ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ (Guarantee Schemes) ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಈ ಯೋಜನೆಗಳಿಂದ ಬಂದಿರುವ ಹಣದಿಂದ ಕೆಲವು ಮಹಿಳೆಯರು ತಮ್ಮ ಅಗತ್ಯ ವಸ್ತುಗಳನ್ನು ಖರೀದಿಸಿದರೆ ಇನ್ನು ಕೆಲವು ಮಹಿಳೆಯರು ತಮ್ಮ ಜೀವನವನ್ನು ಕಟ್ಟಿಕೊಟ್ಟಿದ್ದಾರೆ.
Guarantee Schemes Update 2025:
ಆದರೆ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಯ ಹಣವು ಸಂದಾಯವಾಗಿಲ್ಲ ಎಂದು ಮಹಿಳೆಯರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತಾಗಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಮಾಹಿತಿ ನೀಡಿದ್ದಾರೆ.
ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಯಾವುದೇ ಯೋಜನೆಯನ್ನು (Guarantee Schemes) ನಿಲ್ಲಿಸುವ ಪ್ರಶ್ನೆಯೇ ಇಲ್ಲ ಯಾವುದು ಪಾವತಿ ಮಾಡಿರುವುದಿಲ್ಲ ಅದನ್ನು ಪಾವತಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದ್ದಾರೆ.
2025 ರ ಮಾರ್ಚ್ 3 ರಿಂದ ವಿಧಾನಮಂಡಲದ ಅಧಿವೇಶನ ಜರಗಲಿದೆ. ಹೊಸ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ಮೂರನೇ ತಾರೀಖಿನಂದು ರಾಜ್ಯಪಾಲರು ಭಾಷಣ ಮಂಡಿಸುತ್ತಾರೆ, ಅದರ ಮೇಲೆ ಚರ್ಚ್ ಮಂಗಳವಾರ, ಬುಧವಾರ, ಗುರುವಾರ ನಡೆಯುತ್ತದೆ. ಶುಕ್ರವಾರ ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸುತ್ತೇನೆ ಎಂದು CM ಸಿದ್ದರಾಮಯ್ಯನವರು ಹೇಳಿದ್ದಾರೆ.
ಅನ್ನಭಾಗ್ಯ ಅಕ್ಕಿಯ ಹಣ ಹಾಗೂ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ಮೂರು ತಿಂಗಳಿಂದ ಬಂದಿಲ್ಲ. ಈ ಹಣವನ್ನು ಇಷ್ಟರಲ್ಲೇ ಹಾಕುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ಉಪ ಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸರ್ಕಾರ ಇತರೆ ಯೋಜನೆಗಳು:
Ration Card Correction: ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರೀಯೆ ಆರಂಭ