How To Apply Gruha Lakshmi Scheme: ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾದ ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನಿಮಗೆ ಅರ್ಜಿ ಸಲ್ಲಿಸಲು ಆಗುತ್ತಿಲ್ಲವೇ? ಹಾಗಾದರೆ ಈ ಸುದ್ದಿಯನ್ನು ಓದಿ ನಿಮ್ಮ ನಿಮಗೆ ಉಪಯುಕ್ತ ಮಾಹಿತಿ ಸಿಗಲಿದೆ.
ಹೌದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಐದು ಯೋಜನೆಗಳನ್ನು ಜಾರಿ ಮಾಡುವುದಾಗಿ ಕಾಂಗ್ರೆಸ್ ಪಕ್ಷ ತಿಳಿಸಿತ್ತು ಅದರಂತೆ ಇಗಾಗಲೇ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಜಾರಿಯಾಗಿದ್ದು, ಜನರು ಅದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.
How To Apply Gruha Lakshmi Scheme In Karnataka
ಅದರಂತೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರೀಯೆ ಆರಂಭವಾಗಿದೆ. ಡಿಸೆಂಬರ್ ತಿಂಗಳಲ್ಲಿ ಯುವ ನಿಧಿ ಯೋಜನೆ ಜಾರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಇಲ್ಲಿಯವರೆಗೆ 1.5 ಕೋಟಿಗೂ ಅಧಿಕ ಮನೆ ಯಜಮಾನಿಯರು ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದೆ ತಿಂಗಳು 27 ರಂದು ಈ ಯೋಜನೆಗೆ ಚಾಲನೆ ದೊರೆಯಲಿದ್ದು ಅರ್ಜಿ ಸಲ್ಲಿಸಿದ ಗೃಹಿಣಿಯರ ಖಾತೆಗೆ ಹಣ ಜಮಾ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಬಹಳಷ್ಟು ಅರ್ಹ ಕುಟುಂಬಗಳಿಗೆ BPL, APL ಕಾರ್ಡ್ ಇಲ್ಲದಿರುವುದರಿಂದ ಗೃಹ ಲಕ್ಷ್ಮಿ ಯೋಜನೆಯ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಅನೇಕರು ಇಗಾಗಲೇ ಅರ್ಜಿ ಸಲ್ಲಿಸಿದ್ದಾರೆ ಆದರೆ ಅವರಿಗೆ ಇನ್ನು ಪಡಿತರ ಚೀಟಿಗಳು ಸಿಕ್ಕಿಲ್ಲ ಅವರು ಕೂಡ ಈ ಯೋಜನೆಯ ಲಾಭ ಪಡೆಯಲು ಆಗುತ್ತಿಲ್ಲ.
ಹೊಸದಾಗಿ ಮಾಡಿಸಿಕೊಂಡ ಬಿಪಿಎಲ್, ಎಪಿಎಲ್ ಕಾರ್ಡ್‌ದಾರರಿಗೆ ಗೃಹ ಲಕ್ಷ್ಮಿಯ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು ಆದರೆ ಸಚಿವರು ಹೊಸ ಮಾಹಿತಿಯನ್ನು ನೀಡಿದ್ದಾರೆ.
“ಯಾರ ಬಳಿ BPL, APL ಕಾರ್ಡ್ ಇಲ್ಲವೋ ಅಂತವರು ಹೊಸ ಕಾರ್ಡ್ ಮಾಡಿಸಿಕೊಂಡು ನಂತರ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಮುಂದುವರೆದು ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ ನಿರಂತರವಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತದೆ. ಹೊಸ ಪಡಿತರ ಚೀಟಿ ಪಡೆದು ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ
✅ರೇಷನ್ ಕಾರ್ಡ್ ತಿದ್ದುಪಡಿ, ಸದಸ್ಯರ ಸೇರ್ಪಡೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್