ಕರ್ನಾಟಕ ಪೊಲೀಸ್ ಇಲಾಖೆಯ ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Karnataka Police Jobs 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Karnataka Police Jobs 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಪೊಲೀಸ್ ಇಲಾಖೆ
ವೇತನ ಶ್ರೇಣಿ: 23,500 ರಿಂದ 47,650 ರೂ.
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪೊಲೀಸ್ ಇಲಾಖೆ ಅಧಿಸೂಚನೆ ಪ್ರಕಾರ.
ವೇತನ ಶ್ರೇಣಿ:
ವಾದ್ಯಗಾರರು – 23,500 ರಿಂದ 47,650 ರೂ
ವಯೋಮಿತಿ:
ಕರ್ನಾಟಕ ಪೊಲೀಸ್ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳಿಗೆ: 200 ರೂ.
SC/ST/ Cat-I ಅಭ್ಯರ್ಥಿಗಳಿಗೆ: 100 ರೂ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಅರ್ಜಿಗಳನ್ನು ಕಮಾಂಡೆಂಟ್, ಕೆ.ಎ.ಆರ್.ಪಿ, ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ, ಮೈಸೂರು-570011 ರವರ ಕಛೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ 29-04-2023 ರ ಮೊದಲು ಕಛೇರಿಗೆ ತಲುಪುವಂತೆ ಕಳುಹಿಸುವುದು.
Karnataka Police Jobs 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-04-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: ksp.karnataka.gov.in