ್ ಯೋಜನೆಯ 2,000 ರೂ. ಹಣ ಬಿಡುಗಡೆ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment