ಅಗ್ನಿಶಾಮಕ ಇಲಾಖೆಯ ಆಯ್ಕೆ ಪಟ್ಟಿ ಪ್ರಕಟ | Karnataka Fire Department Results

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿನ ಅಗ್ನಿಶಾಮಕ ಚಾಲಕ (Fireman Driver) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಗಸ್ಟ್‌ 26 ರಂದು ಪ್ರಕಟಿಸಲಾಗಿದೆ.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (ವೃಂದ ಮತ್ತು ನೇಮಕಾತಿ) ನಿಯಮಗಳು 2013 ರ ಅನ್ವಯ ಅಗ್ನಿಶಾಮಕ ಚಾಲಕ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. (10 ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಹಾಗೂ ಭಾರೀ ವಾಹನ ಚಾಲನಾ ಪರವಾನಿಗೆ ಹೊಂದಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. (10 ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡವಾರು ಅಂಕಗಳ ಆಧಾರದ ಮೇಲೆ ಶೇಕಡ 1:5 ಅನುಪಾತದಂತೆ ಅರ್ಹ ಅಭ್ಯರ್ಥಿಗಳಿಗೆ ದೇಹದಾರ್ಡ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ನಡೆಸಲಾಗಿತ್ತು.

ದೇಹದಾರ್ಡ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಭಾರೀ ವಾಹನ ಚಾಲನಾ ಪರೀಕ್ಷೆಗಳನ್ನು ನಡೆಸಿ ಪೂರ್ಣಗೊಳಿಸಲಾಗಿರುತ್ತದೆ ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಇಲಾಖೆಯ ನಿಯಮಗಳು-2013 ರನ್ವಯ ಮೇಲ್ಕಂಡ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಎಸ್.ಎಸ್.ಎಲ್.ಸಿ. (10 ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡವಾರು ಅಂಕಗಳು ಹಾಗೂ ಭಾರೀ ವಾಹನ ಚಾಲನಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಢೀಕರಿಸಿ ಮೆರಿಟ್ ಹಾಗೂ ಅಧಿಸೂಚನೆ ಮೀಸಲಾತಿಯನುಸಾರ ಅರ್ಹ ಅಗ್ನಿಶಾಮಕ ಚಾಲಕ ಹುದ್ದೆಯ ಉಳಿದ ಮೂಲ ವೃಂದ (Non KK) 199 ಮತ್ತು ಕಲ್ಯಾಣ ಕರ್ನಾಟಕ (KK) ವೃಂದದ 28 ಒಟ್ಟು 227 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಷರತ್ತುಗಳನ್ವಯ ಪ್ರಕಟಿಸಲಾಗಿರುತ್ತದೆ ಎಂದು ಅಗ್ನಿಶಾಮಕ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಅಗ್ನಿಶಾಮಕ ಚಾಲಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ: ಇಲ್ಲಿ ಕ್ಲಿಕ್‌ ಮಾಡಿ

ಈ ಮಾಹಿತಿ ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೆವೆ. ನಿರಂತರ ಉದ್ಯೋಗ ಅಪ್’ಡೆಟ್ಸ್’ಗಾಗಿ ನಮ್ಮ Telegram group ಗೆ Join ಆಗಿರಿ. ಧನ್ಯವಾದಗಳು. Join telegram

Leave a Comment