Civil PSI ಮರು ಪರೀಕ್ಷೆ ವೇಳಾಪಟ್ಟಿ ಮತ್ತು ಸೂಚನೆ ಪ್ರಕಟ | Civil PSI Exam Time Table 2023-24 Download @ kea.kar.nic.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಕರ್ನಾಟಕ ಪೊಲೀಸ್‌ ಇಲಾಖೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಯ ಮರು ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿ (Civil PSI Exam Time Table 2024) ಮತ್ತು ಸಂಕ್ಷಿಪ್ತ ಸೂಚನೆಗಳನ್ನು ಕರ್ನಾಟಕ ಪರೀಕ್ಷಾ ಪ್ರಧಿಕಾರದಿಂದ ಬಿಡುಗಡೆ ಮಾಡಲಾಗಿದೆ.

ನಿಮಗೆಲ್ಲ ತಿಳಿದಿರುವಂತೆ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು ಅದಕ್ಕಾಗಿ ಸ್ಪರ್ಧಾರ್ಥಿಗಳು ಮರು ಪರೀಕ್ಷೆ ನಡೆಸುವಂತೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ನ್ಯಾಯ ಕೋರಿ ಹೋಗಿದ್ದರು ಅದರಂತೆ ಕರ್ನಾಟಕ ಹೈಕೋರ್ಟ್‌ನ ಆದೇಶದಂತೆ ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಧಿಕಾರದಿಂದ ಮರು ಪರೀಕ್ಷೆಯನ್ನು ನಡೆಸುತ್ತಿದೆ.

ಅದರಂತೆ ಇದೇ ತಿಂಗಳು ಜನವರಿ 23 ರಂದು Civil PSI Exam Time Table 2024 ಅನ್ನು ಪ್ರಕಟಿಸಲಾಗಿದೆ. ಇದರೊಂದಿಗೆ ವಿವಿಧ ಸೂಚನೆಗಳನ್ನು ನೀಡಲಾಗಿದ್ದು, ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳು ಅವುಗಳನ್ನು ಪಾಲಿಸುವುದು ಅವಶ್ಯ.

Civil PSI Exam Time Table 2024

ದಿನಾಂಕವಿಷಯಸಮಯಅಂಕಗಳು
23-01-2024Paper-1ಬೆಳಿಗ್ಗೆ 10:30 ರಿಂದ ಮಧ್ಯಹ್ನ 12:00 ವರೆಗೆ50
23-01-2024Paper-2ಮಧ್ಯಾಹ್ನ 1:00 ರಿಂದ 2:30150

Civil PSI Exam: ಸಂಕ್ಷಿಪ್ತ ಸೂಚನೆಗಳು:

Civil PSI ನೇರ ನೇಮಕಾತಿಯ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಸಂಕ್ಷಿಪ್ತ ಸೂಚನೆಗಳು ಈ ಕೆಳಗಿನಂತೆ ನೀಡಲಾಗಿದೆ.

  • ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ.
  • ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್ / ಪಾಸ್‌ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ ಚೀಟಿ ಹಾಜರುಪಡಿಸಿದರೆ ಮಾತ್ರ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಬಿಡಲಾಗುವುದು.
  • ಮೊಬೈಲ್ ಗಳನ್ನು ನಿಷೇಧಿಸಲಾಗಿದ್ದು, ಮೊಬೈಲ್ ನಲ್ಲಿ ಗುರುತಿನ ಚೀಟಿಯನ್ನು ತೋರಿಸುವಂತಿಲ್ಲ ಮತ್ತು ಅಂತಹ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡುವುದಿಲ್ಲ.
  • ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್‌ಗಳು ಇಲ್ಲದೆ ಇರುವ ಶರಟುಗಳನ್ನು ಹಾಕಿಕೊಳ್ಳುವುದು.
  • ಯಾವುದೇ ತೆರನಾದ ಜೀನ್ಸ್ ಪ್ಯಾಂಟ್, ಬೆಲ್ಟ್, ಶೂ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಇರುವುದಿಲ್ಲ.
  • ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಳ್ಳುವಂತಹದನ್ನು ಧರಿಸಿ ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನೂ ಸಹ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.
  • ವಾಟರ್ ಬಾಟಲ್ ಗಳನ್ನು ಅನುಮತಿಸುವುದಿಲ್ಲ. ಪ್ರಾಧಿಕಾರದ ವೆಬ್‌ ಸೈಟಿನಲ್ಲಿ ಪ್ರಕಟಿಸಲಾಗುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಗೆ ಹೋಗಲು ಅನುಮತಿಸುವುದಿಲ್ಲ.
  • ಕಾಲ ಕಾಲಕ್ಕೆ ಪ್ರಾಧಿಕಾರದ ವೆಬ್‌ ಸೈಟಿನಲ್ಲಿ ಪ್ರಕಟಿಸಲಾಗುವ ಸೂಚನೆಗಳನ್ನು ಅಭ್ಯರ್ಥಿಗಳು ತಪ್ಪದೆ ಪಾಲಿಸತಕ್ಕದ್ದು.

ಪ್ರಮುಖ ಲಿಂಕ್‌ಗಳು
PSI Exam Time Table
: ಡೌನ್‌ಲೋಡ್‌ PDF
ಅಧಿಕೃತ ವೆಬ್‌ಸೈಟ್‌: kea.kar.nic.in

ಇತರೆ ಮಾಹಿತಿಗಳನ್ನು ಓದಿ

Labour Department Scholarship 2023

Telegram Group Join Now
WhatsApp Group Join Now

Leave a Comment