ಎಲ್ಲರಿಗೂ ನಮಸ್ಕಾರ, ನೀವು ಕೂಡ ಪಿಂಚಣಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬೇಕೆ..? ಯಾರಿಗೆ ಈ ಸೌಲಭ್ಯಗಳು ದೊರೆಯಲಿವೆ..? Labour Card Pension Scheme ಅರ್ಜಿ ಸಲ್ಲಿಕೆ ಹೇಗೆ..? ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತದೆ..? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
ರಾಜ್ಯದಲ್ಲಿನ 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯವನ್ನು ಕಾರ್ಮಿಕ ಇಲಾಖೆಯ ವತಿಯಿಂದ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ತನಗೆ 60 ವರ್ಷ ಪೂರ್ಣಗೊಳ್ಳುವ ಮೊದಲು ಕನಿಷ್ಠ 3 ವರ್ಷ ನಿರಂತರವಾಗಿ ಮಂಡಳಿಯ ಸದಸ್ಯತ್ವವನ್ನು ನವೀಕರಿಸಿ ಫಲಾನುಭವಿಯಾಗಿರಬೇಕು.
Labour Card Pension Scheme ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಮಂಡಳಿಯು ನೀಡಿರುವ ಗುರುತಿನ ಚೀಟಿ
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಬ್ಯಾಂಕ್ ಬುಕ್ ಪ್ರತಿ
- ಜೀವಿತ ಪ್ರಮಾಣಪತ್ರ (ಜೀವಿತ ಅವಧಿಯವರೆಗೆ ಪ್ರತಿ ವರ್ಷ ಸಲ್ಲಿಸುವುದು)
- ಉದ್ಯೋಗ ದೃಢೀಕರಣ ಪತ್ರ
- ಸ್ವಯಂ ದೃಢೀಕರಣ ಪತ್ರ
ಅರ್ಹ ಮತ್ತು ಆಸಕ್ತ ನೋಂದಾಯಿತ ಕಾರ್ಮಿಕರು ನಿಮ್ಮ ಹತ್ತಿರದ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಥವಾ ಆನ್’ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ ಸಂಖ್ಯೆ: 155214 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಇತರೆ ಮಾಹಿತಿ ಓದಿ:

