ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗಾಗಿ ಅರ್ಜಿ ಆಹ್ವಾನ | Savitha Samaja Abhivrudhi Nigama Loan Scheme 2023 @kssd.karnataka.gov.in

Telegram Group Join Now
WhatsApp Group Join Now

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ (Savitha Samaja Abhivrudhi Nigama Loan Scheme) ದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಸಕಇ/225/ಬಿಸಿಎ/2000 ದಿನಾಂಕ: 30/03/2002 ರನ್ವಯ ಸವಿತಾ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಹ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

Savitha Samaja Abhivrudhi Nigama Loan Schemes

ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು:
1) ಸ್ವಯಂ ಉದ್ಯೋಗ ನೇರ ಸಾಲ ಯೋಜನೆ
2) ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಟ 2 ಎಕರೆ ಹೊಂದಿರಬೇಕು.
3) ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸತು)
4) ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ.
5) ಸ್ವಾವಲಂಬಿ ಸಾರಥಿ ಯೋಜನೆ
6) ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ)

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು

  1. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  2. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಸಕಇ/225/ಬಿಸಿಎ/2000 ದಿನಾಂಕ: 30/03/2002 ರನ್ವಯ ಸವಿತಾ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು.
  3. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
  4. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
  5. ನಿಗಮದ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
  6. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
  7. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50/-ಲಕ್ಷಗಳು,
  8. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು,
  9. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.
  10. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000 ಮಿತಿಯೊಳಗಿರಬೇಕು. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಯೋಜನೆಯಲ್ಲಿ ಅರ್ಜಿಸಲ್ಲಿಸುವವರ ವಾರ್ಷಿಕ ವರಮಾನವು ರೂ.8 ಲಕ್ಷಗಳ ಮಿತಿಯಲ್ಲಿರಬೇಕು.
  11. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಿದೆ.

Savitha Samaja Abhivrudhi Nigama Loan Scheme 2023 Application Link:
ಆನ್‌ಲೈನ್‌ ಅರ್ಜಿ ಲಿಂಕ್‌:
ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ kssd.karnataka.gov.in, https://sevasindhu.karnataka.gov.in

Savitha Samaja Abhivrudhi Nigama Loan Scheme 2023 2023 Last Date:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/11/2023. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ)

ಸೂಚನೆಗಳು:

  • ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‌ನಲ್ಲಿರುವಂತೆ ಆರ್ಜಿದಾರರ ಹೆಸರು ವಿಳಾಸ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್‌ ಪಾಸ್‌ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳು)
  • ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ ಲೈನ್‌ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.
  • ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್: www.kssd.karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ/ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಯಿಂದ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಗಳಲ್ಲಿ ಪೂರ್ವಾಹ್ನ 10.00 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.
  • ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 03.11.2023 ಆಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಇತರೆ ಮಾಹಿತಿಗಳನ್ನು ಓದಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆ ಬಂದಿಲ್ಲವೇ


Telegram Group Join Now
WhatsApp Group Join Now

Leave a Comment