PM Awas Yojana: 3 ಕೋಟಿ ಮನೆಗಳ ನಿರ್ಮಾಣ, ಮೋದಿ ಸರ್ಕಾರ ತೀರ್ಮಾನ

ಎಲ್ಲರಿಗೂ ನಮಸ್ಕಾರ, ಒಂದು ಸ್ವಂತ ಮನೆ ಇರಬೇಕು ಎನ್ನುವುದು ಎಲ್ಲರ ಕನಸು. ನೀವೆನಾದರು ಮನೆ ಕಟ್ಟಲು ಬಯಸಿದರೆ ಸರ್ಕಾರದ ಈ ಯೋಜನೆಯ (PM Awas Yojana) ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಓದಿರಿ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 2015 ರಲ್ಲಿ ಜಾರಿಗೆ ತರಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಬಡವರು ಸ್ವಂತ ಮನೆಯನ್ನು ಹೊಂದುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

PM Awas Yojana Karnataka:

ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಸಚಿವ ಸಂಪುಟ ಸಭೆ ನಡೆಸಿ, ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ.

ಪ್ರಧಾನಮಂತ್ರಿ ಆವಾಸ್‌ ಯೋಜನೆ (Pradhan Mantri Awas Yojana-PMAY) ಅಡಿಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಧನ ಸಹಾಯವನ್ನು ಸರ್ಕಾರ ನೀಡುತ್ತದೆ. ಬಯಲು ಪ್ರದೇಶದಲ್ಲಿ ಮನೆ ಕಟ್ಟಲು 1.20 ಲಕ್ಷ ರೂ. ನೀಡಲಾಗುತ್ತದೆ. ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.30 ಲಕ್ಷ ರೂ. ಸಹಾಯಧನ ಈ ಯೋಜನೆಯ ಮೂಲಕ ನೀಡಲಾಗುತ್ತದೆ.

ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಇಚ್ಛೆಯಿರುವ ಫಲಾನುಭವಿಗಳು ಅಧಿಕೃತ pmaymis.gov.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಆನ್‌ಲೈನ್‌ ಸೇವಾ ಕೇಂದ್ರಗಳಲ್ಲಿ ಅರ್ಜಿ ಭರ್ತಿ ಮಾಡಬಹುದು.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮಿ DBT Status Check ಮಾಡಿ

PM Kisan: ಪಿಎಂ ಕಿಸಾನ್ ಸಮ್ಮಾನ ನಿಧಿ 17 ನೇ ಕಂತಿನ ಹಣ ಬಿಡುಗಡೆ

ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟು ಗೊತ್ತಾ?

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment