ಉಚಿತ ಲ್ಯಾಪ್‍ಟ್ಯಾಪ್‍ ವಿತರಣೆ | Karnataka Free Laptop Scheme 2023 Distribution

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ (Karnataka Free Laptop Scheme) ವಿರತಣೆ ಮಾಡಲಾಗುತ್ತಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪ್ರಸ್ತುತ ಶಿಕ್ಷಣ ಪದ್ದತಿಗೆ ಅನುಕೂಲವಾಗುವಂತೆ ಲ್ಯಾಪ್‍ಟ್ಯಾಪ್‍ಗಳನ್ನು ವಿತರಣೆ ಮಾಡುತ್ತಿರುವುದು ಕಾರ್ಮಿಕರ ಮಕ್ಕಳು ಉನ್ನತ ವಿದ್ಯಾಭ್ಯಾಸ ಮಾಡಲು ಹಾಗೂ ಉನ್ನತ ಸ್ಥಾನಕ್ಕೇರಲು ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಡಿ.16 ರಂದು ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ರಾಜ್ಯ ಕಾರ್ಮಿಕ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟ್ಯಾಪ್ ವಿತರಣೆ ಹಾಗೂ ಗಿಗ್ ಕಾರ್ಮಿಕರ ಮತ್ತು ಪತ್ರಿಕಾ ವಿತರಕ ಕಾರ್ಮಿಕರ ನೊಂದಣಿ ಪ್ರಕ್ರಿಯೆ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

2022-23 ನೇ ಸಾಲಿಗೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ 9,61,930 ಫಲಾನುಭವಿಗಳಿಗೆ ರೂ.225,98 ಕೋಟಿ ಮೊತ್ತದ ಶೈಕ್ಷಣಿಕ ಧನಸಹಾಯವನ್ನು ವಿತರಿಸಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಮಿಕ ಇಲಾಖೆಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ ವಿರತಣೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಜಿಲ್ಲಾವಾರು ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿದೆ.

Karnataka Free Laptop Scheme 2023

Karnataka Free Laptop Scheme 2023 Distribution

ಇತರೆ ಮಾಹಿತಿಗಳನ್ನು ಓದಿ

ವಿದ್ಯಾರ್ಥಿಗಳಿಗೆ 20,000 ರೂ. ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಸರ್ಕಾರದಿಂದ ವಿದ್ಯಾರ್ಥಿಗಳಿಗೆ 35,000 ರೂ. ಪ್ರೋತ್ಸಾಹಧನ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ಗೃಹಲಕ್ಷ್ಮೀ ಯೋಜನೆ DBT Status Check

Telegram Group Join Now
WhatsApp Group Join Now

Leave a Comment

error: Content is protected !!