PUC ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ, ರಾಜ್ಯ ಸರ್ಕಾರದಿಂದ ʼವಿದ್ಯಾರ್ಥಿ ಸ್ನೇಹಿ’ ಕ್ರಮ

Telegram Group Join Now
WhatsApp Group Join Now

ರಾಜ್ಯದಲ್ಲಿ ದ್ವಿತೀಯ ಪಿಯುಸಿ (PUC Karnataka) ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಒಂದು ಕ್ರಮ ಪಿಯುಸಿ ಪರೀಕ್ಷೆ ಬರೆಯಲಿರುವ ಸ್ಟೂಡೆಂಟ್ಸ್ʼಗೆ ಉಪಯೋಗವಾಗಲಿದೆ.

ಎನಂತಿರಾ ಅದು, ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. 2023ರ ಮಾರ್ಚ್‌ನಲ್ಲಿ ನಡೆಯುವ ‘ವಾರ್ಷಿಕ ಪರೀಕ್ಷೆ’ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ.

ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಒಂದು ಅಂಕ’ವನ್ನೂ ಪರಿಗಣಿಸುವ ʼವಿದ್ಯಾರ್ಥಿ ಸ್ನೇಹಿ’ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈ ಸಂಬಂಧ ಶೀಘ್ರದಲ್ಲೇ ‘ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997’ಕ್ಕೆ ತಿದ್ದುಪಡಿ ತರಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರು ಟ್ವೀಟ್ ಮಾಡಿ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

PUC Board Karnataka Current News 2023

Telegram Group Join Now
WhatsApp Group Join Now

2 thoughts on “PUC ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ, ರಾಜ್ಯ ಸರ್ಕಾರದಿಂದ ʼವಿದ್ಯಾರ್ಥಿ ಸ್ನೇಹಿ’ ಕ್ರಮ”

Leave a Comment