ಪಿಎಂ ಕಿಸಾನ್‌ ಯೋಜನೆಯ 12ನೇ ಕಂತಿನ ಹಣ ಬಿಡುಗಡೆ | PM Kisan 12th Installment Released

ರೈತರಿಗೆ ಆರ್ಥಿಕವಾಗಿ ಸಹಾಯವಾಗುವ ನಿಟ್ಟಿನಲ್ಲಿ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ (PM Kisan 12th installment) ಅಡಿ ನೀಡಲಾಗುವ 2,000 ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ (PM Kisan Samman Sammelan) ಚಾಲನೆ ನೀಡಿ, ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಿದರು. ಈ ಕಂತಿನಲ್ಲಿ ಸುಮಾರು 8 ಕೋಟಿ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಗಂಗಾ ಕಲ್ಯಾಣ ಯೋಜನೆ 2023 ಆನ್‌ಲೈನ್ ಅರ್ಜಿ ಆಹ್ವಾನ

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 12ನೇ ಕಂತಿನ ಹಣ ಜಮೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ ರೂ. 6000 ಸಹಾಯಧನವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. 12ನೇ ಕಂತಿನ ಹಣವನ್ನು ಅ.17 ರಂದು ಬಿಡುಗಡೆ ಮಾಡಲಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಕೇಂದ್ರ ಸರ್ಕಾರದ (Govt Schemes) ಯೋಜನೆಯಾಗಿದ್ದು, ಶೇಕಡಾ 100 ರಷ್ಟು ಹಣಕಾಸು ಅನುದಾನವನ್ನು ಭಾರತ ಸರ್ಕಾರವೇ ಭರಿಸುತ್ತದೆ. 2018 ರ ಡಿಸೆಂಬರ್ 1 ರಂದು ಈ ಯೋಜನೆಯನ್ನು ಆರಂಭಿಸಲಾಗಿದ್ದು, ಈ ಯೋಜನೆಯಡಿ 2 ಹೆಕ್ಟೇರ್​ ತನಕ ಒಟ್ಟಾರೆಯಾಗಿ ಭೂಮಿ ಇರುವ ಅಥವಾ ಮಾಲೀಕತ್ವ ಹೊಂದಿರುವ ಸಣ್ಣ ಹಾಗೂ ಕಿರು ರೈತರ ಕುಟುಂಬಗಳಿಗೆ ವಾರ್ಷಿಕವಾಗಿ 6000 ರೂಪಾಯಿಯನ್ನು ತಲಾ 2 ಸಾವಿರದಂತೆ ಮೂರು ಕಂತಿನಲ್ಲಿ ಪಾವತಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿ ರೈತರ ಬ್ಯಾಂಕ್​ ಖಾತೆಗೆ ಸರ್ಕಾರ ವರ್ಗಾವಣೆ ಮಾಡುತ್ತದೆ.

PM Kisan 12th installment ಪರಿಶೀಲನೆ ಮಾಡುವ ವಿಧಾನ

  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ – pmkisan.gov.in
  2. ‘Beneficiary Status’ ಆಯ್ಕೆಯನ್ನು ಕ್ಲಿಕ್ ಮಾಡಬೇಕು.
  3. ಇಲ್ಲಿ ಹೊಸ ಪುಟ ತೆರೆಯುತ್ತದೆ.
  4. ನಿಮ್ಮ Mobile Number ಅಥವಾ Registration Number ಇದರಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿ.
  5. ನಿಮ್ಮ ಖಾತೆಗೆ ಹಣ ಬರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಈ 2 ಸಂಖ್ಯೆಗಳ ಮೂಲಕ ಪರಿಶೀಲಿಸಬಹುದು.
  6. ಈ ಎರಡರ ಸಂಖ್ಯೆಯನ್ನು ನಮೂದಿಸಿ, ನೀವು ‘Get Data’ ಮೇಲೆ ಕ್ಲಿಕ್ ಮಾಡಿ
  7. ಅಲ್ಲಿ ಎಲ್ಲಾ ಮಾಹಿತಿಯನ್ನು ಪಡೆಯಬಹುದು
  8. “Beneficiary List” ಆಯ್ಕೆ ಮಾಡಿ ನಿಮ್ಮ ಊರಿನ ಹೆಸರು ನಮೂದಿಸಿ ನಿಮ್ಮ ಊರಿನ PM Kisan 12th installment List ಪಡೆಯಬಹುದು.

Leave a Comment