PM Kisan 20th Installment: PM ಕಿಸಾನ್ 20 ನೇ ಕಂತಿನ ಹಣ ಜಮಾ, ನಿಮ್ಮ ಖಾತೆಗೆ ಬಂತಾ ನೋಡಿ

PM Kisan 20th Installment 2025: ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್, ನೀವು ಕೂಡ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20 ನೇ ಕಂತಿನ ಹಣ ಯಾವಾಗ ನಿಮ್ಮ‌ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂಬ ಕಾಯುತ್ತಿದ್ದೀರಾ..? ಹಾಗಿದ್ದರೆ ಈ ಲೇಖನ ಓದಿರಿ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಇದುವರೆಗೂ ಕೋಟ್ಯಾಂತರ ರೈತರು ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಯಾರು ಇದುವರೆಗೂ PM ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿಲ್ಲ‌ ಅಂತವರು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ವಾರ್ಷಿಕವಾಗಿ 6,000 ರೂ. ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾರೆ. ಈ ಯೋಜನೆಯ ಹಣವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ಅಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾರೆ.

PM Kisan 20th Installment Amount Credited:

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತಿನ ಹಣವನ್ನು ಆಗಸ್ಟ್ 2 ರಂದು ಉತ್ತರ ಪ್ರದೇಶದ ವಾರಾಣಸಿಯ ಬನೌಲಿ, ಸೇವಾಪುರಿ ಎಂಬಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದ್ದಾರೆ. 9.7 ಕೋಟಿಗೂ ಅಧಿಕ ರೈತರ ಖಾತೆಗಳಿಗೆ 20 ನೇ ಕಂತಿನ ಹಣವು ವರ್ಗಾವಣೆ ಆಗಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿನ ಹಣವನ್ನು ಫೆಬ್ರವರಿ 24 ರಂದು ಬಿಹಾರದ ಭಾಗಲ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದ್ದರು.

ಯಾರು PM ಕಿಸಾನ್ ಯೋಜನೆಗೆ eKYC ಮಾಡಿಸಿಕೊಂಡಿರುವುದಿಲ್ಲ ಅಂತವರು ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಿ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಆಗಿದೆಯಾ ಎಂಬುದನ್ನು ಚೆಕ್ ಮಾಡಿಸಿಕೊಳ್ಳಿ. ಒಂದು ವೇಳೆ ಆಧಾರ್ ಲಿಂಕ್ ಆಗದಿದ್ದರೆ ಕೂಡಲೇ ಲಿಂಕ ಮಾಡಿಸಿಕೊಳ್ಳಬೇಕು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ eKYC ಅನ್ನು ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್‌ ನಲ್ಲಿ ಕೆವೈಸಿ ಮಾಡಿಕೊಳ್ಳಬಹುದು. ಅಥವಾ ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ (CSC) ಭೇಟಿ ನೀಡಿ eKYC ಮಾಡಿಸಿಕೊಳ್ಳಬಹುದು.

ಸರ್ಕಾರ ಇತರೆ ಯೋಜನೆಗಳು:

ಉಚಿತ ಹೊಲಿಗೆ ಯಂತ್ರ ಯೋಜನೆ, ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ: ಸರ್ಕಾರದಿಂದ 5,000 ರೂ. ಪ್ರೋತ್ಸಾಹ ಧನ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment