ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 8000 ಪೊಲೀಸ್ ಕಾನ್ಸ್ಟೇಬಲ್ ಹಾಗೂ ಒಂದು ಸಾವಿರ PSI ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ (Police Recruitment 2025) ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 500 PSI ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರೆಲ್ಲ ತರಬೇತಿ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ 8,000 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು, ಆದ್ಯತೆಯ ಮೇರೆಗೆ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಹೆಚ್ಚುವರಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಸೇರಿದಂತೆ ಇನ್ನಿತರ ಕಾರ್ಯಚಟುವಟಿಕೆಗಳಿಗೆ ಮುಂದಿನ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 8,000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು, ಆಯಾ ಜಿಲ್ಲೆಯಲ್ಲಿ ಎಷ್ಟು ಪೊಲೀಸ್ ಸಿಬ್ಬಂದಿ ಕೊರತೆ ಇದೆ ಎನ್ನುವುದರ ವರದಿ ಪಡೆಯಲಾಗಿದೆ. ಆದ್ಯತೆಯ ಮೇರೆಗೆ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇತರೆ ಮಾಹಿತಿಗಳು:

