ನಮಸ್ಕಾರ ಸ್ನೇಹಿತರೇ.., ನೀವು ಸರ್ಕಾರದ ಸಹಾಯಧನದ ಮೂಲಕ ಜಮೀನ ಖರೀದಿ ಮಾಡಬೇಕೆ? ಕರ್ನಾಟಕ ಸರ್ಕಾರದ 25 ಲಕ್ಷ ರೂ., 20 ಲಕ್ಷ ರೂ. ಸಬ್ಸಿಡಿ ಮತ್ತು ಸಾಲಸೌಲಭ್ಯ ಪಡೆಯಬೇಕೇ? ಭೂ ಒಡೆತನ ಯೋಜನೆ (Land Purchase Scheme 2025) ಯ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಈ ಯೋಜನೆಯ ಬಗ್ಗೆ ಮಾಹಿತಿ ಪಡೆದು ಪ್ರಯೋಜನ ಪಡೆದುಕೊಳ್ಳಿ.
ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ತಮ್ಮ ವಾಸ ಸ್ಥಳದಿಂದ 10 ಕಿ.ಮೀ ವ್ಯಾಪ್ತಿಯೊಳಗೆ ಕೃಷಿಯೋಗ್ಯವಾದ 02 ಎಕರೆ ಖುಷ್ಕ ಅಥವಾ 01 ಎಕರೆ ತರಿ ಜಮೀನು ಖರೀದಿಸಲು ಸಹಾಯಧನ ಮತ್ತು ಸಾಲ ನೀಡಲಾಗುತ್ತದೆ. ಭೂ ಒಡೆತನ ಯೋಜನೆಯಡಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಿಗೆ ನಿಗದಿಪಡಿಸಿರುವ ಘಟಕ ವೆಚ್ಚ ರೂ. 25 ಲಕ್ಷ ಹಾಗೂ ಇನ್ನೂಳಿದ ಜಿಲ್ಲೆಗಳಿಗೆ ರೂ. 20 ಲಕ್ಷ ನೀಡಲಾಗುತ್ತದೆ. ಇದರಲ್ಲಿ ಶೇ 50% ರಷ್ಟು ಸಹಾಯಧನ ಮತ್ತು ಇನ್ನೂಳಿದ ಮೊತ್ತವು 4% ರ ಬಡ್ಡಿದರದಲ್ಲಿ ಸಾಲ ನೀಡುತ್ತಾರೆ.
Land Purchase Scheme 2025 Karnataka ಮಾಹಿತಿ:
ಯೋಜನೆಯ ಹೆಸರು: ಭೂ ಒಡೆತನ ಯೋಜನೆ (Land Purchase Scheme)
ಸಹಾಯಧನ ಮೊತ್ತ: 25 ಲಕ್ಷ ರೂ. ಹಾಗೂ 20 ಲಕ್ಷ ರೂ. ಇದರಲ್ಲಿ ಶೇ 50% ರಷ್ಟು ಸಹಾಯಧನ ಮತ್ತು ಶೇ 50% ಸಾಲ ಸೌಲಭ್ಯ
Land Purchase Scheme ಬೇಕಾಗುವ ದಾಖಲೆಗಳು:
- ಭಾವಚಿತ್ರ
- ಜಾತಿ ಪ್ರಮಾಣಪತ್ರ (Caste Certificate)
- ಆದಾಯ ಪ್ರಮಾಣಪತ್ರ (Income Certificate)
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
- ಕೃಷಿ ಕಾರ್ಮಿಕರ ದೃಡೀಕರಣ ಪತ್ರ
Bhoo Odetana Yojane Karnataka 2025: ಯಾರು ಅರ್ಜಿ ಸಲ್ಲಿಸಬಹುದು?
ಭೂ ಒಡೆತನ ಯೋಜನೆಗೆ ಈ ಕೆಳಗಿನ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ,
- ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,
- ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ,
- ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ,
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗದು,
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ.
- ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
- ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ
2025-2026 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
Land Purchase Scheme 2025 Karnataka ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೇವಾ ಸಿಂಧು ಪೊರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಲಿಂಕ್‌ನ್ನು ಕೇಳಗೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
- ಸಮಾಜ ಕಲ್ಯಾಣ ಇಲಾಖೆ ಅರ್ಜಿ ಸಲ್ಲಿಕೆ ಆರಂಭ: 07-08-2025
- ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅರ್ಜಿ ಸಲ್ಲಿಕೆ ಆರಂಭ: 18-08-2025
- ಸಮಾಜ ಕಲ್ಯಾಣ ಇಲಾಖೆ ಯೋಜನೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-09-2025
- ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಯೋಜನೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-09-2025
Bhoo Odethana Yojane Karnataka 2025 Application Link:
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: sevasindhu.karnataka.gov.in
2023-24 ಮತ್ತು 2024-25 ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ವಿಷೇಶ ಸೂಚನೆಗಳು:
- ನಿಗಮದ ನಿರ್ದೇಶಕ ಮಂಡಳಿ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾಸಿಂಧು ಪೊರ್ಟಲ್ ಮೂಲಕವೇ ಸಲ್ಲಿಸುವುದು.
- ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
- ಫಲಾಪೇಕ್ಷಿಗಳು ‘ಗ್ರಾಮ ಒನ್ʼ, ʼಬೆಂಗಳೂರು ಒನ್ʼ, ʼಕರ್ನಾಟಕ ಒನ್ʼ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಛೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ 9482-300-400 ಗೆ ಸಂಪರ್ಕಿಸಬಹುದು.
ಇತರೆ ಮಾಹಿತಿಗಳನ್ನು ಓದಿ

