ಸಣ್ಣ ವ್ಯಾಪಾರ ಆರಂಭಿಸಲು 50,000 ರೂ. ಸಾಲ ಮತ್ತು ಸಹಾಯಧನ | KMDC Sharma Shakti Loan Online Application

Telegram Group Join Now
WhatsApp Group Join Now

ನಮಸ್ಕಾರ ಸ್ನೇಹಿತರೇ.. ಸಣ್ಣ ವ್ಯಾಪಾರ ಆರಂಭಿಸಲು ಅಥವಾ ಅಭಿವೃದ್ಧಿಪಡಿಸಲು ಸಾಲ ಮತ್ತು ಸಹಾಯಧನ ಪಡೆಯಬೇಕೆ? ಸರ್ಕಾರದಿಂದ ಸಿಗುವ ಸಹಾಯಧನದ (KMDC Sharma Shakti Loan Online Application) ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿ ಹಾಗೂ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ.

ಅಲ್ಪಸಂಖ್ಯಾತ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ತಮ್ಮ ವ್ಯಾಪಾರವನ್ನು ಆರಂಭಿಸಲು ಅಥವಾ ಅಭಿವೃದ್ಧಿಪಡಿಸಲು ಶ್ರಮಶಕ್ತಿ ಸಾಲ ಯೋಜನೆಯ ಅಡಿಯಲ್ಲಿ ಸಾಲ ಮತ್ತು ಸಹಾಯಧನವನ್ನು ನೀಡಲಾಗುತ್ತದೆ. ಈ ಬಗ್ಗೆ ಮಾಹಿತಿಯನ್ನು ಈ ಕೇಳಗಿನಂತಿದೆ.

KMDC Sharma Shakti Loan Online Application

ಯೋಜನೆಯ ಹೆಸರು: ಶ್ರಮಶಕ್ತಿ ಸಾಲ ಯೋಜನೆ
ಸಹಾಯಧನ: ನಿಗಮದಿಂದ ಶೇ. 4 ರ ಬಡ್ಡಿದರದಲ್ಲಿ ರೂ. 50,000/-ದವರೆಗೆ ಸಾಲ ಸೌಲಭ್ಯ
ಅರ್ಜಿದಾರರ ವಯಸ್ಸು: 18 ರಿಂದ 55 ವರ್ಷ
ನಿಗಮದ ಹೆಸರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ

KMDC Sharma Shakti Loan ಯೋಜನೆಯ ವಿವರ:
ಶ್ರಮಶಕ್ತಿ ಸಾಲ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರಿಗೆ ತರಬೇತಿ ನೀಡಿ, ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸುವ ಸಲುವಾಗಿ ನಿಗಮದಿಂದ ಶೇ. 4 ರ ಬಡ್ಡಿ ದರದಲ್ಲಿ 50,000 ರೂ. ಯವರೆಗೆ ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ.

ಇದರಲ್ಲಿ, ಶೇ. 50ರಷ್ಟು ಸಾಲವನ್ನು 36 ತಿಂಗಳಿಲ್ಲಿ ಫಲಾನುಭವಿಯು ಮರುಪಾವತಿ ಮಾಡಿದಲ್ಲಿ, ಉಳಿದ ಶೇ. 50ರಷ್ಟು ಹಣವನ್ನು ‘ಬ್ಯಾಕ್‌ಎಂಡ್ ಸಹಾಯಧನ’ವನ್ನಾಗಿ ಪರಿಗಣಿಸಲಾಗುತ್ತದೆ. ಫಲಾನುಭವಿಯು ತಾನು ಪಡೆದ ಸಾಲವನ್ನು 36 ತಿಂಗಳೊಳಗಾಗಿ ಮರುಪಾವತಿ ಮಾಡಲು ವಿಫಲರಾದಲ್ಲಿ ಶೇ. 50 ರಷ್ಟು ಬ್ಯಾಕ್‌ಎಂಡ್ ಸಹಾಯಧನವನ್ನು ಸಹ ಸಾಲವೆಂದು ಪರಿಗಣಿಸಲಾಗುತ್ತದೆ.

KMDC Sharma Shakti Loan Scheme ಅರ್ಹತೆ:

  1. ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
  2. ಅರ್ಜಿದಾರ ಕರ್ನಾಟಕದ ಶಾಶ್ವತ ನಿವಾಸಿಯಾಗಿರಬೇಕು.
  3. ಅರ್ಜಿದಾರರು 18 ರಿಂದ 55 ವರ್ಷಗಳ ನಡುವಿನ ವಯೋಮಿತಿಯವರಾಗಿರಬೇಕು.
  4. ಕುಟುಂಬದ ವಾರ್ಷಿಕ ಆದಾಯ 3,50,000 ರೂ. ಗಿಂತ ಕಡಿಮೆ ಇರಬೇಕು. (ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಆದಾಯ)
  5. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.
  6. ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ ಅಥವಾ ಅವಳ ಕುಟುಂಬದ ಸದಸ್ಯರು ಸರ್ಕಾರದ ಅಥವಾ ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ (ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

KMDC Sharma Shakti Loan Scheme ದಾಖಲೆಗಳು:

  • ಯೋಜನಾ ವರದಿ
  • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ (Caste Certificate)
  • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ (Income Certificate)
  • ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಸ್ವಯಂ ಘೋಷಣೆ ಪತ್ರ
  • ಫಲಾನುಭವಿಯ ಇತ್ತೀಚಿನ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಆಯ್ಕೆ ಸಮಿತಿ:

  1. ಆಯಾ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರು – ಅಧ್ಯಕ್ಷರು
  2. ತಾಲ್ಲೂಕಿನಲ್ಲಿ ಖಾಯಂ ಆಗಿ ವಾಸಿಸುತ್ತಿರುವ ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು – ಸಹ ಅಧ್ಯಕ್ಷರು
  3. ಸಬಂಧಿಸಿದ ತಾಲ್ಲೂಕು ತಹಶೀಲ್ದಾರರು – ಸದಸ್ಯರು
  4. ಕಾರ್ಯನಿರ್ವಾಹಣಾಧಿಕಾರಿ ತಾಲ್ಲೂಕು ಪಂಚಾಯತ್-ಸದಸ್ಯರು
  5. ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ -ಸದಸ್ಯರು
  6. ಜಿಲ್ಲಾ ಜಂಟಿ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕೆ-ಸದಸ್ಯರು
  7. ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಸದಸ್ಯರು
  8. ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಸದಸ್ಯ ಕಾರ್ಯದರ್ಶಿ

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಲಿಂಕ್‌ನ್ನು ಕೇಳಗೆ ನೀಡಲಾಗಿದೆ.

Sharma Shakti Loan Scheme Online Application Link:
ಆನ್‌ಲೈನ್‌ ಅರ್ಜಿ ಲಿಂಕ್‌: ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ kmdc.karnataka.gov.in, kmdconline.karnataka.gov.in

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-10-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನವಾಗಿರುತ್ತದೆ.

ಇತರೆ ಮಾಹಿತಿಗಳನ್ನು ಓದಿ

ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ರೂ. ಸಾಲ ಸೌಲಭ್ಯ

ಶೇ.50% ಸಬ್ಸಿಡಿ: ವೃತ್ತಿ ಪ್ರೋತ್ಸಾಹ ಯೋಜನೆಗೆ ಆನ್‌ಲೈನ್‌ ಅರ್ಜಿ ಸಲ್ಲಿಸಿ

Education Loan: ವಿದ್ಯಾರ್ಥಿಗಳಿಗೆ 3 ಲಕ್ಷದವರೆಗೆ ಶೈಕ್ಷಣಿಕ ಸಾಲ ಯೋಜನೆ

ಉಚಿತ ಬೋರ್‌ವೇಲ್ ಯೋಜನೆ-ಆನ್‌ಲೈನ್‌ ಅರ್ಜಿ ಆಹ್ವಾನ

ವಾಹನ ಖರೀದಿಸಲು 3 ಲಕ್ಷ ಸಹಾಯಧನ, ಆನ್‌ಲೈನ್‌ ಅರ್ಜಿ ಸಲ್ಲಿಸಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣೆ

ಅನ್ನಭಾಗ್ಯ ಯೋಜನೆ: DBT Status ಚೆಕ್‌ ಮಾಡಿ

ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಮುಹೂರ್ತ ಫಿಕ್ಸ್, ಹೊಸ ದಿನಾಂಕ ನಿಗದಿ

ರೇಷನ್ ಕಾರ್ಡ್ Status ಅನ್ನು ಮೊಬೈಲ್‌ನಲ್ಲೇ ಚೆಕ್‌ ಮಾಡಿ

Telegram Group Join Now
WhatsApp Group Join Now

Leave a Comment