TET Exam 2023: ಪರೀಕ್ಷೆಗೆ ಅರ್ಜಿ ಆಹ್ವಾನ | Karnataka TET Exam 2023 Application Form, Apply Online, Last Date

Telegram Group Join Now
WhatsApp Group Join Now

2023 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023) ನಡೆಸಲು ಶಾಲಾ ಶಿಕ್ಷಣ ಇಲಾಖೆಯು ಅಧಿಸೂಚನೆ (Karnataka TET Exam 2023) ಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಲಾದ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು, ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (karnataka tet application form 2023) ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಈ ಕೇಳಗೆ ಮಾಹಿತಿಯನ್ನು ನೀಡಲಾಗಿದೆ.

Karnataka TET Exam 2023 Notification ಸಂಕ್ಷೀಪ್ತ ವಿವರ

ಪರೀಕ್ಷೆ ಹೆಸರುಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)
ಪರೀಕ್ಷೆ ನಡೆಸುವ ಇಲಾಖೆಶಾಲಾ ಶಿಕ್ಷಣ ಇಲಾಖೆ
Karnataka TET Exam 2023 Date03-09-2023
Karnataka TET Exam 2023 Last Date05-08-2023
TET Exam 2023 ಪರೀಕ್ಷೆಯ ಆರ್ಜಿ ಆರಂಭ ದಿನಾಂಕ14-07-2023

TET 2023 ಪರೀಕ್ಷಾ ಶುಲ್ಕ ವಿವರ:

ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ:

  • ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿ – 700 ರೂ.
  • ಪ.ಜಾ./ಪ.ವರ್ಗ/ಪ್ರವರ್ಗ-1 ಮಾತ್ರ: 350 ರೂ.

ಪತ್ರಿಕೆ-1 ಹಾಗೂ ಪತ್ರಿಕೆ- 2 (ಎರಡು ಪತ್ರಿಕೆ ಬರೆಯುವ ಅಭ್ಯರ್ಥಿಗಳಿಗೆ) :

  • ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿ – 1,000 ರೂ.
  • ಪ.ಜಾ./ಪ.ವರ್ಗ/ಪ್ರವರ್ಗ-1 ಮಾತ್ರ: 500 ರೂ.

ವಿಶೇಷ ಅಗತ್ಯತೆಯುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇರುತ್ತದೆ.

ಪತ್ರಿಕೆ-1: ಅಗತ್ಯವಿರುವ ಕನಿಷ್ಠ ವಿದ್ಯಾರ್ಹತ: (1 ರಿಂದ 5ನೇ ತರಗತಿಗಳಿಗೆ)

  • ಪಿ.ಯು.ಸಿ/ ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ D.EL.Ed. ಕೋರ್ಸಿನ (ಯಾವ ಹೆಸರಿನಿಂದ ಕರೆಯುವರೋ ಆ ಹೆಸರಿನ) ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಕೋರ್ಸಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
  • ಪಿ.ಯು.ಸಿ / ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು. ಹಾಗೂ ನಾಲ್ಕು ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್‌ನಲ್ಲಿ (B.El.Ed) ತೇರ್ಗಡೆ ಹೊಂದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
  • ಸೀನಿಯರ್ (ತತ್ಸಮಾನ) ಪರೀಕ್ಷೆಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ ಡಿಪ್ಲೊಮೊ ಇನ್ ಎಜುಕೇಶನ್ (ವಿಶೇಷ ಶಿಕ್ಷಣ) ತೇರ್ಗಡೆ ಹೊಂದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
  • ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ D.El.Ed. ಕೋರ್ಸಿನ (ಯಾವ ಹೆಸರಿನಿಂದ ಕರೆಯುವರೋ ಆ ಹೆಸರಿನ) ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
  • ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಬಿ.ಇಡಿ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು.

ಪತ್ರಿಕೆ-2: ಅಗತ್ಯವಿರುವ ಕನಿಷ್ಟ ವಿದ್ಯಾರ್ಹತೆ: (6 ರಿಂದ 8ನೇ ತರಗತಿಗಳಿಗೆ)

  • ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ D.EL.Ed ಕೋರ್ಸಿನ (ಯಾವ ಹೆಸರಿನಿಂದ ಕರೆಯುವರೋ ಆ ಹೆಸರಿನ) ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಕೋರ್ಸಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
  • ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಬಿ.ಇಡಿ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪದವಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
  • ಪಿ.ಯು.ಸಿ/ ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ನಾಲ್ಕು ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್‌ನಲ್ಲಿ (B.El.Ed) ತೇರ್ಗಡೆ ಹೊಂದಿರುವವರು ಅಥವಾ ಕೋರ್ಸಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು. ಅಥವಾ
  • ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷದ ಬಿ.ಇಡಿ (ವಿಶೇಷ ಶಿಕ್ಷಣ) ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪದವಿಗೆ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು.

ಸೂಚನೆ:

  1. ಪರಿಶಿಷ್ಟ ಜಾತಿ, ಪರಿಶಿಷ್ಟವರ್ಗ, ಪ್ರವರ್ಗ-1, ವಿಶೇಷ ಅಗತ್ಯತೆಯುಳ್ಳ ಅಭ್ಯರ್ಥಿಗಳಿಗೆ ಅರ್ಹ ವಿದ್ಯಾರ್ಹತೆಯಲ್ಲಿ ನಿಗದಿಪಡಿಸಿರುವ ಅರ್ಹ ಅಂಕಗಳಲ್ಲಿ ಶೇ.5% ರಷ್ಟು ವಿನಾಯಿತಿ ನೀಡಲಾಗಿದೆ.
  2. NCET ಯಿಂದ ಮಾನ್ಯತೆ ಪಡೆದಂತಹ ಡಿಪ್ಲೋಮಾ/ಪದವಿ ಕೋರ್ಸುಗಳನ್ನು ಮಾತ್ರ ಕೆ.ಆರ್.ಟಿ.ಇ.ಟಿ. ಪರೀಕ್ಷೆ ಬರೆಯಲು ಇಚ್ಚಿಸುವ ಅಭ್ಯರ್ಥಿಗಳ ವಿದ್ಯಾರ್ಹತೆಯಲ್ಲಿ ಪರಿಗಣಿಸಲಾಗಿದೆ. ಆದಾಗ್ಯೂ ರಿಹ್ಯಾಬಿಅಟೇಷನ್ ಕೌನ್ಸಿಲ್ ಆಫ್ ಇಂಡಿಯಾ (RCI) ದಿಂದ ಮಾನ್ಯತೆ ಪಡೆದಂತಹ ಡಿಪ್ಲೋಮಾ ಇನ್ ಎಜುಕೇಶನ್ (ವಿಶೇಷ ಶಿಕ್ಷಣ) ಹಾಗೂ ಬಿ.ಇಡಿ (ವಿಶೇಷ ಶಿಕ್ಷಣ) ಪದವಿಯನ್ನು ಸಹ ಪರಿಗಣಿಸಲಾಗಿದೆ.
  3. ಮೇಲ್ಕಾಣಿಸಿದ ಕನಿಷ್ಠ ವಿದ್ಯಾರ್ಹತೆಗಳು ಭಾಷೆ, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳನ್ನು ಬೋಧಿಸಲ್ಪಡುವ ಶಿಕ್ಷಕರಿಗೆ ಮಾತ್ರ ಅನ್ವಯಿಸುತ್ತದೆ.
  4. ಮೇಲ್ಕಂಡ ಯಾವುದೇ ಕನಿಷ್ಟ ವಿದ್ಯಾರ್ಹತೆಗಳನ್ನು ಹೊಂದಿರದ ಅಭ್ಯರ್ಥಿಗಳು “ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ” ಹಾಜರಾಗಲು ಅರ್ಹರಿರುವುದಿಲ್ಲ.

Karnataka TET Exam 2023 ಪರೀಕ್ಷೆ ಕುರಿತು ಅಭ್ಯರ್ಥಿಗಳಿಗೆ ಸೂಚನೆಗಳು

  1. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2023 ಕ್ಕೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ: 14-07-2023 ರಿಂದ 05-08-2023ರ ಒಳಗಾಗಿ ಇಲಾಖಾ ವೆಬ್‌ಸೈಟ್ www.schooleducation.kar.nic.in ಮೂಲಕ ಸಲ್ಲಿಸುವುದು.
  1. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯನ್ನು ಪೂರ್ಣ ವಿವರಗಳೊಂದಿಗೆ ಭರ್ತಿ ಮಾಡಿ, ಸ್ಕ್ಯಾನ್ ಮಾಡಲಾದ ತಮ್ಮ ಭಾವಚಿತ್ರ (5kb to 50kb) ಹಾಗೂ ಸಹಿಯನ್ನು (5kb to 40kb) ಜೆ.ಪಿ.ಇ.ಜೆ. (JP.E.G. Format) ನಮೂನೆಯಲ್ಲಿ ಅಪ್‌ಲೋಡ್ ಮಾಡುವುದು.
  2. ಆನ್‌ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಪೂರ್ಣವಿವರಗಳನ್ನೊಳಗೊಂಡ ಅರ್ಜಿಯ ಕಂಪ್ಯೂಟರ್ ಜನರೇಟೆಡ್ ಪ್ರತಿಯ Print out ನ್ನು ಪಡೆದುಕೊಳ್ಳುವುದು.

Karnataka TET Exam 2023 ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭ: 14-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-08-2023
ಪರೀಕ್ಷಾ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 05-08-2023
TET ಪರೀಕ್ಷೆ 2023 ದಿನಾಂಕ: 03-09-2023

Karnataka TET Exam 2023 ಪ್ರಮುಖ ಲಿಂಕ್‌ಗಳು:
TET Exam 2023 Notification: ಡೌನ್‌ಲೋಡ್
TET ಪತ್ರಿಕಾ ಪ್ರಟಕಣೆ: ಡೌನ್‌ಲೋಡ್
ಸೂಚನೆಗಳು: ಡೌನ್‌ಲೋಡ್
TET Exam 2023‌ Online Application: Apply ಮಾಡಿ
ಅಧಿಕೃತ ವೆಬ್‌ಸೈಟ್:‌ schooleducation.kar.nic.in

Karnataka TET Exam 2023 Date / Time Table

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023) ಯನ್ನು ದಿನಾಂಕ 03-09-2023 ರಂದು ನಡೆಸುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. TET 2023 ಪರೀಕ್ಷಾ ವೇಳಾಪಟ್ಟಿಯು ಈ ಕೇಳಗಿನಂತಿದೆ.

Karnataka TET Exam 2023 Date, Time Table
Karnataka TET Exam 2023 Time Table

Karnataka TET Hall Ticket Download 2023 ದಿನಾಂಕ

ಅಭ್ಯರ್ಥಿಗಳು KARTET-2023 ಪರೀಕ್ಷೆಯ ಪ್ರವೇಶ ಪತ್ರವನ್ನು 23-08-2023 ರಿಂದ 01-09-2023 ರವರೆಗೆ ಇಲಾಖಾ ವೆಬ್‌ಸೈಟ್ www.schooleducation.kar.nic.in ನಿಂದ ಡೌನ್‌ಲೋಡ್‌ (TET Hall Ticket 2023) ಮಾಡಿಕೊಳ್ಳಬಹುದು.

ಸೂಚನೆ: ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ಸಲ್ಲಿಸಿರುವ ಮಾಹಿತಿಯು ಪ್ರವೇಶ ಪತ್ರದಲ್ಲಿ ನಮೂದಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳ ಮಾಹಿತಿ, ಭಾವಚಿತ್ರ ಹಾಗೂ ಅವರ ಸಹಿಗೆ ಸಂಬಂಧಪಟ್ಟಂತೆ ಏನಾದರೂ ವ್ಯತ್ಯಾಸವಿದ್ದಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿರುವುದಿಲ್ಲ ಹಾಗೂ ಈ ಸಂಬಂಧ ಉದ್ಭವಿಸುವ ಸಮಸ್ಯೆಗಳಿಗೆ ಕೇಂದ್ರೀಕೃತ ದಾಖಲಾತಿ ಘಟಕವು ಜವಾಬ್ದಾರಿಯಾಗಿರುವುದಿಲ್ಲ.

Karnataka TET Exam 2023: ಆನ್‌ಲೈನ್ ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮ:

  1. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್ www.schooleducation.kar.nic.in ನಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಓದಿ, ಅರ್ಥೈಸಿಕೊಳ್ಳುವುದು.
  2. ‘Registration’ ಮತ್ತು ‘Login’ ನೊಂದಿಗೆ ಆನ್‌ಲೈನ್ ಅರ್ಜಿಗಳನ್ನು ವಿವರಗಳೊಂದಿಗೆ ಭರ್ತಿ ಮಾಡುವುದು.
  3. User ID ಮತ್ತು Password ಅನ್ನು ಅಭ್ಯರ್ಥಿಗಳು ಅತ್ಯಂತ ಜಾಗರೂಕತೆಯಿಂದ ಇತರರಿಗೆ ಸಿಗದಂತೆ ಗೊತ್ತಾಗದಂತೆ ಸಂರಕ್ಷಿಸಿಕೊಳ್ಳತಕ್ಕದ್ದು, ಒಂದು ವೇಳೆ ತಮ್ಮ User ID ಮತ್ತು Password ಇತರೆ ಯಾರಿಗಾದರೂ ಲಭ್ಯವಾದಲ್ಲಿ ತಮ್ಮ ಲಾಗಿನಲ್ಲಿ ಲಾಗಿನ್ ಆಗಿ ತಮ್ಮ ಮಾಹಿತಿಯನ್ನು ವ್ಯತ್ಯಾಸ ಮಾಡಬಹುದು ಅಥವಾ ವಿರೂಪಗೊಳಿಸುವ ಸಾಧ್ಯತೆಯಿರುತ್ತದೆ. ಇದಕ್ಕೆ ಸಿ.ಪಿ.ಸಿ ಜವಾಬ್ದಾರಿಯಾಗಿರುವುದಿಲ್ಲ.
  4. ಸ್ಕಾನ್ ಮಾಡಿದ ಅಭ್ಯರ್ಥಿಯ ಭಾವಚಿತ್ರ (5KB ಕ್ಕಿಂತಲೂ ಕಡಿಮೆ) ಹಾಗೂ ಸಹಿಯನ್ನು (40KB ಕ್ಕಿಂತಲೂ ಕಡಿಮೆ) ಅಪ್‌ಲೋಡ್ ಮಾಡುವುದು.
  5. ಪರೀಕ್ಷಾ ಶುಲ್ಕವನ್ನು Internet Banking/Debit Card/ Credit Card/ UPI ಚಲನ್ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕಿನಲ್ಲಿ ಮಾತ್ರ ಚಲನ್ ಮೂಲಕ ಶುಲ್ಕ ಪಾವತಿಸುವುದು) ಮೂಲಕವೇ ಪಾವತಿಸತಕ್ಕದ್ದು.
  6. ಅಭ್ಯರ್ಥಿಗಳು ಒಮ್ಮೆ ಪಾವತಿಸಿರುವ ಪರೀಕ್ಷಾ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ಮರುಪಾವತಿ ಮಾಡುವುದಿಲ್ಲ ಅಥವಾ ಮುಂದಿನ ಪರೀಕ್ಷೆಗಳಿಗೆ ಹೊಂದಾಣಿಕೆ ಮಾಡಲಾಗುವುದಿಲ್ಲ.
  7. INTERNET Crash ಅನ್ನು ತಪ್ಪಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆವಿಗೂ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸುವುದು.
  8. ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು WWW.schooleducation.kar.nic.in ವೆಬ್‌ಸೈಟ್ ಮೂಲಕ ಶುಲ್ಕ ಪಾವತಿಸಿದ ನಂತರ, ಅಭ್ಯರ್ಥಿಗಳ User name and Password ಬಳಸಿ: ಡೌನ್‌ಲೋಡ್ ಮಾಡಿಕೊಳ್ಳುವುದು. ಅರ್ಜಿ ಶುಲ್ಕ ಪಾವತಿಯಾದ ಎರಡು ದಿನಗಳ ನಂತರದಲ್ಲೂ ಪೇಮೆಂಟ್ ಸ್ಟೇಟಸ್ (Payment Status) ಪೆಂಡಿಂಗ್ ಎಂದು ಕಂಡುಬಂದಲ್ಲಿ ಕೇಂದ್ರೀಕೃತ ದಾಖಲಾತಿ ಘಟಕವನ್ನು ಸಂಪರ್ಕಿಸುವುದು.
  9. ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಲಾದ ತಮ್ಮ ಆನ್‌ಲೈನ್ ಅರ್ಜಿಯನ್ನು ಮುಂದಿನ ದಿನಗಳಲ್ಲಿ ಯಾವುದೇ ಕಛೇರಿ ಸಂಬಂಧಿತ ಆಡಳಿತ ಸಂಪರ್ಕಕ್ಕಾಗಿ ತಮ್ಮ ಬಳಿ ಕಡ್ಡಾಯವಾಗಿ ಇರಿಸಿಕೊಳ್ಳುವುದು.
  10. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನೀಡಿರುವ ಮಾಹಿತಿಯಲ್ಲಿ ಏನಾದರೂ ತಿದ್ದುಪಡಿ ಮಾಡಬೇಕಾದಲ್ಲಿ ಪರೀಕ್ಷಾ ಶುಲ್ಕ ಪಾವತಿಸುವುದಕ್ಕಿಂತ ಮೊದಲು ಮಾಡಬೇಕಾಗಿರುತ್ತದೆ. ನಂತರದಲ್ಲಿ ಯಾವುದೇ ತಿದ್ದುಪಡಿ ಬದಲಾವಣೆಗೆ ಅವಕಾಶವಿರುವುದಿಲ್ಲ.
  11. ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಯ ಮಾಹಿತಿಯಲ್ಲಿ ಯಾವುದೇ ವ್ಯತ್ಯಾಸವಿದ್ದಲ್ಲಿ ಅದರಿಂದ ಉಂಟಾಗುವ ಪರಿಣಾಮಗಳಿಗೆ ಅಭ್ಯರ್ಥಿಗಳೇ ಜವಾಬ್ದಾರರಾಗಿರುತ್ತಾರೆ.
    12 ಅಭ್ಯರ್ಥಿಗಳು ಒಮ್ಮೆ ಮಾಹಿತಿ ತುಂಬಿ ಅಂತಿಮವಾಗಿ ಅರ್ಜಿ ಸಲ್ಲಿಸಿದ ಮೇಲೆ ಯಾವುದೇ ತಿದ್ದುಪಡಿಗೆ ಹೊಸ ವಿವರಗಳನ್ನು ಅರ್ಜಿಯಲ್ಲಿ ಸೇರಿಸಲು ಅಥವಾ ತೆಗೆಯಲು ಅವಕಾಶವಿರುವುದಿಲ್ಲ. ಈ ಸಂಬಂಧ ಉದ್ಭವಿಸುವ ಸಮಸ್ಯೆಗಳಿಗೆ ಕೇಂದ್ರೀಕೃತ ದಾಖಲಾತಿ ಘಟಕವು ಜವಾಬ್ದಾರಿಯಾಗಿರುವುದಿಲ್ಲ.
  12. ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿನ ಅರ್ಹತೆಯು ಶಿಕ್ಷಕರ ನೇಮಕಾತಿಗೆ ಅಗತ್ಯವಾದ ಪ್ರವೇಶಾರ್ಹತೆಯೇ ಹೊರತು, ಅಭ್ಯರ್ಥಿಗಳು ನೇಮಕಾತಿಗೆ ಯಾವುದೇ ಹಕ್ಕನ್ನು ಚಲಾಯಿಸಲು ಅವಕಾಶವಿರುವುದಿಲ್ಲ.
    14, KARTET-2023 ಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಉಪಯೋಗದಲ್ಲಿರುವಂತಹ ತಮ್ಮ ಸ್ವಂತ ಮೊಬೈಲ್‌ನ ಸಂಪರ್ಕ ಸಂಖ್ಯೆಯನ್ನು ಹಾಗೂ ಇ-ಮೇಲ್ ಐಡಿಯನ್ನು ಆನ್‌ಲೈನ್‌ ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸುವುದು.
  13. ವೆಬ್‌ಸೈಟ್‌ನಲ್ಲಿ ನೀಡುವ ಹೆಚ್ಚುವರಿ ಮಾಹಿತಿಗಳನ್ನು ಪಡೆದುಕೊಳ್ಳಲು ಅಭ್ಯರ್ಥಿಗಳು ಆಗಿಂದಾಗ್ಗೆ ಇಲಾಖಾ ವೆಬ್‌ಸೈಟ್ www.schooleducation.kar.nic.in ವೀಕ್ಷಿಸುವುದು.

ಉದ್ಯೋಗ ಮತ್ತು ಇತರೆ ಮಾಹಿತಿಗಳು

ಕೃಷಿ ವಿಶ್ವವಿದ್ಯಾಲಯ ನೇಮಕಾತಿ 2023

Telegram Group Join Now
WhatsApp Group Join Now

Leave a Comment