SC ST ಸಬ್ಸಿಡಿ ಯೋಜನೆ: ಅರ್ಜಿ ಸಲ್ಲಿಕೆಗೆ ನಾಳೆ ಕೊನೆ ದಿನ | SC ST Subsidy Loan Scheme in Karnataka 2023 Apply Online, Last Date

Telegram Group Join Now
WhatsApp Group Join Now

ನಮಸ್ಕಾರ ಎಲ್ಲರಿಗೂ, ನೀವು ಕೂಡ SC ST Subsidy Loan Scheme 2023 ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ? ಕರ್ನಾಟಕ ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ಈ ಕೇಳಗಿನ ಕಲ್ಯಾಣ ಯೋಜನೆಗಳಿಗಾಗಿ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಬಹು ದಿನಗಳಿಂದ SC ST Loan Scheme ಗಳಿಗೆ ಅರ್ಜಿ ಸಲ್ಲಿಕೆ ಆರಂಭದ ನಿರೀಕ್ಷೆಯಲ್ಲಿದ್ದೀರಿ. ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೂಲಕ ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಕ್ರೀಯೆ ಆರಂಭವಾಗಿದೆ.

SC ST Subsidy Loan Scheme in Karnataka 2023

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ 2023-2024ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಈ ಕೆಳಕಂಡ ಕಲ್ಯಾಣ (SC/ST Subsidy Loan) ಯೋಜನೆಗಳಿಗಾಗಿ ಅರ್ಜಿ ಕರೆಯಲಾಗಿದೆ.

  • ಸ್ವಾವಲಂಬಿ ಸಾರಥಿ ಯೋಜನೆ
  • ಸ್ವಯಂ ಉದ್ಯೋಗ ನೇರಸಾಲ ಯೋಜನೆ
  • ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ
  • ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ
  • ಭೂ ಒಡೆತನ ಯೋಜನೆ
  • ಗಂಗಾ ಕಲ್ಯಾಣ ಯೋಜನೆ

ಸ್ವಯಂ ಉದ್ಯೋಗ ನೇರಸಾಲ ಯೋಜನೆ:
ಈ ಯೋಜನೆಯ ಅಡಿಯಲ್ಲಿ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡುತ್ತಾರೆ.
ಘಟಕದ ವೆಚ್ಚ 1 ಲಕ್ಷ ರೂ.
ಸಹಾಯಧನ: 50,000 ರೂ.
ಸಾಲ: 50,000 ರೂ. (ಶೇಕಡ 4 ರಷ್ಟು ಬಡ್ಡಿದರ)
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ) & ಇತರೆ ಉದ್ದೇಶ:
ವ್ಯಾಪಾರ ಮತ್ತು ಇತರ ಉದ್ಯಮಗಳಿಗೆ ಈ ಕೆಳಗಿನ ಸಹಾಯಧನ ನೀಡುತ್ತಾರೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.

  • ಘಟಕ ವೆಚ್ಚದ ಶೇ 70 ರಷ್ಟು ಸಹಾಯಧನ ಅಥವಾ ಗರಿಷ್ಠ 1 ಲಕ್ಷ ರೂ.
  • ಘಟಕ ವೆಚ್ಚದ ಶೇ. 70 ರಷ್ಟು ಸಹಾಯಧನ ಅಥವಾ ಗರಿಷ್ಟ 2 ಲಕ್ಷ ರೂ.

ಸ್ವಾವಲಂಬಿ ಸಾರಥಿ- Car Loan Subsidy For SC/ST:
ಸರಕು ವಾಹನ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸಲು
ಘಟಕ ವೆಚ್ಚದ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 4 ಲಕ್ಷ ನೀಡುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ:
ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡುತ್ತಾರೆ.

  • ಘಟಕ ವೆಚ್ಚ: 2.50 ಲಕ್ಷ ರೂ.
  • ಸಹಾಯಧನ: 1.50 ಲಕ್ಷ ರೂ.
  • ಸಾಲ: ರೂ. 1 ಲಕ್ಷ (ಶೇಕಡ 4 ರಷ್ಟು ಬಡ್ಡಿ ದರ)
    ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಭೂ ಒಡೆತನ ಯೋಜನೆ:
ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ಸಹಾಯಧನ ನೀಡುತ್ತಾರೆ.

  • ಘಟಕ ವೆಚ್ಚ: 25 ಲಕ್ಷ ರೂ. / 20 ಲಕ್ಷ ರೂ.
  • ಸಹಾಯಧನ: ಶೇ. 50
  • ಸಾಲ: ಶೇ. 50% (ಶೇ 6 ರಷ್ಟು ಬಡ್ಡಿ ದರ)
    ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಗಂಗಾ ಕಲ್ಯಾಣ ಯೋಜನೆ: 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್‌ಸೆಟ್ ಅಳವಡಿಸಿ ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸುವುದು.

  • ಘಟಕ ವೆಚ್ಚ: 4.75 ಲಕ್ಷ ರೂ. / 3.75 ಲಕ್ಷ ರೂ.
  • ಇದರಲ್ಲಿ ರೂ. 50,000/- ಸಾಲವೂ ಇರುತ್ತದೆ.

SC ST Subsidy Loan Scheme 2023 ಗಳಿಗೆ ಯಾರು ಅರ್ಹರು?

ಈ ಕೇಳಗಿನ ಅಭಿವೃದ್ಧಿ ನಿಗಮಗಳ ಅಡಿಯಲ್ಲಿ ಬರುವಸಮುದಾಯದವರು ಅರ್ಜಿ ಸಲ್ಲಿಸಬಹುದು.

  • ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
  • ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
  • ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ
  • ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
  • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗದು
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ
  • ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ

ಪ್ರಮುಖ ದಿನಾಂಕಗಳು:
ಈ ಎಲ್ಲ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-12-2023 ಆಗಿರುತ್ತದೆ.

SC ST Subsidy Loan Scheme 2023 Application Link:
ಆನ್‌ಲೈನ್‌ ಅರ್ಜಿ ಲಿಂಕ್‌:
ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ sevasindhu.karnataka.gov.in

ವಿಶೇಷ ಸೂಚನೆ: ನಿಗಮದ ನಿರ್ದೇಶಕ ಮಂಡಳಿ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾಸಿಂಧು ಪೊರ್ಟಲ್ ಮೂಲಕವೇ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಛೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ SC/ST ಸಹಾಯವಾಣಿ 9482300400 ಸಂರ್ಪಕಿಸುವುದು.

SC ST Subsidy Loan Scheme FAQ:

SC ST Subsidy Loan Scheme in Karnataka Last Date:
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳಿಗೆ ಅರ್ಜಿ ಸಲ್ಲಿಸಲು 30-12-2023 ಕೊನೆಯ ದಿನವಾಗಿರುತ್ತದೆ.

How To Apply For SC ST Subsidy Loan Scheme 2023
ಅರ್ಹರು ಅಗತ್ಯ ದಾಖಲೆಗಳೊಂದಿಗೆ ಸೇವಾ ಸಿಂಧು ಪೊರ್ಟಲ್ ಮೂಲಕ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು. ಅಥವಾ ‘ಗ್ರಾಮ ಒನ್ʼ, ʼಬೆಂಗಳೂರು ಒನ್ʼ, ʼಕರ್ನಾಟಕ ಒನ್ʼ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

SC ST ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

IAS KAS Free Coaching ಆನ್‌ಲೈನ್‌ ಅರ್ಜಿ ಆಹ್ವಾನ

New Ration Card: ಹೊಸ ರೇಷನ್‌ ಕಾರ್ಡ್‌ ವಿತರಣೆ; ಸರ್ಕಾರದಿಂದ ಗುಡ್‌ ನ್ಯೂಸ್

Telegram Group Join Now
WhatsApp Group Join Now

1 thought on “SC ST ಸಬ್ಸಿಡಿ ಯೋಜನೆ: ಅರ್ಜಿ ಸಲ್ಲಿಕೆಗೆ ನಾಳೆ ಕೊನೆ ದಿನ | SC ST Subsidy Loan Scheme in Karnataka 2023 Apply Online, Last Date”

Leave a Comment