ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | RDPR Recruitment 2023 Notification For Business Analyst Post

Telegram Group Join Now
WhatsApp Group Join Now

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಶಾಖೆಯ ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಾಗಿ ಪ್ರಕಟಣೆ (RDPR Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೋಲ್ ಇಂಡಿಯಾ ನೇಮಕಾತಿ 2023

10th Pass ಆದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

RDPR Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
ವೇತನ ಶ್ರೇಣಿ: 50,000/-
ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆ ಹೆಸರು ಮತ್ತು ವೇತನ ಶ್ರೇಣಿ:
Business Analyst:
50,000/- ಮಾಸಿಕ ಸಂಭಾವನೆ ನಿಗದಿ ಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ:
RDPR ಪ್ರಕಟಣೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ BE/B.Tech/MCA/MSc (Computer Science/Information Science)/MBA (Fulltime degree) ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಯು ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು. (Resume) ಅರ್ಜಿಯನ್ನು ನಿರ್ದೇಶಕರು, ಇ-ಆಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ, 2 ನೇ ಮಹಡಿ, 3ನೇ ಹಂತ, ಬಹುಮಹಡಿ ಕಟ್ಟಡ, ಬೆಂಗಳೂರು-560001 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ: 14-08-2023 ರ ಸಂಜೆ 5:30 ಗಂಟೆಯೊಳಗೆ ಸಲ್ಲಿಸಬೇಕು, ನಂತರ ಬಂದಂತಹ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. (ಅರ್ಜಿಯ ನಮೂನೆ & TOR ಪ್ರತಿ RDPR (ನೇಮಕಾತಿ ಲಿಂಕ್)ನಲ್ಲಿ ಲಭ್ಯವಿರುತ್ತದೆ.

RDPR Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-08-2023

RDPR Recruitment 2023 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಪತ್ರಿಕಾ ಪ್ರಟಕಣೆ: ಡೌನ್’ಲೋಡ್
ಅಧಿಕೃತ ವೆಬ್ʼಸೈಟ್: rdpr.karnataka.gov.in
ಅನುಭವ ಮತ್ತು ಇತರೆ ಮಾಹಿತಿಯನ್ನು ಪ್ರಕಟಣೆಯಲ್ಲಿ ನೀಡಲಾಗಿದೆ ಓದಿ ಅರ್ಜಿ ಸಲ್ಲಿಸಿ.

ಷರತ್ತುಗಳ ಮತ್ತು ಇತರೆ ಮಾಹಿತಿ:

  1. ಗುತ್ತಿಗೆಯ ಅಥವಾ ಹೊರಗುತ್ತಿಗೆ ಅವಧಿ: ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಹೊರಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ನವೀಕರೀಸಲಾಗುವುದು, ಒಂದೊಮ್ಮೆ ಅಭ್ಯರ್ಥಿಯ ಕಾರ್ಯಕ್ಷಮತೆ ನಿರೀಕ್ಷಿತ ಮಟ್ಟದಲ್ಲಿ, ಇಲ್ಲದಿದ್ದರೆ ಅಂತಹ ಅಭ್ಯರ್ಥಿಗಳ ಕರಾರು ಒಪ್ಪಂದವನ್ನು ಒಂದು ತಿಂಗಳ ನೋಟೀಸ್‌ ನೀಡಿ ರದ್ದುಪಡಿಸಲಾಗುವುದು.
  2. ವಯೋಮಾನ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.
  3. ಸ್ನಾತಕ/ಸ್ನಾತಕೋತ್ತರ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪಡೆದಿದ್ದರೆ. ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
  4. ಆಯ್ಕೆಯಾದ ಅಭ್ಯರ್ಥಿಯು ಹೊರಗುತ್ತಿಗೆ ಸಂಸ್ಥೆಯೊಂದಿಗೆ ನಿಗದಿತ ನಮೂನೆಯಲ್ಲಿ ಕರಾರು ಒಪ್ಪಂದವನ್ನು ಮಾಡಿಕೊಳ್ಳಬೇಕು ಹಾಗೂ ಕಾರ್ಯಾನುಭವದ ಆಧಾರದ ಮೇಲೆ ಮಾಸಿಕ ಸಮಾಲೋಚನಾ ಶುಲ ನಿಗದಿಪಡಿಸಲಾಗುವುದು.
  5. ಕರಾರು ಒಪ್ಪಂದ ಮಾಡಿಕೊಂಡ ಅಭ್ಯರ್ಥಿಗೆ ಇಲಾಖೆಯಲಿನ ಯಾವುದೇ ಹುದ್ದೆಗಳಲ್ಲಿ ವಿಲೀನಗೊಳ್ಳಲು/ಮುಂದುವರೆಸಲು ಯಾವುದೇ ಹಕ್ಕು ಇರುವುದಿಲ್ಲ.
  6. ಕಿರುಪಟ್ಟಿ ಮಾಡಿದ ಅಭ್ಯರ್ಥಿಗಳಿಗೆ (Shortlisted candidates) ಅವರುಗಳಿಗೆ ಮಾತ್ರ ದೂರವಾಣಿ ಮುಖಾಂತರ ತಿಳಿಸಲಾಗುವುದು.
  7. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿಯಲ್ಲಿ ನೇರ ಸಂದರ್ಶನ ಅಥವಾ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು,
  8. ನೇಮಕಾತಿಯನ್ನು ಪೂರ್ಣವಾಗಿ ಮತ್ತು ಭಾಗಶ: ರದ್ದು ಮಾಡುವ/ಮುಂದೂಡುವ/ಬದಲಾವಣೆ ಮಾಡುವ ಹಕ್ಕನ್ನು ಇಲಾಖೆಯು ಹೊಂದಿರುತ್ತದೆ.

Telegram Group Join Now
WhatsApp Group Join Now

Leave a Comment