Job News: ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ | Udupi District Court Recruitment 2022 Apply Online

Telegram Group Join Now
WhatsApp Group Join Now

Udupi District Court Recruitment 2022: ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ʼಲೈನ್ ಮೂಲಕ ನಿಗದಿ ಪಡಿಸಿರುವ ಕೊನೆಯ ದಿನಾಂಕದೊಗಾಗಿ ಅರ್ಜಿ ಸಲ್ಲಿಸಬಹುದು. ಈ ಕೇಳಗಿನಂತೆ ಮಾಹಿತಿ ನೀಡಲಾಗಿದೆ.

Udupi District Court Recruitment 2022 ಅಧಿಸೂಚನೆ

  • ಇಲಾಖೆ ಅಥವಾ ಸಂಸ್ಥೆಯ ಹೆಸರು: ಉಡುಪಿ ಜಿಲ್ಲಾ ನ್ಯಾಯಾಲಯ
  • ಹುದ್ದೆಯ ಹೆಸರು: ಬೆರಳಚ್ಚು ನಕಲುಗಾರ
  • ಒಟ್ಟು ಹುದ್ದೆಗಳು: 03
  • ವೇತನ: Rs.21400-42000/-
  • ನಿಯುಕ್ತಿ ಸ್ಥಳ: ಕರ್ನಾಟಕ
  • ಉದ್ಯೋಗ ಕೆಟಗರಿ: Govt Jobs in Karnataka 2022

ವಿದ್ಯಾರ್ಹತೆ:

  • ಉಡುಪಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ
    ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
    ಅಥವಾ
  • ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟೇರಿಯಲ್ ಪ್ರಾಕ್ಟಿಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ

ಆಯ್ಕೆ ವಿಧಾನ:

ಮೇಲೆ ಹೇಳಿದ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು, ಆರ್ಹತಾ ಪರೀಕ್ಷೆಯಲ್ಲಿ ಬೆರಳಚ್ಚು ಯಂತ್ರ ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡಿಸಲಾಗುವುದು.

ವಯೋಮಿತಿ:

  • ಕನಿಷ್ಠ 18 ವರ್ಷಗಳು
  • ಸಾಮಾನ್ಯ ವರ್ಗ – 35 ವರ್ಷ
  • 2ಎ,2ಬಿ,3ಎ,3ಬಿ – 38 ವರ್ಷ
  • ಪ.ಜಾತಿ/ಪ.ಪಂಗಡ/ ಪ್ರವರ್ಗ-1 – 40 ವರ್ಷ

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 200 ರೂ
  • ಪ.ಜಾ, ಪ.ಪಂ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: 100 ರೂ
  • ವಿಕಲಚೇತನ ಅಭ್ಯರ್ಥಿಗಳಿಗೆ: 100 ರೂ
  • ಶುಲ್ಕ ಪಾವತಿ ವಿಧಾನ: ಆನ್‌ಲೈನ್/ಚಲನ್

ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ17 ಆಗಸ್ಟ್ 2022
ಆನ್‌ಲೈನ್‌ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ26 ಸಪ್ಟೆಂಬರ್ 2022
ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ28 ಸಪ್ಟೆಂಬರ್ 2022

Udupi District Court Recruitment 2022 ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಕೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್districts.ecourts.gov.in

Telegram Group Join Now
WhatsApp Group Join Now

Leave a Comment