ವಿದ್ಯಾರ್ಥಿಗಳಿಗೆ 20 ಸಾವಿರ ರೂ. ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ | Labour Card Scholarship 2023 Apply Online @klwbapps.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಪಡೆಯಲು ನೇರವಾಗಲು ಕರ್ನಾಟಕ ರಾಜ್ಯ ಸರ್ಕಾರ ನೀಡುವ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯದ (Labour Card Scholarship 2023) ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಗುಣಮಟ್ಟದ ಶೈಕ್ಷಣಿಕ ಜೀವನಕ್ಕಾಗಿ ಈ ರೀತಿಯ ಸರ್ಕಾರದ ಪ್ರೋತ್ಸಾಹ ಧನ ಸಹಾಯವು ವಿದ್ಯಾರ್ಥಿಗಳಿಗೆ ತುಂಬ ಸಹಕಾರಿಯಾಗುತ್ತದೆ.

ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಗೆ ಯಾರು ಅರ್ಹರು, ಅರ್ಜಿ ಸಲ್ಲಿಕೆ ವಿಧಾನ, ಎಷ್ಟು ಪ್ರೋತ್ಸಾಹ ಧನ ಸಹಾಯ ನೀಡಲಾಗುತ್ತದೆ ಎಂಬ ಇತ್ಯಾದಿ ವಿವರಗಳನ್ನು ಇಲ್ಲಿ ಒದಗಿಸಲಾಗಿದೆ. ನೀವು ಸಂಪೂರ್ಣವಾಗಿ ಓದಿ ಸರ್ಕಾರದ ಈ ಯೋಜನೆಯ ಸೌಲಭ್ಯ ಪಡೆಯಿರಿ.

Labour Card Scholarship 2023 ಮಾಹಿತಿ

ಯೋಜನೆ ಹೆಸರು: ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ
ಪ್ರೋತ್ಸಾಹ ಧನ: ರೂ.6,000 ರಿಂದ ರೂ.20,000 ವರೆಗೆ
ಯಾರು ಅರ್ಹರು: ಪ್ರೌಢಶಾಲೆ, ಪಿಯುಸಿ/ಡಿಪ್ಲೊಮಾ/ಐಟಿಐ, ಪದವಿ, ಸ್ನಾತಕೋತ್ತರ ಪದವಿ, ಇಂಜಿನೀಯರಿಂಗ್/ವೈದ್ಯಕೀಯ ಓದುತ್ತಿರುವ ವಿದ್ಯಾರ್ಥಿಗಳು.

Karnataka Labour Welfare Board Scholarship 2023-24

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ ಅಥವಾ ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2023-24ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಆನ್‌ಲೈನ್‌ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಾರ್ಮಿಕರ ಮಾಸಿಕ ವೇತನ ರೂ. 35,000 ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು ಎಂದು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

klwbapps karnataka gov in Scholarship 2023 ಅರ್ಹತೆ:

  • ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಸಬಹುದು.
  • ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ವಿದ್ಯಾರ್ಥಿಯು ಶೇ.50 ಅಂಕ ಹಾಗೂ ಪ.ಜಾ/ಪ.ಪಂ ವಿದ್ಯಾರ್ಥಿಯು 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು.

ಶೈಕ್ಷಣಿಕ ಪ್ರೋತ್ಸಾಹ ಧನ ಮೊತ್ತ:
ವಿವಿಧ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಕೇಳಗಿನಂತೆ Educational Assistance ಮೊತ್ತ ನೀಡಲಾಗುತ್ತದೆ.

  • ಪ್ರೌಢಶಾಲೆಯ 8 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ 6,000 ರೂ. ಪ್ರೋತ್ಸಾಹ ಧನ
  • ಪಿಯುಸಿ, ಡಿಪ್ಲೊಮಾ, ಐಟಿಐ, ಟಿಸಿಹೆಚ್ ಇತ್ಯಾದಿ ವಿದ್ಯಾರ್ಥಿಗಳಿಗೆ 8,000 ರೂ.
  • ಪದವಿ ತರಗತಿ ವಿದ್ಯಾರ್ಥಿಗಳಿಗೆ 10,000 ರೂ.
  • ಸ್ನಾತಕೋತ್ತರ ಪದವಿ ತರಗತಿಗಳಿ ವಿದ್ಯಾರ್ಥಿಗಳಿಗೆ 12,000 ರೂ.
  • ಇಂಜಿನೀಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ 20,000 ರೂ. ಗಳ ಪ್ರೋತ್ಸಾಹ ಧನ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2024

Labour Department Scholarship 2023 ಪ್ರಮುಖ ಲಿಂಕ್‌ಗಳು:
klwbapps karnataka gov in Scholarship
ಅರ್ಜಿ ಸಲ್ಲಿಕೆ ಲಿಂಕ್:‌ Apply ಮಾಡಿ
ಅಧಿಕೃತ ವೆಬ್‌ಸೈಟ್‌ಗಳು: klwbapps.karnataka.gov.in, klwb.karnataka.gov.in

ಹೆಚ್ಚಿನ ಮಾಹಿತಿಗಾಗಿ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ 080-23475188, 8277291175, 8277120505. 9141585402, 9141602562 ಮೂಲಕ ಸಂಪರ್ಕಿಸಬಹುದು.

ಇತರೆ ಮಾಹಿತಿಗಳನ್ನು ಓದಿ

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

NSP ವಿದ್ಯಾರ್ಥಿವೇತನ 2024 ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ 2023, ಆನ್‌ಲೈನ್‌ ಅರ್ಜಿ ಆಹ್ವಾನ

ಉಚಿತ ಲ್ಯಾಪ್‍ಟ್ಯಾಪ್‍ ವಿತರಣೆ

ಉಚಿತ ಲ್ಯಾಪ್‌ಟಾಪ್‌ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ

Telegram Group Join Now
WhatsApp Group Join Now

3 thoughts on “ವಿದ್ಯಾರ್ಥಿಗಳಿಗೆ 20 ಸಾವಿರ ರೂ. ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ | Labour Card Scholarship 2023 Apply Online @klwbapps.karnataka.gov.in”

Leave a Comment