ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್ (New Ration Card) ಅರ್ಜಿ ಸಲ್ಲಿಕೆ ಕುರಿತು ಹೊಸ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಅರ್ಹ ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿ ನೀಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲು ನಿರ್ಧರಿಸಲಾಗಿತ್ತು.
ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 03-12-2023 ರಂದು ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು, ಆದರೆ ತಾಂತ್ರಿಕ ದೋಷದ ಕಾರಣದಿಂದಾಗಿ ಈ ಸೇವೆಗಳು ಲಭ್ಯವಿರುವುದಿಲ್ಲ ಎಂದು ಇಲಾಖೆಯು ಪತ್ರಿಕಾ ಪ್ರಕಟಣೆ ತಿಳಿಸಿದೆ.
New Ration Card Application Not Accepting
ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಕೂಡ ಅವಕಾಶ ನೀಡಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ ಮುಂದೂಡಲಾಗಿದೆ.
ಅರ್ಹ ಫಲಾನುಭವಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯ ಪಡೆಯು ನಿರೀಕ್ಷೆಯಲ್ಲಿದ್ದರು. ಆದರೇನು ಮಾಡುವುದು ಅವರಿಗೆ ಸದ್ಯಕ್ಕೆ ನಿರಾಶೆ ಒಂದೆ ಮುಂದಿದೆ. ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಆಹಾರ ಇಲಾಖೆ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.
ಚುನಾವಣೆ ಕಾರಣದಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರೀಯೆ ಸ್ಥಗಿತ ಮಾಡಲಾಗಿತ್ತು. ಇನ್ನೇನು ಅರ್ಜಿ ಕರೆಯುತ್ತಾರೆ ಎನ್ನುವ ಹೊತ್ತಿಗೆ ತಾಂತ್ರಿಕ ಕಾರಣದಿಂದಾಗಿ ಪ್ರಕ್ರೀಯೆಯನ್ನು ಮುಂದುಡಲಾಗಿದೆ.
ಹಲಾವಾರು ಅರ್ಹ ಫಲಾನುಭವಿಗಳು ರೇಷನ್ ಕಾರ್ಡ್ ಇಲ್ಲದ ಕಾರಣ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲಾಗಿಲ್ಲ.

ಇತರೆ ಮಾಹಿತಿಗಳನ್ನು ಓದಿ